IPL 2021 DC vs RR: ಟಾಸ್ ಗೆದ್ದ ರಾಯಲ್ಸ್‌ ಬೌಲಿಂಗ್ ಆಯ್ಕೆ; ಉಭಯ ತಂಡದಲ್ಲಿ ಮಹತ್ವದ ಬದಲಾವಣೆ

By Suvarna NewsFirst Published Sep 25, 2021, 3:05 PM IST
Highlights

* ಅಬುಧಾಬಿಯಲ್ಲಿಂದು ಡೆಲ್ಲಿ ಕ್ಯಾಪಿಟಲ್ ವರ್ಸಸ್‌ ರಾಜಸ್ಥಾನ ರಾಯಲ್ಸ್‌ ಫೈಟ್‌

* ಈ ಪಂದ್ಯ ಜಯಿಸಿದರೆ ಡೆಲ್ಲಿ ಫ್ಲೇ ಆಫ್‌ಗೆ ಲಗ್ಗೆಯಿಡಲಿದೆ.

* ದೈತ್ಯ ಸಂಹಾರ ಮಾಡಲು ಸಜ್ಜಾದ ರಾಜಸ್ಥಾನ ರಾಯಲ್ಸ್‌

ಅಬುಧಾಬಿ(ಸೆ.25): 14ನೇ ಆವೃತ್ತಿಯ ಐಪಿಎಲ್‌(IPL 2021) ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ಹಾಗೂ ರಾಜಸ್ಥಾನ ರಾಯಲ್ಸ್‌(Rajasthan Royals) ನಡುವಿನ 36ನೇ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್‌ ತಂಡದ ನಾಯಕ ಸಂಜು ಸ್ಯಾಮ್ಸನ್‌ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಈ ಹೈವೋಲ್ಟೇಜ್‌ ಪಂದ್ಯಕ್ಕೆ ಇಲ್ಲಿನ ಶೇಕ್ ಜಾಯೆದ್ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ರಾಜಸ್ಥಾನ ರಾಯಲ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಎವಿನ್ ಲೆವಿಸ್‌ ಹಾಗೂ ಕ್ರಿಸ್ ಮೋರಿಸ್‌ಗೆ ವಿಶ್ರಾಂತಿ ನೀಡಲಾಗಿದ್ದು, ದಕ್ಷಿಣ ಆಫ್ರಿಕಾ ಕ್ರಿಕೆಟಿಗರಾದ ತಬ್ರೀಜ್ ಸಂಶಿ ಹಾಗೂ ಡೇವಿಡ್ ಮಿಲ್ಲರ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಡೆಲ್ಲಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಮಾರ್ಕಸ್‌ ಸ್ಟೋಯ್ನಿಸ್ ಬದಲಿಗೆ ಲಲಿತ್ ಯಾದವ್ ತಂಡ ಕೂಡಿಕೊಂಡಿದ್ದಾರೆ.

Match 36. Rajasthan Royals win the toss and elect to field https://t.co/iu4wY3osoL

— IndianPremierLeague (@IPL)

ಕಳೆದ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿನ ನಗೆ ಬೀರಿದ್ದು ಅದೇ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ. ರಿಷಭ್ ಪಂತ್(Rishabh Pant) ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 8 ವಿಕೆಟ್‌ಗಳ ಅಂತರದ ಸುಲಭ ಗೆಲುವು ದಾಖಲಿಸಿದೆ. ಇನ್ನೊಂದೆಡೆ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ ರಾಯಲ್ಸ್‌ ತಂಡವು ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್(Punjab Kings) ಎದುರು 2 ರನ್‌ಗಳ ಅಂತರದ ರೋಚಕ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ. 

IPL 2021 DC vs RR ಇಂದೇ ಪ್ಲೇ-ಆಫ್‌ಗೆ ಡೆಲ್ಲಿ ಕ್ಯಾಪಿಟಲ್ಸ್‌ ಲಗ್ಗೆ?

ಐಪಿಎಲ್‌ ಇತಿಹಾಸದಲ್ಲಿ ಇದುವರೆಗೂ ಉಭಯ ತಂಡಗಳು ಒಟ್ಟು 23 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ರಾಜಸ್ಥಾನ ರಾಯಲ್ಸ್‌ ಕೊಂಚ ಮೇಲುಗೈ ಸಾಧಿಸಿದೆ. ರಾಜಸ್ಥಾನ ರಾಯಲ್ಸ್‌ ತಂಡವು 12 ಬಾರಿ ಗೆಲುವಿನ ನಗೆ ಬೀರಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 11 ಬಾರಿ ಗೆದ್ದು ಬೀಗಿದೆ. ಸದ್ಯ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಬಲಿಷ್ಠ ತಂಡವಾಗಿ ಹೊರಹೊಮ್ಮಿದ್ದು, ಆಡಿದ 9 ಪಂದ್ಯಗಳ ಪೈಕಿ 7 ಗೆಲುವು ಹಾಗೂ 2 ಸೋಲುಗಳೊಂದಿಗೆ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು, ಇಂದಿನ ಪಂದ್ಯವನ್ನು ಜಯಿಸಿದರೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್‌ಗೇರಿದ ಮೊದಲ ತಂಡ ಎನ್ನುವ ಕೀರ್ತಿಗೆ ರಿಷಭ್ ಪಂತ್ ಪಡೆ ