* ಆರೆಂಜ್ ಆರ್ಮಿ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಡೇವಿಡ್ ವಾರ್ನರ್
* ಡೇವಿಡ್ ವಾರ್ನರ್ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಜಿ ನಾಯಕ
* ಸನ್‌ರೈಸರ್ಸ್‌ಗೆ ಗುಡ್ ಬೈ ಸೂಚನೆ ಕೊಟ್ಟ ಆಸೀಸ್ ಆರಂಭಿಕ ಬ್ಯಾಟ್ಸ್‌ಮನ್
ದುಬೈ(ಅ.09): 14ನೇ ಆವೃತ್ತಿಯ ಐಪಿಎಲ್ (IPL 2021) ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡವು ನೀರಸ ಪ್ರದರ್ಶನ ತೋರುವ ಮೂಲಕ ಮೊದಲ ತಂಡವಾಗಿ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದು ಮುಖಭಂಗ ಅನುಭವಿಸಿತು. 14 ಪಂದ್ಯಗಳ ಪೈಕಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 11 ಪಂದ್ಯಗಳಲ್ಲಿ ಸೋಲಿನ ಕಹಿಯುಂಡು ಕೇವಲ 3 ಪಂದ್ಯಗಳಲ್ಲಿ ಮಾತ್ರ ಗೆಲುವಿನ ನಗೆ ಬೀರಿದೆ.
ಯುಎಇ ಚರಣದ ಐಪಿಎಲ್‌ನುದ್ದಕ್ಕೂ ಸನ್‌ರೈಸರ್ಸ್ ಹೈದರಾಬಾದ್ ಕಂಡಂತಹ ಅತ್ಯಂತ ಯಶಸ್ವಿ ನಾಯಕ ಡೇವಿಡ್ ವಾರ್ನರ್ (David Warner) ಕುರಿತಂತೆ ಹೆಚ್ಚು ಚರ್ಚೆಗಳು ನಡೆದಿವೆ. ಯುಎಇ ಚರಣದ ಕೊನೆಯ 4 ಪಂದ್ಯಗಳಲ್ಲಿ ವಾರ್ನರ್ ಅವರನ್ನು ತಂಡದಿಂದ ಹೊರಗಿಟ್ಟಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸನ್‌ರೈಸರ್ಸ್ ಹೈದರಾಬಾದ್ ತಂಡವು ತನ್ನ ಲೀಗ್ ಹಂತದ ಕೊನೆಯ ಪಂದ್ಯವನ್ನಾಡಲು ಸಜ್ಜಾಗುವ ಮುನ್ನ ಆರೆಂಜ್ ಆರ್ಮಿಯ ಮಾಜಿ ನಾಯಕ ಡೇವಿಡ್ ವಾರ್ನರ್ ತಮ್ಮ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಡೇವಿಡ್ ವಾರ್ನರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ (Instagram) ಖಾತೆಯಲ್ಲಿ ತಾವು ಸನ್‌ರೈಸರ್ಸ್ ಹೈದರಾಬಾದ್ ತಂಡದ ಜೆರ್ಸಿ ತೊಟ್ಟಿರುವ ಫೋಟೋದೊಂದಿಗೆ ಅಭಿಮಾನಿಗಳಿಗೆ ಹಾಗೂ ಫ್ರಾಂಚೈಸಿ ಕುರಿತಂತೆ ಭಾವನಾತ್ಮಕ ಸಂದೇಶ ಬರೆದುಕೊಂಡಿದ್ದಾರೆ.
undefined
IPL 2021 ಮುಂದಿನ ಆವೃತ್ತಿಯಲ್ಲಿ ನೀವು ನನ್ನನ್ನು CSK ಜೆರ್ಸಿಯಲ್ಲಿ ಕಾಣಬಹುದು, ಆದರೆ..?
