IPL 2021 ನಾಯಕ ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ತುಟಿಬಿಚ್ಚಿದ ಸಿಎಸ್‌ಕೆ..!

Suvarna News   | Asianet News
Published : Oct 10, 2021, 06:21 PM IST
IPL 2021 ನಾಯಕ ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ತುಟಿಬಿಚ್ಚಿದ ಸಿಎಸ್‌ಕೆ..!

ಸಾರಾಂಶ

* ಧೋನಿ ಕ್ರಿಕೆಟ್ ಭವಿಷ್ಯದ ಬಗ್ಗೆ ತುಟಿ ಬಿಚ್ಚಿದ ಸಿಎಸ್‌ಕೆ  * ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೂರು ಬಾರಿ ಚಾಂಪಿಯನ್‌ ಪಟ್ಟಕ್ಕೇರಿಸಿರುವ ಧೋನಿ * ಸಿಎಸ್‌ಕೆ ತಂಡದ ಅತ್ಯಂತ ಯಶಸ್ವಿ ನಾಯಕ ಧೋನಿ

ನವದೆಹಲಿ(ಅ.10): ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ಎಂ.ಎಸ್‌.ಧೋನಿ (MS Dhoni) ಮುಂದಿನ ಆವೃತ್ತಿಯ ಐಪಿಎಲ್‌ನಲ್ಲೂ ಚೆನ್ನೈ ಸೂಪರ್ ಕಿಂಗ್ಸ್‌ (Chennai Super Kings) ತಂಡದ ಪರ ಆಡಲಿದ್ದಾರೆ ಎಂದು ತಂಡದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

‘ಮಹೇಂದ್ರ ಸಿಂಗ್ ಧೋನಿ ಮತ್ತೊಂದು ಆವೃತ್ತಿಯಲ್ಲಿ ಚೆನ್ನೈ ತಂಡವನ್ನು ಪ್ರತಿನಿಧಿಸುವ ವಿಶ್ವಾಸವಿದೆ. ಅವರು ಚೆಪಾಕ್‌ ಕ್ರೀಡಾಂಗಣದಲ್ಲಿ (chepauk stadium) ಕೊನೆಯ ಪಂದ್ಯವನ್ನು ಆಡಲು ಇಚ್ಛಿಸುತ್ತಿದ್ದಾರೆ’ ಎಂದಿದ್ದರು. ಇತ್ತೀಚೆಗಷ್ಟೇ ಧೋನಿ ಕೂಡಾ ‘ಚೆನ್ನೈನಲ್ಲೇ ನನ್ನ ಕೊನೆಯ ಪಂದ್ಯ ಆಡುತ್ತೇನೆ’ ಎಂದಿದ್ದರು. ಇದಾಗಿ ಕೆಲ ದಿನಗಳ ಬಳಿಕ ‘ಮುಂದಿನ ಐಪಿಎಲ್‌ನಲ್ಲಿ ಆಡುತ್ತೇನೋ ಇಲ್ಲವೋ ಎಂದು ಈಗಲೇ ಹೇಳಲು ಸಾಧ್ಯವಿಲ್ಲ’ ಎಂದಿದ್ದರು. ಇದಕ್ಕೆ ಸಾಮಾಜಿಕ ತಾಣಗಳಲ್ಲಿ ಹಲವರು ಅಚ್ಚರಿ ವ್ಯಕ್ತಪಡಿಸಿದ್ದರು. 

IPL 2021 ಮುಂದಿನ ಆವೃತ್ತಿಯಲ್ಲಿ ನೀವು ನನ್ನನ್ನು CSK ಜೆರ್ಸಿಯಲ್ಲಿ ಕಾಣಬಹುದು, ಆದರೆ..?

