ರೋಹಿತ್ ಶರ್ಮಾ ಹಾಫ್ ಸೆಂಚುರಿ; ಪಂಜಾಬ್ ಕಿಂಗ್ಸ್‌ಗೆ ಸುಲಭ ಗುರಿ!

Published : Apr 23, 2021, 09:13 PM IST
ರೋಹಿತ್ ಶರ್ಮಾ ಹಾಫ್ ಸೆಂಚುರಿ; ಪಂಜಾಬ್ ಕಿಂಗ್ಸ್‌ಗೆ ಸುಲಭ ಗುರಿ!

ಸಾರಾಂಶ

ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್  ಮುಂಬೈ ಇಂಡಿಯನ್ಸ್ ಅಲ್ಪಮೊತ್ತಕ್ಕೆ ಕುಸಿಯುವುದನ್ನು ತಡೆದಿದ್ದಾರೆ. ಆದರೆ ಮುಂಬೈ ಇಂಡಿಯನ್ಸ್ ಸ್ಫೋಟಕ ಬ್ಯಾಟಿಂಗ್ ಕಾಣದ ಅಭಿಮಾನಿಗಳು ನಿರಾಶರಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಬ್ಯಾಟಿಂಗ್ ಹೈಲೈಟ್ಸ್ ಇಲ್ಲಿದೆ.

ಮುಂಬೈ(ಏ.23):  ಪಂಜಾಬ್ ಕಿಂಗ್ಸ್ ಲೆಕ್ಕಾಚಾರ ಚೆನ್ನಾಗಿ ವರ್ಕೌಟ್ ಆಗಿದೆ. ಮುಂಬೈ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿ ಅಬ್ಬರಕ್ಕೆ ಬ್ರೇಕ್ ಹಾಕಲು ಕೆಎಲ್ ರಾಹುಲ್ ಸೈನ್ಯ ಯಶಸ್ವಿಯಾಗಿದೆ. ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಹೋರಾಟದಿಂದ ಮುಂಬೈ 6 ವಿಕೆಟ್ ಕಳೆದುಕೊಂಡು 131 ರನ್ ಸಿಡಿಸಿದೆ.

ಆರಂಭದಲ್ಲೇ ಕ್ವಿಂಟನ್ ಡಿಕಾಕ್ ಹಾಗೂ ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ನಾಯಕ ರೋಹಿತ್ ಶರ್ಮಾಹಾಗೂ ಸೂರ್ಯಕುುಮಾರ್ ಯಾದವ್ ಜೊತೆಯಾಟದಿಂದ ಮುಂಬೈ ಚೇತರಿಸಿಕೊಂಡಿತು. ಸೂರ್ಯಕುಮಾರ್ 33 ರನ್ ಸಿಡಿಸಿ ಔಟಾದರು.

ಹಾಫ್ ಸೆಂಚುರಿ ಸಿಡಿಸಿದ ರೋಹಿತ್ ಶರ್ಮಾ ರನ್ ವೇಗ ಹೆಚ್ಚಿಸೋ ಪ್ರಯತ್ನ ಮಾಡಿದರು. ಆದರೆ ರೋಹಿತ್ 63 ರನ್ ಸಿಡಿಸಿ ಔಟಾದರು. ಹಾರ್ದಿಕ್ ಕೇವಲ 1 ರನ್ ಸಿಡಿಸಿ ಔಟಾದರು. ಕೀರನ್ ಪೊಲಾರ್ಡ್ ಅಜೇಯ 16 ರನ್ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 6 ವಿಕೆಟ್ ನಷ್ಟಕ್ಕೆ 131 ರನ್ ಸಿಡಿಸಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಕೆಆರ್‌ಗೆ ಮತ್ತೊಂದು ಶಾಕ್: ಹರ್ಷಿತ್ ರಾಣಾ ಬಳಿಕ ಮತ್ತೋರ್ವ ಪ್ರಮುಖ ವೇಗಿ ಐಪಿಎಲ್ ಸೀಸನ್‌ನಿಂದಲೇ ಔಟ್?
ಇಬ್ರು ಗೆಳತಿಯರ ಜೊತೆ ಮನೆಯಲ್ಲಿದ್ದೆ, ಮೈಕ್ ಆನ್ ಮರೆತು ಖುಲ್ಲಂ ಖುಲ್ಲಾ ಮಾತಾಡಿದ ಬ್ರಾವೋ