* ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಿಂದ ಶುಭ್‌ಮನ್ ಗಿಲ್ ಬಹುತೇಕ ಔಟ್
* ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ
* ಆಗಸ್ಟ್ 04ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಪಾಲ್ಗೊಳ್ಳುವುದು ಅನುಮಾನ
ಲಂಡನ್(ಜು.01) ನ್ಯೂಜಿಲೆಂಡ್ ಎದುರಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸೋಲಿನ ಶಾಕ್‌ನಿಂದ ಹೊರಬರುವ ಮುನ್ನವೇ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದೆ. ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಲಭ್ಯರಾಗುವುದು ಅನುಮಾನ ಎನಿಸಿದೆ.
ಗಾಯಕ್ಕೊಳಗಾಗಿರುವ ಶುಭ್‌ಮನ್ ಗಿಲ್ ಆಗಸ್ಟ್ 04ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ. ಸೌಥಾಂಪ್ಟನ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ವೇಳೆಯೇ ಗಿಲ್ ಅವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯದ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲವಾದರು, ವೈದ್ಯಕೀಯ ಸಿಬ್ಬಂದಿ ಶುಭ್‌ಮನ್ ಗಿಲ್‌ಗೆ ತವರಿಗೆ ಹಿಂತಿರುಗಲು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
undefined
8 ವರ್ಷದ ಹೆಣ್ಣು ಮಗುವಿನ ಜೀವ ಉಳಿಸಲು ಜೆರ್ಸಿ ಹರಾಜಿಗಿಟ್ಟ ಟಿಮ್ ಸೌಥಿ
ಒಂದು ವೇಳೆ ಶುಭ್‌ಮನ್ ಗಿಲ್ ತವರಿಗೆ ಮರಳಿದರೆ ಗಿಲ್ ಬದಲಿಗೆ ಬೇರೆ ಆಟಗಾರರನ್ನು ಚೇತನ್ ಶರ್ಮಾ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಇಂಗ್ಲೆಂಡ್ ಪ್ರವಾಸಕ್ಕೆ ಕಳಿಸಿಕೊಡಲಿದೆಯೇ ಎನ್ನುವ ಕುತೂಹಲ ಜೋರಾಗಿದೆ. ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಮೊದಲ ಆಯ್ಕೆಯ ಆರಂಭಿಕ ಬ್ಯಾಟ್ಸ್‌ಮನ್ ಆಗಿದ್ದಾರೆ. ತಂಡದಲ್ಲಿ ಮೀಸಲು ಆರಂಭಿಕ ಬ್ಯಾಟ್ಸ್‌ಮನ್ ಆಗಿ ಮಯಾಂಕ್ ಅಗರ್‌ವಾಲ್ ಹಾಗೂ ಕೆ.ಎಲ್. ರಾಹುಲ್ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ಸರಣಿಗೆ ರೋಹಿತ್ ಶರ್ಮಾ ಜತೆ ಮಯಾಂಕ್ ಅಗರ್‌ವಾಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.