
ಚೆನ್ನೈ(ಏ.21): ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಪಂಜಾಬ್ ಕಿಂಗ್ಸ್ ಎದುರು ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ತೋರಿದೆ. ಪರಿಣಾಮ ಪಂಜಾಬ್ ಕಿಂಗ್ಸ್ ಕೇವಲ 120 ರನ್‌ಗಳಿಗೆ ಸರ್ವಪತನ ಕಂಡಿದೆ. ಇದರೊಂದಿಗೆ ಪಂಜಾಬ್ ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕನಿಷ್ಠ ಮೊತ್ತದ ಗುರಿ ನೀಡಿದೆ.
ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪಂಜಾಬ್ ತಂಡ ಆರಂಭದಲ್ಲೇ ನಾಯಕ ಕೆ.ಎಲ್. ರಾಹುಲ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ರಾಹುಲ್ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮತ್ತೋರ್ವ ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್‌ವಾಲ್ ಆಟ 22 ರನ್‌ಗಳಿಗೆ ಸೀಮಿತವಾಯಿತು.
ಕೈಕೊಟ್ಟ ಮಧ್ಯಮ ಕ್ರಮಾಂಕ: ಬಲಿಷ್ಠ ಬ್ಯಾಟಿಂಗ್ ಕ್ರಮಾಂಕ ಹೊಂದಿರುವ ಪಂಜಾಬ್ ಕಿಂಗ್ಸ್ ಬ್ಯಾಟ್ಸ್‌ಮನ್‌ಗಳು ತಮ್ಮ ಸಾಮರ್ಥ್ಯಕ್ಕೆ ತಕ್ಕಂತ ಆಟವಾಡಲಿಲ್ಲ. ನಿಕೋಲಸ್ ಪೂರನ್ ಖಾತೆ ತೆರೆಯುವ ಮುನ್ನವೇ ರನೌಟ್ ಆಗಿ ಪೆವಿಲಿಯನ್ ಸೇರಿದರೆ, ಯೂನಿವರ್ಸೆಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್(15)ರನ್ನು ಮತ್ತೊಮ್ಮೆ ಪೆವಿಲಿಯನ್ ಹಾದಿ ತೋರಿಸುವಲ್ಲಿ ರಶೀದ್ ಖಾನ್ ಯಶಸ್ವಿಯಾದರು. ದೀಪಕ್ ಹೂಡಾ(13), ಹೆನ್ರಿಕೇಸ್(14) ಹಾಗೂ ಶಾರುಕ್ ಖಾನ್(22) ರಿಂದ ದೊಡ್ಡ ಇನಿಂಗ್ಸ್ ಮೂಡಿ ಬರಲಿಲ್ಲ.
ಸನ್‌ರೈಸರ್ಸ್ ಹೈದರಾಬಾದ್ ಪರ ಶಿಸ್ತಿನ ದಾಳಿ ನಡೆಸಿದ ಖಲೀಲ್ ಅಹಮದ್ ಕೇವಲ 21 ರನ್ ನೀಡಿ 3 ವಿಕೆಟ್ ಪಡೆದರೆ, ಅಭಿಷೇಕ್ ಶರ್ಮಾ 2 ಹಾಗೂ ರಶೀದ್ ಖಾನ್ ಹಾಗೂ ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್ ತಲಾ ಒಂದೊಂದು ವಿಕೆಟ್ ಪಡೆದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.