
ನವದೆಹಲಿ(ಮಾ.13): 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಭರ್ಜರಿ ತಯಾರಿ ನಡೆಸುತ್ತಿರುವ ಪ್ರೀತಿ ಜಿಂಟಾ ಸಹಾ ಒಡೆತನದ ಪಂಜಾಬ್ ಕಿಂಗ್ಸ್ ಇದೀಗ ಆಸ್ಟ್ರೇಲಿಯಾದ ಪ್ರಥಮ ದರ್ಜೆ ಕ್ರಿಕೆಟಿಗ ಡೇಮಿಯನ್ ರೈಟ್‌ರನ್ನು ತನ್ನ ಬೌಲಿಂಗ್ ಕೋಚ್ ಆಗಿ ನೇಮಿಸಿದೆ.
45 ವರ್ಷದ ಡೇಮಿಯನ್ ರೈಟ್ ಬಾಂಗ್ಲಾದೇಶ ಅಂಡರ್ 19 ತಂಡದ ಕೋಚ್ ಆಗಿಯೂ ಕಾರ್ಯನಿರ್ವಹಿಸಿದ್ದಾರೆ. ಇದೀಗ ಪಂಜಾಬ್ ಕಿಂಗ್ಸ್ ಮುಖ್ಯ ಕೋಚ್ ಹಾಗೂ ಡೈರೆಕ್ಟರ್ ಆಫ್ ಕ್ರಿಕೆಟ್ ಆಪರೇಷನ್ ಆಗಿರುವ ಅನಿಲ್ ಕುಂಬ್ಳೆ ಜತೆಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ನಾನು ಪಂಜಾಬ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಆಗಿ ನೇಮಕವಾಗಿರುವುದಕ್ಕೆ ಖುಷಿಯಾಗುತ್ತಿದೆ. ಪಂಜಾಬ್ ಕಿಂಗ್ಸ್ ತಂಡ ಅತ್ಯದ್ಬುತವಾಗಿದ್ದು, ಸಾಕಷ್ಟು ಪ್ರತಿಭಾನ್ವಿತ ಆಟಗಾರರನ್ನು ಈ ತಂಡ ಹೊಂದಿದೆ. ಈ ಆವೃತ್ತಿಯ ಐಪಿಎಲ್‌ನಲ್ಲಿ ಎಲ್ಲಾ ಅನುಭವಿ ಸಹಾಯಕ ಸಿಬ್ಬಂದಿಗಳೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಡೇಮಿಯನ್ ರೈಟ್ ತಿಳಿಸಿದ್ದಾರೆ.
IPL 2021: ಹರಾಜಿನ ಬಳಿಕ ಪಂಜಾಬ್ ಕಿಂಗ್ಸ್ ತಂಡ ಹೀಗಿದೆ ನೋಡಿ
ಡೇಮಿಯನ್ ರೈಟ್ ಆಸ್ಟ್ರೇಲಿಯಾದ ಬಿಗ್‌ಬ್ಯಾಶ್ ಲೀಗ್‌ನಲ್ಲಿ ಹೋಬಾರ್ಟ್ ಹರಿಕೇನ್ಸ್ ಹಾಗೂ ಮೆಲ್ಬೊರ್ನ್ ಸ್ಟಾರ್ಸ್ ಹಾಗೂ ನ್ಯೂಜಿಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಕೆ.ಎಲ್. ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಏಪ್ರಿಲ್ 12ರಂದು ಮುಂಬೈನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ದ ತನ್ನ ಮೊದಲ ಪಂದ್ಯವನ್ನಾಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.