ಪಂಜಾಬ್ ಕಿಂಗ್ಸ್‌ (Punjab Kings) ವಿರುದ್ದ ಪಂದ್ಯದ ಟಾಸ್ ವೇಳೆ ಧೋನಿ ಭವಿಷ್ಯದ ಕುರಿತಂತೆ ಪ್ರಶ್ನೆ ಎದುರಾದಾಗ, ಮುಂದಿನ ಆವೃತ್ತಿಯಲ್ಲೂ ನೀವು ನನ್ನನ್ನು ಹಳದಿ ಜೆರ್ಸಿಯಲ್ಲಿ ಕಾಣಲಿದ್ದೀರ. ಆದರೆ ನಾನು ಚೆನ್ನೈ ತಂಡದ ಆಟಗಾರನಾಗಿ ಕಾಣಿಸಿಕೊಳ್ಳುತ್ತೇನೆ ಎನ್ನುವ ಕುರಿತಂತೆ ಈಗಲೇ ಹೇಳಲು ಸಾಧ್ಯವಿಲ್ಲ. ಈ ಕುರಿತಂತೆ ಸಾಕಷ್ಟು ಅನಿಶ್ಚಿತತೆಗಳಿವೆ. ಮುಂದಿನ ಆವೃತ್ತಿಯಲ್ಲಿ ಹೊಸ ಎರಡು ತಂಡಗಳು ಸೇರ್ಪಡೆಯಾಗಲಿವೆ. ಎಷ್ಟು ಆಟಗಾರರನ್ನು ರೀಟೈನ್‌ ಮಾಡಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶವಿದೆ ಎನ್ನುವ ಕುರಿತಂತೆ ಮಾಹಿತಿಯಿಲ್ಲ. ಹೀಗಾಗಿ ಈಗಲೇ ಏನು ಹೇಳಲು ಸಾಧ್ಯವಿಲ್ಲ ಎಂದಿದ್ದರು. ಈ ನಡುವೆ ಧೋನಿ 2022ರಲ್ಲಿ ಹೊಸ ತಂಡದ ಪರ ಆಡಲಿದ್ದಾರೆ ಎಂಬ ವದಂತಿಯೂ ಹರಿದಾಡುತ್ತಿದೆ.

IPL 2021 ಹೀಗಿತ್ತು ನೋಡಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ಲೇ ಆಫ್‌ವರೆಗಿನ ಹಾದಿ..!

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರು ಬಾರಿ ಐಪಿಎಲ್ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅಡಿದ 10 ಆವೃತ್ತಿಗಳಲ್ಲೂ ಪ್ಲೇ ಆಫ್‌ ಹಂತ ಪ್ರವೇಶಿಸಿದ ಏಕೈಕ ತಂಡ ಎನ್ನುವ ಕೀರ್ತಿಗೂ ಧೋನಿ ಪಡೆ ಪಾತ್ರವಾಗಿತ್ತು. ಆದರೆ ಕಳೆದ ಆವೃತ್ತಿಯಲ್ಲಿ ಅಂದರೆ ಯುಎಇನಲ್ಲಿ ನಡೆದ 2020ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಬಾರಿಗೆ ಪ್ಲೇ ಆಫ್‌ಗೇರಲು ವಿಫಲವಾಗಿತ್ತು. ಆದರೆ ಈ ಬಾರಿ ಮತ್ತೊಮ್ಮೆ ಫಿನಿಕ್ಸ್‌ನಂತೆ ಎದ್ದುಬಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡವು ಇನ್ನೂ 3 ಪಂದ್ಯಗಳು ಬಾಕಿ ಇರುವಂತೆಯೇ ಮೊದಲ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಯಶಸ್ವಿಯಾಗಿತ್ತು. 

ಇದೀಗ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 14 ಪಂದ್ಯಗಳ ಪೈಕಿ 9 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನ ಪಡೆದು ಮೊದಲ ಕ್ವಾಲಿಫೈಯರ್‌ ಪಂದ್ಯವನ್ನಾಡಲು ಸಜ್ಜಾಗಿದೆ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿಂದು ಸಿಎಸ್‌ಕೆ ತಂಡವು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವು ನೇರವಾಗಿ ಫೈನಲ್‌ಗೆ ಲಗ್ಗೆಯಿಡಲಿದೆ. ಲೀಗ್‌ ಹಂತದ ಕೊನೆಯ ಮೂರು ಪಂದ್ಯಗಳಲ್ಲಿ ಹ್ಯಾಟ್ರಿಕ್‌ ಸೋಲು ಅನುಭವಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮಹತ್ವದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಡುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?