
ಅಬುಧಾಬಿ(ಸೆ.25): ಐಪಿಎಲ್ 14ನೇ ಆವೃತ್ತಿಯ(IPL2021) ಭಾಗ-2ರಲ್ಲಿ ಶನಿವಾರ ಮೊದಲ ಬಾರಿಗೆ 2 ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಕಳೆದ ಪಂದ್ಯದಲ್ಲಿ ಗೆದ್ದಿದ್ದು, ಜಯದ ಲಯ ಕಾಪಾಡಿಕೊಳ್ಳಲು ಎದುರು ನೋಡುತ್ತಿವೆ.
ಈಗಾಗಲೇ 7 ಪಂದ್ಯಗಳನ್ನು ಗೆದ್ದು 14 ಅಂಕ ಸಂಪಾದಿಸಿರುವ ಡೆಲ್ಲಿ, ಈ ಪಂದ್ಯದಲ್ಲಿ ಜಯಿಸಿದರೆ ಪ್ಲೇ-ಆಫ್‌ನಲ್ಲಿ ಸ್ಥಾನ ಖಚಿತವಾಗಲಿದೆ. ಜೊತೆಗೆ ಪ್ಲೇ-ಆಫ್‌ನಲ್ಲಿ ಸ್ಥಾನ ಪಡೆದ ಮೊದಲ ತಂಡ ಎನಿಸಿಕೊಳ್ಳಲಿದೆ. ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್(Rajasthan Royals) ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಅಸಾಧಾರಣ ಗೆಲುವು ಸಾಧಿಸಿ, ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿದೆ. ಈ ಪಂದ್ಯದಲ್ಲಿ ಜಯಿಸಿದರೆ, ರಾಯಲ್ಸ್ ಪ್ಲೇ-ಆಫ್ ಪೈಪೋಟಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಡಲಿದೆ.
ದುಬೈ(Dubai)ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ರಾಜಸ್ಥಾನ ರಾಯಲ್ಸ್ ತಂಡವು 185 ರನ್ ಬಾರಿಸಿತ್ತು. ಈ ಗುರಿ ಬೆನ್ನತ್ತಿದ ಪಂಜಾಬ್ ತಂಡವು ಉತ್ತಮ ಅರಂಭ ಪಡೆಯಿತಾದರೂ ಕೊನೆಯ ಓವರ್‌ನಲ್ಲಿ ಕೇವಲ 4 ರನ್ ಗಳಿಸಲು ವಿಫಲವಾಗಿತ್ತು. ಕಾರ್ತಿಕ್ ತ್ಯಾಗಿ ಕೊನೆಯ ಓವರ್‌ನಲ್ಲಿ ಕೇವಲ ಒಂದು ರನ್ ನೀಡಿ 2 ವಿಕೆಟ್ ಕಬಳಿಸುವ ಮೂಲಕ ರಾಜಸ್ಥಾನ ರಾಯಲ್ಸ್ 2 ರನ್‌ಗಳ ರೋಚಕ ಗೆಲುವು ಸಾಧಿಸುವಂತೆ ಮಾಡಿದ್ದರು.
IPL 2021: ಅಬ್ಬರಿಸಿದರೂ ಸಿಗಲಿಲ್ಲ ಗೆಲುವು, ಧೋನಿ ಮುಂದೆ ಶರಣಾದ ಕೊಹ್ಲಿ ಬಾಯ್ಸ್!
ಇನ್ನು ಮರುದಿನ ಅದೇ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡವು 134 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೇವಲ 2 ವಿಕೆಟ್ ಕಳೆದುಕೊಂಡು ಇನ್ನೂ 13 ಎಸೆತಗಳು ಬಾಕಿ ಇರುವಂತೆಯೇ ತಂಡ ಗೆಲುವಿನ ನಗೆ ಬೀರಿತ್ತು.
ಇದುವರೆಗೂ ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಒಟ್ಟು 23 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ರಾಜಸ್ಥಾನ ರಾಯಲ್ಸ್ ಕೊಂಚ ಮೇಲುಗೈ ಸಾಧಿಸಿದೆ. ರಾಜಸ್ಥಾನ ರಾಯಲ್ಸ್ ತಂಡವು 12 ಬಾರಿ ಗೆಲುವಿನ ನಗೆ ಬೀರಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 11 ಬಾರಿ ಗೆದ್ದು ಬೀಗಿದೆ.
ಸಂಭವನೀಯ ಆಟಗಾರರ ಪಟ್ಟಿ
ಡೆಲ್ಲಿ: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ನಾಯಕ), ಮಾರ್ಕಸ್ ಸ್ಟೋಯ್ನಿಸ್/ ಸ್ಟೀವ್ ಸ್ಮಿತ್, ಶಿಮ್ರೋನ್ ಹೆಟ್ಮೇಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೋ ರಬಾಡ, ಏನ್ರಿಚ್ ನೋಕಿಯ, ಆವೇಶ್ ಖಾನ್.
ರಾಜಸ್ಥಾನ: ಎವಿನ್ ಲೆವಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮಹಿಪಾಲ್ ಲೋಮ್ರರ್, ರೆಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಚೇತನ್ ಸಕಾರಿಯಾ, ಕಾರ್ತಿಕ್ ತ್ಯಾಗಿ, ಮುಸ್ತಾಫಿಜುರ್ ರೆಹಮಾನ್
ಸ್ಥಳ: ಅಬುಧಾಬಿ,
ಪಂದ್ಯ ಆರಂಭ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.