ಐಪಿಎಲ್‌ ಭಾಗ-2ಕ್ಕೆ ಬಹುತೇಕ ವಿದೇಶಿ ಆಟಗಾರರ ಕೊರತೆ?

Suvarna News   | Asianet News
Published : May 28, 2021, 09:18 AM IST
ಐಪಿಎಲ್‌ ಭಾಗ-2ಕ್ಕೆ ಬಹುತೇಕ ವಿದೇಶಿ ಆಟಗಾರರ ಕೊರತೆ?

ಸಾರಾಂಶ

* ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಐಪಿಎಲ್ 2021 ಭಾಗ 2 ಟೂರ್ನಿ ಆಯೋಜಿಸಲು ಬಿಸಿಸಿಐ ಸಿದ್ದತೆ * ಕೋವಿಡ್ ಕಾರಣದಿಂದಾಗಿ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಮುಂದೂಡಲ್ಪಟ್ಟಿದೆ. * ಐಪಿಎಲ್‌ 2021 ಭಾಗ-2ನಲ್ಲಿ ಸಾಕಷ್ಟು ವಿದೇಶಿ ತಾರಾ ಆಟಗಾರರು ಪಾಲ್ಗೊಳ್ಳುವುದು ಅನುಮಾನ  

ನವದೆಹಲಿ(ಮೇ.28): ಸೆಪ್ಟೆಂಬರ್‌-ಅಕ್ಟೋಬರ್‌ನಲ್ಲಿ 14ನೇ ಆವೃತ್ತಿ ಐಪಿಎಲ್‌ನ ಭಾಗ-2 ನಡೆಸಲು ಯೋಜನೆ ರೂಪಿಸುತ್ತಿರುವ ಬಿಸಿಸಿಐಗೆ ಹೊಸ ಸಮಸ್ಯೆ ಶುರುವಾಗಿದೆ. 

ಈ ಅವಧಿಯಲ್ಲಿ ಬಹುತೇಕ ಎಲ್ಲಾ ರಾಷ್ಟ್ರಗಳಿಗೂ ದ್ವಿಪಕ್ಷೀಯ ಸರಣಿಗಳಿದ್ದು, ಹಲವು ತಾರಾ ವಿದೇಶಿ ಆಟಗಾರರು ಐಪಿಎಲ್‌ಗೆ ಅಲಭ್ಯರಾಗುವ ಆತಂಕ ಎದುರಾಗಿದೆ. ಇಂಗ್ಲೆಂಡ್‌ ತಂಡ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಲ್ಲಿ ಸರಣಿ ಆಡಲಿದೆ. ನ್ಯೂಜಿಲೆಂಡ್‌ಗೂ ಪಾಕಿಸ್ತಾನ ವಿರುದ್ಧ ಸರಣಿ ಇದ್ದು, ಆಸ್ಪ್ರೇಲಿಯಾ ತಂಡ ಶ್ರೀಲಂಕಾಕ್ಕೆ ಆತಿಥ್ಯ ವಹಿಸಲಿದೆ. ದಕ್ಷಿಣ ಆಫ್ರಿಕಾಕ್ಕೆ ನೆದರ್‌ಲೆಂಡ್ಸ್‌ ವಿರುದ್ಧ ಸರಣಿ ಇದೆ. ಇದೆಲ್ಲದರ ಜೊತೆಗೆ ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ ಸಹ ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ನಡೆಯಲಿದ್ದು, ಸೆ.18ಕ್ಕೆ ಟೂರ್ನಿ ಮುಗಿಯಲಿದೆ. ಯುಇಎ ಸರ್ಕಾರ ಕ್ವಾರಂಟೈನ್‌ ಕಡ್ಡಾಯಗೊಳಿಸಿದರೆ ವಿಂಡೀಸ್‌ ಆಟಗಾರರ ಪಾಲ್ಗೊಳ್ಳುವಿಕೆ ಸಹ ಕಷ್ಟವೆನಿಸಿದೆ.

ಕ್ರಿಕೆಟ್ ಅಭಿಮಾನಿಗಳಿಗೆ ಗುಡ್‌ನ್ಯೂಸ್: ಐಪಿಎಲ್ 2021 ಭಾಗ-2 ವೇಳಾಪಟ್ಟಿ ಫೈನಲ್‌..!

14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಮೊದಲ ಹಂತದಲ್ಲಿ 29 ಪಂದ್ಯಗಳು ಅತ್ಯಂತ ಯಶಸ್ವಿಯಾಗಿ ನಡೆದಿದ್ದವು. ಇದಾದ ಬಳಿಕ ಬಯೋ ಬಬಲ್‌ನೊಳಗೆ ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ದೃಢಪಟ್ಟಿದ್ದರಿಂದ ಬಿಸಿಸಿಐ ಈ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಇನ್ನೂ 31 ಪಂದ್ಯಗಳು ನಡೆಯಬೇಕಿವೆ. ಇನ್ನುಳಿದ ಐಪಿಎಲ್ ಪಂದ್ಯಗಳನ್ನು ಸೆಪ್ಟೆಂಬರ್ 19ರಿಂದ ಅಕ್ಟೋಬರ್ 10ರವರೆಗೆ ನಡೆಸಲು ಬಿಸಿಸಿಐ ಲೆಕ್ಕಾಚಾರ ಹಾಕುತ್ತಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
"

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!