IPL 2021: ಮುಂಬೈ ಎದುರು ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ

By Suvarna NewsFirst Published Oct 2, 2021, 3:07 PM IST
Highlights

* ಶಾರ್ಜಾ ಮೈದಾನದಲ್ಲಿಂದು ಮುಂಬೈ-ಡೆಲ್ಲಿ ಹೈವೋಲ್ಟೇಜ್ ಮ್ಯಾಚ್‌

* ಹಾಲಿ ಚಾಂಪಿಯನ್‌ ಮುಂಬೈಗಿಂದು ಮಾಡು ಇಲ್ಲವೇ ಮಡಿ ಪಂದ್ಯ

* ಆತ್ಮವಿಶ್ವಾಸದಿಂದ ಬೀಗುತ್ತಿದೆ ಡೆಲ್ಲಿ ಕ್ಯಾಪಿಟಲ್ಸ್

ಶಾರ್ಜಾ(ಅ.02): 14ನೇ ಆವೃತ್ತಿಯ ಐಪಿಎಲ್ (IPL 2021) ಟೂರ್ನಿಯ 46ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಭ್‌ ಪಂತ್ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಎರಡು ಬಲಿಷ್ಠ ತಂಡಗಳ ನಡುವಿನ ಹೈವೋಲ್ಟೇಜ್‌ ಪಂದ್ಯಕ್ಕೆ ಶಾರ್ಜಾ ಮೈದಾನ ಆತಿಥ್ಯವನ್ನು ವಹಿಸಿದೆ. ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಪ್ಲೇ-ಆಫ್‌ ಹಂತಕ್ಕೆ ಲಗ್ಗೆಯಿಟ್ಟಿದೆ. ಹೀಗಾಗಿ ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದ್ದು, ಲಲಿತ್ ಯಾದವ್ ಬದಲಿಗೆ ಪೃಥ್ವಿ ಶಾ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ರಾಹುಲ್ ಚಹರ್ ಬದಲಿಗೆ ಜಯಂತ್ ಯಾದವ್ ತಂಡ ಕೂಡಿಕೊಂಡಿದ್ದಾರೆ.

🚨 Toss Update from Sharjah 🚨 have elected to bowl against .

Follow the match 👉 https://t.co/Kqs548PStW pic.twitter.com/ERJAloH0vF

— IndianPremierLeague (@IPL)

Match 46. Delhi Capitals win the toss and elect to field https://t.co/BPu5VRRMWx

— IndianPremierLeague (@IPL)

5 ಬಾರಿಯ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಪಾಲಿಗಿಂದು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಮುಂಬೈ ಮುಗ್ಗರಿಸಿದರೆ, ಬಹುತೇಕ ಟೂರ್ನಿಯಿಂದ ಹೊರಬೀಳುವ ಸಾಧ್ಯತೆಯಿದೆ. ಇದರ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್‌ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವುದು ರೋಹಿತ್ ಶರ್ಮಾ (Rohit Sharma) ಪಡೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

IPL 2021 ಡೆಲ್ಲಿ ಎದುರು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಮುಂಬೈ ಇಂಡಿಯನ್ಸ್‌

ರಿಷಭ್ ಪಂತ್ (Rishabh Pant) ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 11 ಪಂದ್ಯಗಳನ್ನಾಡಿ 7 ಗೆಲುವು ಹಾಗೂ 4 ಸೋಲುಗಳೊಂದಿಗೆ 14 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನೊಂದು ಕಡೆ 5 ಬಾರಿಯ ಐಪಿಎಲ್ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ತಂಡವು 11 ಪಂದ್ಯಗಳನ್ನಾಡಿ 5 ಗೆಲುವು ಹಾಗೂ 6 ಸೋಲುಗಳೊಂದಿಗೆ 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಶಾರ್ಜಾದಲ್ಲಿ ನಡೆದ ಕಳೆದ 4 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಚೇಸಿಂಗ್‌ ಮಾಡಿದ ತಂಡವು ಗೆಲುವಿನ ನಗೆ ಬೀರಿದೆ.

ತಂಡಗಳು ಹೀಗಿವೆ ನೋಡಿ

ಮುಂಬೈ ಇಂಡಿಯನ್ಸ್‌:

Match 46. Mumbai Indians XI: R Sharma, Q de Kock, S Yadav, S Tiwary, H Pandya, K Pollard, K Pandya, J Yadav, N Coulter-Nile, T Boult, J Bumrah https://t.co/BPu5VRRMWx

— IndianPremierLeague (@IPL)

ಡೆಲ್ಲಿ ಕ್ಯಾಪಿಟಲ್ಸ್‌:

Match 46. Mumbai Indians XI: R Sharma, Q de Kock, S Yadav, S Tiwary, H Pandya, K Pollard, K Pandya, J Yadav, N Coulter-Nile, T Boult, J Bumrah https://t.co/BPu5VRRMWx

— IndianPremierLeague (@IPL)
click me!