ಸನ್’ರೈಸರ್ಸ್’ಗೆ ಸುಲಭ ಗುರಿ ನೀಡಿದ ಡೆಲ್ಲಿ

Published : Apr 04, 2019, 10:00 PM IST
ಸನ್’ರೈಸರ್ಸ್’ಗೆ ಸುಲಭ ಗುರಿ ನೀಡಿದ ಡೆಲ್ಲಿ

ಸಾರಾಂಶ

ಹೈದರಾಬಾದ್ ಸಂಘಟಿತ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್ ಸಾಧಾರಣ ಮೊತ್ತ ಪೇರಿಸಿದೆ.

ನವದೆಹಲಿ(ಏ.4) ಹೈದರಾಬಾದ್ ಸಂಘಟಿತ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 129 ರನ್ ಬಾರಿಸಿದ್ದು, ಸನ್’ರೈಸರ್ಸ್ ಪಡೆಗೆ ಸುಲಭ ಗುರಿ ನೀಡಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿಗೆ ನಾಯಕ ಭುವನೇಶ್ವರ್ ಕುಮಾರ್ ಆರಂಭದಲ್ಲೇ ಶಾಕ್ ನೀಡಿದರು. ಪೃಥ್ವಿ ಶಾ ಕ್ಲೀನ್ ಬೌಲ್ಡ್ ಮಾಡುವ ಮೂಲಕ ಹೈದರಾಬಾದ್ ಪಡೆಗೆ ಆರಂಭಿಕ ಮುನ್ನಡೆ ಒದಗಿಸಿಕೊಟ್ಟರು.

 ಆ ಬಳಿಕ ನಬಿ, ಸಂದೀಪ್ ಶರ್ಮಾ ಡೆಲ್ಲಿಗೆ ಆಘಾತ ನೀಡುತ್ತಲೇ ಬಂದರು. ಮಧ್ಯಮ ಕ್ರಮಾಂಕದಲ್ಲಿ ಯಾವೊಬ್ಬ ಬ್ಯಾಟ್ಸ್’ಮನ್ ನೆಲಕಚ್ಚಿ ಆಡುವ ಪ್ರಯತ್ನ ಮಾಡಲಿಲ್ಲ. 

ಒಂದು ಕಡೆ ನಿರಂತರ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ದಿಟ್ಟ ಬ್ಯಾಟಿಂಗ್ ನಡೆಸಿದ ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ 41 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 43 ರನ್ ಬಾರಿಸಿ ರಶೀದ್ ಖಾನ್ ಬೌಲಿಂಗ್’ನಲ್ಲಿ ವಿಕೆಟ್ ಒಪ್ಪಿಸಿದರು. 

ಕೊನೆಯಲ್ಲಿ ಮಿಂಚಿನ ಬ್ಯಾಟಿಂಗ್ ನಡೆದ ಆಲ್ರೌಂಡರ್ ಅಕ್ಷರ್ ಪಟೇಲ್ ಕೇವಲ 13 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 23ರನ್ ಬಾರಿಸಿ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು.

ಸನ್’ರೈಸರ್ಸ್ ಪರ ಭುವನೇಶ್ವರ್ ಕುಮಾರ್, ಮೊಹಮ್ಮದ್ ನಬೀ ಹಾಗೂ ಸಿದ್ದಾರ್ಥ್ ಕೌಲ್ ತಲಾ 2 ವಿಕೆಟ್ ಪಡೆದರೆ, ರಶೀದ್ ಖಾನ್ ಮತ್ತು ಸಂದೀಪ್ ಶರ್ಮಾ ಒಂದೊಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್:
ಡೆಲ್ಲಿ ಕ್ಯಾಪಿಟಲ್ಸ್: 129/8
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಒಂದು ತಂಡ ಬಿಟ್ಟು ಆರ್‌ಸಿಬಿ, ಚೆನ್ನೈ ಸೇರಿ ಐಪಿಎಲ್‌ ತಂಡಗಳ ಬ್ರ್ಯಾಂಡ್ ಮೌಲ್ಯ ಭಾರೀ ಕುಸಿತ!
ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!