ಹೌದು, ಮುಂಬೈ ಇಂಡಿಯನ್ಸ್ (Mumbai Indians) ವಿರುದ್ದದ ಪಂದ್ಯಕ್ಕೂ ಮುನ್ನ ಡೇವಿಡ್ ವಾರ್ನರ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ, ಅವಿಸ್ಮರಣೀಯ ನೆನಪುಗಳು ಸಿಕ್ಕಿದ್ದಕ್ಕೆ ಧನ್ಯವಾದಗಳು. ನೀವು ತೋರಿದ 100% ಪ್ರೀತಿ, ಬೆಂಬಲಕ್ಕೆ ನಾನು ಕೇವಲ ಪದಗಳಲ್ಲಿ ಥ್ಯಾಂಕ್ಯೂ ಹೇಳಿದರೆ ಅದು ಕಮ್ಮಿಯಾಗುತ್ತದೆ. ಇದೊಂದು ರೀತಿ ಅದ್ಭುತ ಪಯಣ. ನಾನು ಹಾಗೂ ನನ್ನ ಕುಟುಂಬ ನಿಮ್ಮೆಲ್ಲರನ್ನು ಮಿಸ್ ಮಾಡಿಕೊಳ್ಳಲಿದೆ ಎಂದು ವಾರ್ನರ್ ಬರೆದುಕೊಂಡಿದ್ದಾರೆ. ಇದರ ಜತೆಗೆ #respect #cricket #hyderabad ಎನ್ನುವ ಹ್ಯಾಷ್ ಟ್ಯಾಗ್ ನೀಡಿದ್ದು, ಮತ್ತಷ್ಟು ಕುತೂಹಲ ಹುಟ್ಟುವಂತೆ ಮಾಡಿದೆ.
ಡೇವಿಡ್ ವಾರ್ನರ್ ಕಳೆದ 8 ವರ್ಷಗಳಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದರು. 2016ರಲ್ಲಿ ನಡೆದ ಐಪಿಎಲ್ ಟೂರ್ನಿಯ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಬ್ಯಾಟಿಂಗ್ ಫಾರ್ಮ್ ಕೊರತೆ ಅನುಭವಿಸುತ್ತಿದ್ದ ಡೇವಿಡ್ ವಾರ್ನರ್ ಅವರನ್ನು ಹೈದರಾಬಾದ್ ಫ್ರಾಂಚೈಸಿ ಮಧ್ಯದಲ್ಲೇ ನಾಯಕತ್ವದಿಂದ ಕೆಳಗಿಳಿಸಿ ಕೇನ್ ವಿಲಿಯಮ್ಸನ್ ಅವರಿಗೆ ನಾಯಕತ್ವ ಪಟ್ಟ ಕಟ್ಟಲಾಯಿತು. ಆದರೂ ತಂಡದ ಪರಿಸ್ಥಿತಿ ಬದಲಾಗಿರಲಿಲ್ಲ.
IPL 2021: ಹೈದರಾಬಾದ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದರೂ ಮುಂಬೈ ಪ್ಲೇ ಆಫ್ ಕನಸು ಭಗ್ನ!
2022ರ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಡೇವಿಡ್ ವಾರ್ನರ್ ಅವರನ್ನು ತಂಡದಿಂದ ಕೈಬಿಡಲಿದೆ ಎನ್ನುವ ಮಾತುಗಳು ಕೇಳಿ ಬರಲಾರಂಭಿಸಿವೆ. ಇದಷ್ಟೇ ಅಲ್ಲದೇ ಯುಎಇ ಚರಣದ ಕೊನೆಯ ಕೆಲ ಪಂದ್ಯಗಳಲ್ಲಿ ವಾರ್ನರ್ ಅವರನ್ನು ತಂಡದಿಂದ ದೂರವೇ ಇಡಲಾಗಿತ್ತು ಎಂದು ಸಹ ವರದಿಯಾಗಿತ್ತು. ಈ ಮಾತಿಗೆ ಪುಷ್ಠಿ ಕೊಡುವಂತೆ ಡೇವಿಡ್ ವಾರ್ನರ್ ಹೈದರಾಬಾದ್ ತಂಡದ ಪೆವಿಲಿಯನ್ನಿನಲ್ಲಿರದೇ ಪ್ರೇಕ್ಷಕರ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದರು. ತಂಡ ವಾರ್ನರ್ ಅವರನ್ನು ಹೊರಗಿಟ್ಟರೂ, ಇದುವರೆಗೂ ಡೇವಿಡ್ ವಾರ್ನರ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಒಂದೇ ಒಂದು ಬೇಸರದ ಮಾತು ಆಡಿಲ್ಲ. ಬದಲಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಬೆಂಬಲಿಸುತ್ತಲೇ ಬಂದಿದ್ದಾರೆ.