ಐಪಿಎಲ್‌ 2021: ಆಟಗಾರರ ಹರಾಜಿಗೆ ಡೇಟ್‌ ಫಿಕ್ಸ್‌..?

Kannadaprabha News   | Asianet News
Published : Jan 23, 2021, 01:14 PM IST
ಐಪಿಎಲ್‌ 2021: ಆಟಗಾರರ ಹರಾಜಿಗೆ ಡೇಟ್‌ ಫಿಕ್ಸ್‌..?

ಸಾರಾಂಶ

14ನೇ ಆವೃತ್ತಿಯ ಐಪಿಎಲ್‌ ಟೂರ್ನಿಗೂ ಮುನ್ನ ನಡೆಯಲಿರುವ ಮಿನಿ ಹರಾಜು ಯಾವಾಗ ಎನ್ನುವ ಗುಟ್ಟನ್ನು ಬಿಸಿಸಿಐ ಉನ್ನತ ಮೂಲಗಳು ಬಿಟ್ಟುಕೊಟ್ಟಿವೆ. ಹಾಗಾದ್ರೆ ಯವಾಗ ಐಪಿಎಲ್ ಹರಾಜು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ನವದೆಹಲಿ(ಜ.23): 2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹರಾಜು ಪ್ರಕ್ರಿಯೆ ಫೆಬ್ರವರಿ 18ರಂದು ನಡೆಯುವ ಸಾಧ್ಯತೆಯಿದೆ. ಹರಾಜು ಪ್ರಕ್ರಿಯೆಯನ್ನು ಎಲ್ಲಿ ನಡೆಸಬೇಕು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. 

3 ದಿನಗಳ ಹಿಂದಷ್ಟೇ ಎಲ್ಲ 8 ತಂಡಗಳು ತಾವು ಉಳಿಸಿಕೊಳ್ಳಲು ಇಚ್ಛಿಸುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದವು. ಹರಾಜಿನಲ್ಲಿ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಸೇರಿದಂತೆ ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಆಟಗಾರರು ಪಾಲ್ಗೊಳ್ಳಲಿದ್ದಾರೆ. 

ಗ್ಲೆನ್‌ ಮ್ಯಾಕ್ಸ್‌ವೆಲ್‌ ಖರೀದಿಗೆ RCB ಸೇರಿದಂತೆ ಈ 3 ತಂಡಗಳಿಂದ ಪೈಪೋಟಿ..?

ಇದೇ ವೇಳೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಭಾರತದಲ್ಲೇ ನಡೆಸಬೇಕೆ ಇಲ್ಲವೇ ಕಳೆದ ಆವೃತ್ತಿಯಂತೆ ಯುಎಇಗೆ ಸ್ಥಳಾಂತರಿಸಬೇಕೆ ಎನ್ನುವುದನ್ನೂ ಸಹ ಇನ್ನೂ ನಿರ್ಧರಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾತ್ರ ಹಲವು ಬಾರಿ 2021ರ ಐಪಿಎಲ್ ಭಾರತದಲ್ಲೇ ನಡೆಯಲಿದೆ ಎಂದು ಹೇಳಿದ್ದಾರೆ.   

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!
U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!