
ಚೆನ್ನೈ(ಏ.18): ಆರಂಭಿಕ ಆಘಾತದ ಹೊರತಾಗಿಯೂ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಎಬಿ ಡಿವಿಲಿಯರ್ಸ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 4 ವಿಕೆಟ್ ಕಳೆದುಕೊಂಡು 204 ರನ್ ಬಾರಿಸಿದ್ದು, ಕೆಕೆಆರ್‌ಗೆ ಗೆಲ್ಲಲು ಕಠಿಣ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆರ್‌ಸಿಬಿ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರ್‌ಸಿಬಿ ಎರಡಂಕಿ ಮೊತ್ತ ದಾಖಲಿಸುವಷ್ಟರಲ್ಲಿ ವಿರಾಟ್ ಕೊಹ್ಲಿ ಹಾಗೂ ರಜತ್ ಪಾಟೀದಾರ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಯಿತು. ಬಳಿಕ ಮೂರನೇ ವಿಕೆಟ್‌ಗೆ ದೇವದತ್ ಪಡಿಕ್ಕಲ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಜೋಡಿ 86 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಪಡಿಕ್ಕಲ್ 25 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಆಕರ್ಷಕ ಬ್ಯಾಟಿಂಗ್ ನಡೆಸಿದ ಗ್ಲೆನ್ ಮ್ಯಾಕ್ಸ್ 49 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 78 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್ 34 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ ಅಜೇಯ 76 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.