
ನವದೆಹಲಿ(ಜು.03): 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿದೇಶಕ್ಕೆ ಸ್ಥಳಾಂತರಗೊಳ್ಳುವುದು ಬಹುತೇಕ ಖಚಿತವಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನದ ವೇಳೆ ಸುಳಿವು ನೀಡಿದ್ದಾರೆ.
‘ಟಿ20 ವಿಶ್ವಕಪ್ನ ಭವಿಷ್ಯದ ಬಗ್ಗೆ ಐಸಿಸಿ ಅಧಿಕೃತ ನಿರ್ಧಾರ ಪ್ರಕಟಿಸುವುದನ್ನೇ ಬಿಸಿಸಿಐ ಕಾಯುತ್ತಿದೆ. ಯುಎಇ ಇಲ್ಲವೇ ಶ್ರೀಲಂಕಾದಲ್ಲಿ ಟೂರ್ನಿ ನಡೆಸಲು ಚಿಂತನೆ ನಡೆಸಲಾಗಿದೆ. ಎಲ್ಲೇ ನಡೆದರೂ ಖಾಲಿ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿವೆ. ಮುಂಬೈನಲ್ಲಿ 4 ಕ್ರೀಡಾಂಗಣಗಳಿರುವ ಕಾರಣ, ಅಲ್ಲೇ ನಡೆಸಿದ್ದರೆ ಅನುಕೂಲವಾಗುತ್ತಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಟೂರ್ನಿ ನಡೆಸುವುದು ಅಸಾಧ್ಯ’ ಎಂದು ಅಧಿಕಾರಿ ತಿಳಿಸಿದ್ದಾರೆ.
ಇನ್ನೊಂದು ವರದಿಯ ಪ್ರಕಾರ ದಕ್ಷಿಣ ಭಾರತದಲ್ಲಿ ಅಂದರೆ ಬೆಂಗಳೂರು ಹಾಗೂ ಚೆನ್ನೈನಲ್ಲಿ ಟೂರ್ನಿ ಆಯೋಜಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಶ್ರೀಲಂಕಾ ಈಗಾಗಲೇ ತಾವು ಟೂರ್ನಿ ಆಯೋಜಿಸಲು ಸಿದ್ಧವೆಂದು ಹೇಳಿಕೆ ನೀಡಿತ್ತು. ಸೋಮವಾರವಷ್ಟೇ ಶ್ರೀಲಂಕಾ ದೇಶಾದ್ಯಂತ ಲಾಕ್‌ಡೌನ್ ತೆರವುಗೊಳಿಸಿದೆ.
ಸಾರ್ವಕಾಲಿಕ ಶ್ರೇಷ್ಠ IPL ತಂಡ ಪ್ರಕಟಿಸಿದ ಎಬಿ ಡಿವಿಲಿಯರ್ಸ್..!
ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಕೊರೋನಾ ಭೀತಿಯಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಒಂದು ವೇಳೆ ಮುಂದೂಡಲ್ಪಟ್ಟರೆ, ಆ ಸಮಯದಲ್ಲಿ ಐಪಿಎಲ್ ಆಯೋಜಿಸಬಹುದು ಎನ್ನುವುದು ಬಿಸಿಸಿಐ ಲೆಕ್ಕಾಚಾರವಾಗಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡಾ ಈ ವರ್ಷ ಶತಾಯಗತಾಯ ಐಪಿಎಲ್ ನಡಿಸಿಯೇ ಸಿದ್ದ ಎನ್ನುವ ಮಾತುಗಳನ್ನಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.