
ದುಬೈ(ಜು.18): 2020ರ ಐಪಿಎಲ್ ಟೂರ್ನಿ ಆಯೋಜಿಸಲು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕ್ರಿಕೆಟ್ ಸಂಸ್ಥೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಬಿಸಿಸಿಐನಿಂದ ಅಧಿಕೃತ ಪ್ರಕಟಣೆಯಷ್ಟೇ ಬಾಕಿ ಇದೆ.
ಕ್ರೀಡಾಂಗಣಗಳಲ್ಲಿ ಪಿಚ್ ಸಿದ್ಧ ಪಡಿಸಿದ್ದು, ಅಭ್ಯಾಸಕ್ಕೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ದುಬೈ ಕ್ರೀಡಾಂಗಣದ ಮುಖ್ಯಸ್ಥ ಸಲ್ಮಾನ್ ಹನೀಫ್, ಶುಕ್ರವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ದುಬೈ, ಅಬುಧಾಬಿ, ಶಾರ್ಜಾದಲ್ಲಿ ಪಂದ್ಯಗಳನ್ನು ಆಯೋಜನೆಗೊಳ್ಳಲಿವೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಆಟಗಾರರು, ಸಿಬ್ಬಂದಿಯ ವಾಸ್ತವ್ಯಕ್ಕೆ ಕ್ರೀಡಾಂಗಣಗಳ ಸುತ್ತಮುತ್ತಲಿನ ಹೋಟೆಲ್ಗಳನ್ನು ಬಿಸಿಸಿಐ ಈಗಾಗಲೇ ಗುರುತಿಸಿದೆ ಎನ್ನಲಾಗಿದೆ.
ಕುಮಟಾದಿಂದ ಟೀಂ ಇಂಡಿಯಾವರೆಗೆ: ವಿಶ್ವದಲ್ಲೇ ನಂ.1 ಥ್ರೋಡೌನ್ ತಜ್ಞನ ರೋಚಕ ಸ್ಟೋರಿಯಿದು..!
ಮಾರ್ಚ್ 29ರಿಂದ ಮೇ 17ರವರೆಗೆ ನಡೆಯಬೇಕಿದ್ದ 13ನೇ ಆವೃತ್ತಿಯ ಐಪಿಎಲ್ ಕೊರೋನಾ ಹಾಗೂ ಲಾಕ್‌ಡೌನ್ ಕಾರಣದಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. ಈಗಾಗಲೇ ಏಷ್ಯಾಕಪ್ ಹಾಗೂ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಈ 2 ಟೂರ್ನಿಗಳು ಮುಂದೂಡಲ್ಪಟ್ಟಿರುವುದು ಐಪಿಎಲ್ ಆಯೋಜನೆಗೆ ಇನ್ನಷ್ಟು ಬಲ ಬಂದಂತಾಗಿದೆ.
ಯುಎಇನಲ್ಲಿ ಐಪಿಎಲ್ ಆಯೋಜನೆ ಬಿಸಿಸಿಐಗೆ ಹೊಸದೇನಲ್ಲ. 2014ರ ಲೋಕಸಭಾ ಚುನಾವಣೆ ವೇಳೆ ಅರ್ಧದಷ್ಟು ಟೂರ್ನಿಯು ದುಬೈನಲ್ಲೇ ನಡೆದಿತ್ತು. ಇದೀಗ ದುಬೈನಲ್ಲಿ ಪೂರ್ಣ ಪ್ರಮಾಣದಲ್ಲಿ ಟೂರ್ನಿ ನಡೆಯುವ ಸಾಧ್ಯತೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.