
ಬ್ರಿಸ್ಟಾಲ್(ಜೂ.18): ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಏಕೈಕ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭಾರತ ಕೇವಲ 231 ರನ್‌ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಇಂಗ್ಲೆಂಡ್ ತಂಡವು ಭಾರತದ ಮೇಲೆ ಫಾಲೋ ಆನ್ ಹೇರಿದೆ. ಸದ್ಯ ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಇನ್ನೂ 165 ರನ್‌ಗಳ ಹಿನ್ನಡೆ ಅನುಭವಿಸಿದೆ.
ಹೌದು, ಎರಡನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 187 ರನ್ ಬಾರಿಸಿದ್ದ ಭಾರತ ತಂಡವು ಮೂರನೇ ದಿನದಾಟದ ಆರಂಭದಲ್ಲೇ ಹರ್ಮನ್‌ಪ್ರೀತ್ ಕೌರ್ ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ತನ್ನ ಖಾತೆಗೆ 44 ರನ್ ಸೇರಿಸುವಷ್ಟರಲ್ಲಿ ಎಲ್ಲಾ 5 ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. ಭಾರತ ಪರ ಆಲ್ರೌಂಡರ್ ದೀಪ್ತಿ ಶರ್ಮಾ 29 ರನ್ ಬಾರಿಸಿ ಅಜೇಯರಾಗುಳಿದರು.
ಮಹಿಳಾ ಟೆಸ್ಟ್ ಕ್ರಿಕೆಟ್; ಶೆಫಾಲಿ-ಮಂಧನಾ ಅಬ್ಬರದ ಹೊರತಾಗಿಯೂ ದಿಢೀರ್ ಕುಸಿದ ಭಾರತ
ಇಂಗ್ಲೆಂಡ್ ತಂಡದ ಪರ ಎಕ್ಲೆಸ್ಟೋನ್ 88 ರನ್ ನೀಡಿ 4 ವಿಕೆಟ್ ಪಡೆದರೆ, ನಾಯಕಿ ಹೀಥರ್ ನೈಟ್ 2 ಹಾಗೂ ಬ್ರೆಂಟ್, ಶೊರಬ್‌ಸೋಲೆ, ಸ್ಕೀವರ್, ಕೇಟ್ ಕ್ರಾಸ್ ತಲಾ ಒಂದೊಂದು ವಿಕೆಟ್ ಪಡೆದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.