IPL 2021: ಸನ್‌ರೈಸರ್ಸ್‌ ಸವಾಲು ಗೆದ್ದು ಪ್ಲೇ-ಆಫ್‌ಗೇರಲು CSK ಕಾತರ..!

Suvarna News   | Asianet News
Published : Sep 30, 2021, 10:28 AM IST
IPL 2021: ಸನ್‌ರೈಸರ್ಸ್‌ ಸವಾಲು ಗೆದ್ದು ಪ್ಲೇ-ಆಫ್‌ಗೇರಲು CSK ಕಾತರ..!

ಸಾರಾಂಶ

* ಶಾರ್ಜಾದಲ್ಲಿಂದು ಚೆನ್ನೈ-ಹೈದರಾಬಾದ್‌ ಮುಖಾಮುಖಿ * ಈ ಪಂದ್ಯ ಗೆದ್ದು ಅಧಿಕೃತವಾಗಿ ಪ್ಲೇ ಆಫ್‌ಗೇರುವ ಲೆಕ್ಕಾಚಾರದಲ್ಲಿದೆ ಧೋನಿ ಪಡೆ * ಪ್ರತಿಷ್ಠೆಗಾಗಿ ಕಾದಾಡಲು ಸಜ್ಜಾಗಿದೆ ವಿಲಿಯಮ್ಸನ್‌ ನೇತೃತ್ವದ ಸನ್‌ರೈಸರ್ಸ್‌

ಶಾರ್ಜಾ(ಸೆ.30): 14ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ (IPL 2021) ಭರ್ಜರಿ ಲಯದಲ್ಲಿರುವ ಚೆನ್ನೈ ಸೂಪರ್‌ಕಿಂಗ್ಸ್‌ (Chennai Super Kings), ಗುರುವಾರ ಸನ್‌ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ ಜಯಗಳಿಸಿ ಪ್ಲೇ-ಆಫ್‌ಗೆ ಅಧಿಕೃತ ಪ್ರವೇಶ ಪಡೆಯಲು ಕಾತರಿಸುತ್ತಿದೆ. 

ಈ ಕುತೂಹಲಕಾರಿ ಪಂದ್ಯಕ್ಕೆ ಶಾರ್ಜಾ (Sharjah) ಮೈದಾನ ಆತಿಥ್ಯವನ್ನು ವಹಿಸಿದೆ. ಮಹೇಂದ್ರ ಸಿಂಗ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಕೇನ್‌ ವಿಲಿಯಮ್ಸನ್‌ (Kane Williamson) ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್ ತಂಡವು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಸದ್ಯ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು 10 ಪಂದ್ಯಗಳನ್ನಾಡಿ 8 ಗೆಲುವು ಹಾಗೂ 2 ಸೋಲುಗಳೊಂದಿಗೆ 16 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದಕ್ಕೆ ವಿಪರೀತ ಉಲ್ಟಾ ಎನ್ನುವಂತೆ ಸನ್‌ರೈಸರ್ಸ್‌ ಹೈದರಾಬಾದ್ ತಂಡವು 10 ಪಂದ್ಯಗಳನ್ನಾಡಿ ಕೇವಲ 2  ಗೆಲುವು ಹಾಗೂ 8 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

T20 World Cup ನಮ್ಮದೇ, ಇತಿಹಾಸ ಮರುಕಳಿಸುವಂತೆ ಮಾಡುತ್ತೇವೆಂದು ಶಪಥ ಮಾಡಿದ ರೋಹಿತ್ ಶರ್ಮಾ..!

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಯುಎಇ ಚರಣದಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದು, ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ. ಈಗಾಗಲೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿರುವ ಸನ್‌ರೈಸ​ರ್ಸ್‌ ತಂಡಕ್ಕೆ ಇದು ಪ್ರತಿಷ್ಠೆಯ ಪಂದ್ಯ. ಈ ಪಂದ್ಯದಲ್ಲಿ ಹೈದರಾಬಾದ್‌ ಗೆದ್ದರೂ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಇರಲಿದೆ. ಸತತ ಸೋಲುಗಳಿಂದ ಕಂಗೆಟ್ಟಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ದ 7 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಗೆಲುವಿನ ಹಳಿಗೆ ಮರಳಿತ್ತು.

ಇನ್ನು ಐಪಿಎಲ್‌ ಇತಿಹಾಸದಲ್ಲಿ ಉಭಯ ತಂಡಗಳು ಒಟ್ಟು 15 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಸ್ಪಷ್ಟ ಮೇಲುಗೈ ಸಾಧಿಸಿದೆ. 15 ಪಂದ್ಯಗಳ ಪೈಕಿ ಸಿಎಸ್‌ಕೆ ತಂಡವು 11 ರಲ್ಲಿ ಗೆಲುವು ದಾಖಲಿಸಿದ್ದರೆ, ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆಲುವಿನ ನಗೆ ಬೀರಿದೆ

ಸಂಭವನೀಯ ಆಟಗಾರರ ಪಟ್ಟಿ

ಚೆನ್ನೈ ಸೂಪರ್ ಕಿಂಗ್ಸ್‌: ಋುತುರಾಜ್ ಗಾಯಕ್ವಾಡ್‌, ಫಾಫ್ ಡು ಪ್ಲೆಸಿಸ್, ಮೋಯಿನ್ ಅಲಿ‌, ಸುರೇಶ್ ರೈನಾ, ಅಂಬಟಿ ರಾಯುಡು, ಎಂ ಎಸ್ ಧೋನಿ(ನಾಯಕ), ರವೀಂದ್ರ ಜಡೇಜಾ, ಬ್ರಾವೋ/ಕರ್ರನ್‌, ಶಾರ್ದೂಲ್ ಠಾಕೂರ್‌, ದೀಪಕ್ ಚಹರ್‌, ಜೋಸ್ ಹೇಜಲ್‌ವುಡ್‌.

ಸನ್‌ರೈಸ​ರ್ಸ್ ಹೈದರಾಬಾದ್‌: ಜೇಸನ್‌ ರಾಯ್‌, ವೃದ್ದಿಮಾನ್ ಸಾಹ, ಕೇನ್ ವಿಲಿಯಮ್ಸನ್‌(ನಾಯಕ), ಪ್ರಿಯಂ ಗರ್ಗ್‌, ಅಬ್ದುಲ್ ಸಮದ್‌, ಅಭಿಷೇಕ್ ಶರ್ಮಾ‌, ಜೇಸನ್ ಹೋಲ್ಡರ್‌, ರಶೀದ್ ಖಾನ್‌, ಭುವನೇಶ್ವರ್‌, ಸಂದೀಪ್‌ ಶರ್ಮಾ, ಸಿದ್ಧಾರ್ಥ್ ಕೌಲ್‌.

ಸ್ಥಳ: ಶಾರ್ಜಾ
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುಸಿದ ಭಾರತಕ್ಕೆ ಪಾಂಡ್ಯ ಅಬ್ಬರದ ಬ್ಯಾಟಿಂಗ್, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್
ಕೆಲವೇ ದಿನದಲ್ಲಿ ಸ್ಮೃತಿ ಮಂಧನಾ ಮದುವೆ ಆಘಾತದಿಂದ ಹೊರಬಂದಿದ್ದೇಗೆ? 3 ವರ್ಷ ಹಿಂದೆ ಹೇಳಿದ್ದ ಟಿಪ್ಸ್