
ಇಂದೋರ್[ನ.14]: ಟೀಂ ಇಂಡಿಯಾದ ಚಾಣಾಕ್ಷ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ ಕಮಾಲ್ ಮಾಡಿದ್ದಾರೆ. ಬಾಂಗ್ಲಾದೇಶ ವಿರುದ್ಧ ಆರಂಭವಾದ ಮೊದಲ ಟೆಸ್ಟ್ ಪಂದ್ಯದಲ್ಲಿ 2 ವಿಕೆಟ್ ಪಡೆದು ಅಪರೂಪದ ದಾಖಲೆ ಸರಿಗಟ್ಟಿದ್ದಾರೆ.
ಮುರಳೀಧರನ್ ವಿಶ್ವದಾಖಲೆ ಸರಿಗಟ್ಟಲು ಅಶ್ವಿನ್‌ಗೆ ಬೇಕಿದೆ ಇನ್ನೊಂದೇ ವಿಕೆಟ್..!
ಹೌದು, ಬಾಂಗ್ಲಾದೇಶ ನಾಯಕ ಮೊಮಿನುಲ್ ಹಕ್ ವಿಕೆಟ್ ಪಡೆಯುತ್ತಿದ್ದಂತೆ ರವಿಚಂದ್ರನ್ ಅಶ್ವಿನ್ ತವರಿನಲ್ಲಿ 250 ಟೆಸ್ಟ್ ವಿಕೆಟ್ ಪಡೆದ ಸಾಧನೆ ಮಾಡಿದರು. ಈ ಮೂಲಕ ತವರಿನಲ್ಲಿ ಅತಿವೇಗವಾಗಿ 250+ ವಿಕೆಟ್ ಪಡೆದ ಬೌಲರ್’ಗಳ ಪಟ್ಟಿಯಲ್ಲಿ ಸ್ಪಿನ್ ದಿಗ್ಗಜ ಮುತ್ತಯ್ಯ ಮುರುಳೀಧರನ್ ಅವರೊಂದಿಗೆ ಜಂಟಿ ಅಗ್ರಸ್ಥಾನ ಹಂಚಿಕೊಂಡರು. ಮುತ್ತಯ್ಯ ಮುರುಳೀಧರನ್ ಹಾಗೂ ಅಶ್ವಿನ್ ತಾವು ತವರಿನಲ್ಲಾಡಿದ 42ನೇ ಪಂದ್ಯದಲ್ಲಿ 250+ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಮೊದಲು ಅಶ್ವಿನ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಅತಿವೇಗವಾಗಿ 350+ ವಿಕೆಟ್ ಪಡೆದ ಬೌಲರ್’ಗಳ ಪಟ್ಟಿಯಲ್ಲೂ ಮುರುಳಿ ಜತೆ ಜಂಟಿ ಅಗ್ರಸ್ಥಾನ ಹಂಚಿಕೊಂಡಿದ್ದರು.
ಭಾರತೀಯ ಬೌಲರ್‌ಗಳ ಮಾರಕ ದಾಳಿ; ಬಾಂಗ್ಲಾದೇಶ 150ಕ್ಕೆ ಆಲೌಟ್!
ಭಾರತದ ಮೂರನೇ ಬೌಲರ್: ತವರಿನಲ್ಲಿ 250 ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎನ್ನುವ ಗೌರವಕ್ಕೂ ಅಶ್ವಿನ್ ಪಾತ್ರರಾಗಿದ್ದಾರೆ. ಈ ಮೊದಲು ಅನಿಲ್ ಕುಂಬ್ಳೆ[350] ಹಾಗೂ ಹರ್ಭಜನ್ ಸಿಂಗ್[265] ತವರಿನಲ್ಲಿ 250+ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಇಂದೋರ್ ಟೆಸ್ಟ್: ದಾಖಲೆ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ!
ಇನ್ನು ಭಾರತ ಪರ ಅತಿಹೆಚ್ಚು ಟೆಸ್ಟ್ ವಿಕೆಟ್ ಪಡೆದ ಆಟಗಾರರಲ್ಲಿ ಅಶ್ವಿನ್ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಅನಿಲ್ ಕುಂಬ್ಳೆ[619] ಮೊದಲ ಸ್ಥಾನದಲ್ಲಿದ್ದರೆ, ಕಪಿಲ್ ದೇವ್[434] ಹರ್ಭಜನ್ ಸಿಂಗ್[417] ಅಶ್ವಿನ್[357] ಆನಂತರದ ಸ್ಥಾನದಲ್ಲಿದ್ದಾರೆ.
ಅತಿ ಕಡಿಮೆ ಪಂದ್ಯಗಳಲ್ಲಿ 250+ ವಿಕೆಟ್ ಪಡೆದ ಟಾಪ್ 5 ಬೌಲರ್’ಗಳು
42- ಮುತ್ತಯ್ಯ ಮುರುಳೀಧರನ್& ರವಿಚಂದ್ರನ್ ಅಶ್ವಿನ್
43- ಅನಿಲ್ ಕುಂಬ್ಳೆ
44- ರಂಗನಾ ಹೆರಾತ್
49-ಡೇಲ್ ಸ್ಟೇನ್
51- ಹರ್ಭಜನ್ ಸಿಂಗ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.