
ನವದೆಹಲಿ(ಮೇ.10): ಕೋವಿಡ್‌ನಿಂದಾಗಿ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಎಲ್ಲಾ 8 ತಂಡಗಳ ಬಹುತೇಕ ಆಟಗಾರರು ಸುರಕ್ಷಿತವಾಗಿ ಮನೆ ತಲುಪಿದ್ದಾರೆ.
ತಮ್ಮ ತಮ್ಮ ಆಟಗಾರರ ವಿವರಗಳನ್ನು ತಂಡಗಳು ಸಾಮಾಜಿಕ ತಾಣಗಳಲ್ಲಿ ಬಹಿರಂಗಪಡಿಸಿವೆ. ಬಹುತೇಕ ಎಲ್ಲಾ ತಂಡಗಳ ವಿದೇಶಿ ಆಟಗಾರರು ಸಹ ತಮ್ಮ ತಮ್ಮ ದೇಶಗಳಿಗೆ ತಲುಪಿದ್ದು, ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಸೋಂಕಿಗೆ ತುತ್ತಾಗಿರುವ ಆಟಗಾರರಿಗೆ ಚಿಕಿತ್ಸೆ ಮುಂದುವರಿದಿದೆ.
ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತಮ್ಮೆಲ್ಲ ಆಟಗಾರರು ಸುರಕ್ಷಿತವಾಗಿ ಮನೆ ಸೇರಿದ್ದಾರೆ ಎಂದು ಟ್ವೀಟ್ ಮೂಲಕ ಖಚಿತ ಪಡಿಸಿದೆ. ಅದೇ ರೀತಿ ನ್ಯೂಜಿಲೆಂಡ್ ಮೂಲದ ಎಲ್ಲಾ ಆಟಗಾರರು ಸಹಾ ಕಿವೀಸ್‌ಗೆ ಕಾಲಿಟ್ಟಿದ್ದಾರೆ. ಅದರೆ ಕೋವಿಡ್ ಸೋಂಕು ದೃಢಪಟ್ಟ ಬೆನ್ನಲ್ಲೇ ಕೆಕೆಆರ್ ತಂಡದ ಟಿಮ್ ಸೈಫರ್ಟ್ ಇನ್ನೂ ನ್ಯೂಜಿಲೆಂಡ್ ವಿಮಾನ ಹತ್ತಿಲ್ಲ.
ಐಪಿಎಲ್ ಭಾಗ 2 ಭಾರತದಲ್ಲಿ ಡೌಟ್: ಸೌರವ್ ಗಂಗೂಲಿ
ಬಯೋ ಬಬಲ್‌ನೊಳಗೆ ಕೋವಿಡ್ 19 ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಮೇ 04ರಂದು ಬಿಸಿಸಿಐ ಅನಿರ್ದಿಷ್ಟಾವಧಿಗೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಮುಂದೂಡಿದೆ. ಮೇ 03ರಂದು ಬಯೋ ಬಬಲ್‌ನೊಳಗಿದ್ದ ಕೆಕೆಆರ್ ತಂಡದ ಸಂದೀಪ್ ವಾರಿಯರ್ ಹಾಗೂ ವರುಣ್ ಚಕ್ರವರ್ತಿಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಇದಾದ ಬಳಿಕ ಮೇ 04ರಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ವೃದ್ದಿಮಾನ್ ಸಾಹಗೆ ಕೋವಿಡ್ ಪತ್ತೆಯಾದ ಬೆನ್ನಲ್ಲೇ ಬಿಸಿಸಿಐ ತಡ ಮಾಡದೇ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.