
ಶಾರ್ಜಾ(ಅ.05): IPL 2021ರ ಟೂರ್ನಿ ಇದೀಗ ರೋಚಕ ಘಟ್ಟ ತಲುಪಿದೆ. ಕಾರಣ ಪ್ಲೇ ಆಫ್(ipl playoffs) ಸುತ್ತಿನ ಪಂದ್ಯಕ್ಕೆ ಈಗಾಗಲೇ 3 ತಂಡಗಳು ಸ್ಥಾನ ಖಚಿತಪಡಿಸಿದೆ. ಇನ್ನುಳಿದ ಒಂದು ಸ್ಥಾನಕ್ಕಾಗಿ 4 ತಂಡಗಳು ಹೋರಾಟ ನಡೆಸುತ್ತಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್(Mumbai Indians) ಹಾಗೂ ರಾಜಸ್ಥಾನ ರಾಯಲ್ಸ್(Rajasthan Royals) ಕೂಡ ಪ್ಲೇ ಆಫ್ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಇಂದು ಶಾರ್ಜಾ(Sharjah) ಮೈದಾನದಲ್ಲಿನ ಈ ಪಂದ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
IPL 2021 ಕ್ವಾಲಿಫೈ ಲೆಕ್ಕಾಚಾರ: KKR, ಪಂಜಾಬ್, ರಾಜಸ್ಥಾನ & ಮುಂಬೈಗೆ ಈಗಲೂ ಇದೆ ಪ್ಲೇ-ಆಫ್‌ಗೇರುವ ಅವಕಾಶ..!
ಇಂದಿನ ಪಂದ್ಯಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಕೆಲ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಆದರೆ ಮುಂಬೈ ಇಂಡಿಯನ್ಸ್ ಬದಲಾವಣೆಗೆ ಕೈಹಾಕುವ ಸಾಧ್ಯತೆ ಕಡಿಮೆ.
ರಾಜಸ್ಥಾನ ರಾಯಲ್ಸ್ ಸಂಭಾವ್ಯ ಪ್ಲೇಯಿಂಗ್ 11:
ಇವನ್ ಲಿವಿಸ್, ಯಶಸ್ವಿ ಜಸ್ವಾಲ್, ಸಂಜು ಸ್ಯಾಮ್ಸನ್, ಶಿವಂ ದುಬೆ, ಗ್ಲೆನ್ ಫಿಲಿಪ್, ಡೇವಿಡ್ ಮಿಲ್ಲರ್, ರಾಹುಲ್ ಟಿವಾಟಿಯಾ, ಆಕಾಶ್ ಸಿಂಗ್, ಮಯಾಂಕ್ ಮರ್ಕಂಡೆ, ಚೇತನ್ ಸಕಾರಿಯಾ, ಮುಸ್ತಾಫಿಜುರ್ ರಹಮಾನ್
IPL 2021: ಚೆನ್ನೈ ಸೋಲಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ ಡೆಲ್ಲಿ!
ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ 11:
ರೋಹಿತ್ ಶರ್ಮಾ, ಕ್ವಿಂಟನ್ ಡಿಕಾಕ್, ಸೂರ್ಯಕುಮಾರ್ ಯಾದವ್, ಸೌರಬ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ನಥನ್ ಕೌಲ್ಟರ್ ನೈಲ್, ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್
IPL 2021: ಹೈದರಾಬಾದ್ ವಿರುದ್ಧ ಗೆಲುವು, KKR ಪ್ಲೇ ಆಫ್ ಕನಸಿಗೆ ಮತ್ತಷ್ಟು ಜೀವ!
ಅಂಕಪಟ್ಟಿ:
ಐಪಿಎಲ್ 2021 ಟೂರ್ನಿ ಅಂಕಪಟ್ಟಿಯಲ್ಲಿ ರಾಜಸ್ಥಾನ ರಾಯಲ್ಸ್ 6ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ 7ನೇ ಸ್ಥಾನದಲ್ಲಿದೆ. ಎರಡೂ ತಂಡಗಳು 10 ಅಂಕ ಸಂಪಾದಿಸಿದೆ. ಆದರೆ ನೆಟ್‌ರನ್ ರೇಟ್ ಆಧಾರದಲ್ಲಿ ರಾಜಸ್ಥಾನ ಮುಂಬೈಗಿಂತ ಮೇಲಿದೆ. ಈ ಬಾರಿ ರಾಜಸ್ಥಾನ ಆಡಿದ 12 ಪಂದ್ಯದಲ್ಲಿ 5 ಗೆಲುವು ಹಾಗೂ 7 ಸೋಲು ಕಂಡಿದೆ. ಇತ್ತ ಮುಂಬೈ ಕೂಡ 12ರಲ್ಲಿ 5 ಗೆಲುವು ಹಾಗೂ 7 ಸೋಲು ಕಂಡಿದೆ.
IPL 2021: RCB vs PBKS ಇದು ನಿಮ್ಮ ಪ್ರಕಾರ out/Not out?
ಸನ್‌ರೈಸರ್ಸ್ ಹೈದರಾಬಾದ್ ತಂಡ ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದೆ. ಸದ್ಯ ನಾಲ್ಕನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಪ್ಲೇ ಆಫ್ ಸ್ಥಾನ ಖಚಿತಪಡಿಸುವ ಹೆಚ್ಚಿನ ಅವಕಾಶಗಳಿದೆ. ಇನ್ನೊಂದು ಪಂದ್ಯವನ್ನು ಉತ್ತಮ ರನ್‌ರೇಟ್‌ನಿಂದ ಗೆಲ್ಲಬೇಕಿದೆ. ಇನ್ನು ಪ್ಲೇ ಆಫ್ ಹಂತಕ್ಕೆ ಎಂಟ್ರಿಕೊಡಲಿರುವ ನಾಲ್ಕನೇ ತಂಡ ಯಾವುದು ಅನ್ನೋದು ಇನ್ನೂ ಕುತೂಹಲವಾಗಿದೆ.
ಐಪಿಎಲ್ 2021ರ ಟ್ರೋಫಿ ಮುತ್ತಿಕ್ಕುವ ತಂಡ ಯಾವುದು ಅನ್ನೋದು ಇನ್ನು 10 ದಿನದಲ್ಲಿ ತಿಳಿಯಲಿದೆ. ಆದರೆ ಫೈನಲ್ ಪ್ರವೇಶಕ್ಕೆ 7 ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.