
ನವದೆಹಲಿ(ಏ.30): ರಾಜಸ್ಥಾನ ರಾಯಲ್ಸ್ ವಿರುದ್ದ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಐಪಿಎಲ್ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ.
ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದ ಬೆನ್ನಲ್ಲೇ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿಗೆ ಮೈದಾನದಲ್ಲೇ ಮುತ್ತಿಕ್ಕಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ದ ಗೆಲುವು ಸಾಧಿಸಿದಾಗ ಸೂರ್ಯ ಪತ್ನಿ ದೇವಿಶಾ ಶೆಟ್ಟಿ ಸ್ಟೇಡಿಯಂನಲ್ಲಿ ಉಪಸ್ಥಿತರಿದ್ದರು. ದೇವಿಶಾ ಶೆಟ್ಟಿ ಸ್ಟೇಡಿಯಂನ ಗ್ಲಾಸ್‌ನ ಹಿಂಬದಿಯಲ್ಲಿದ್ದರು. ಮೈದಾನದಲ್ಲಿದ್ದ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿಗೆ ಚುಂಬಿಸಲು ಹತ್ತಿರ ಬಂದಿದ್ದಾರೆ. ಆಗ ದೇವಿಶಾ ತಮ್ಮ ಕೆನ್ನೆಯನ್ನು ಮುಂದೆ ನೀಡಿದ್ದಾರೆ. ತಡಮಾಡದ ಸೂರ್ಯ, ಗ್ಲಾಸ್‌ನ ಮತ್ತೊಂದು ತುದಿಯಿಂದ ಮುತ್ತಿಕ್ಕಿದ್ದಾರೆ.
ಈ ಸುಂದರ ಕ್ಷಣವನ್ನು ಜಹೀರ್ ಖಾನ್ ಪತ್ನಿ ಸಾಗರಿಕ ಘಾಟ್ಗೆ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಆಟಗಾರರು ಬಯೋ ಬಬಲ್‌ನಲ್ಲಿ ತಮ್ಮ ಮಡದಿಯರ ಜತೆ ಇರಲು ಅವಕಾಶ ಮಾಡಿಕೊಟ್ಟಿದೆ. ರಾಜಸ್ಥಾನ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಸೂರ್ಯ ತಮ್ಮ ಪತ್ನಿಯನ್ನು ಹೆಚ್ಚು ಖುಷಿಪಡಿಸಲು ಸಾಧ್ಯವಾಗಲಿಲ್ಲ. ಸೂರ್ಯ ಕೇವಲ 10 ಎಸೆತಗಳನ್ನು ಎದುರಿಸಿ 16 ರನ್ ಬಾರಿಸಲಷ್ಟೇ ಶಕ್ತರಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.