INDvsENG: 2ನೇ ಟಿ20ಯಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ; 2 ಬದಲಾವಣೆ!

By Suvarna NewsFirst Published Mar 14, 2021, 6:40 PM IST
Highlights

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೋಲು ಕಂಡಿರುವ ಟೀಂ ಇಂಡಿಯಾ ಇದೀಗ ಗೆಲುವಿಗಾಗಿ ತಂಡದಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ.

ಅಹಮ್ಮದಾಬಾದ್(ಮಾ.14):  ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಸೋಲಿನಿಂದ ನಿರಾಸೆಗೊಂಡಿರುವ ಟೀಂ ಇಂಡಿಯಾ ಇದೀಗ ಗೆಲುವಿಗಾಗಿ 2 ಬದಲಾವಣೆ ಮಾಡಿದೆ. 

 

Toss Update: has won the toss & have elected to bowl against England in the 2nd T20I.

Follow the match 👉 https://t.co/gU4AGqh8Um pic.twitter.com/3VaDUO32SK

— BCCI (@BCCI)

ಶಿಖರ್ ಧವನ್ ಹಾಗೂ ಅಕ್ಸರ್ ಪಟೇಲ್‌ಗೆ ವಿಶ್ರಾಂತಿ ನೀಡಲಾಗಿದೆ. ಇವರ ಬದಲು ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ತಂಡ ಸೇರಿಕೊಂಡಿದ್ದಾರೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಟೀಂ ಇಂಡಿಯಾಗೆ ಪದಾರ್ಪಣೆ ಮಾಡುತ್ತಿದ್ದಾರೆ.

ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮಾರ್ಕ್ ವುಡ್ ಬದಲು ಟಾಮ್ ಕುರನ್ ತಂಡ ಸೇರಿಕೊಂಡಿದ್ದಾರೆ. 5 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ.

click me!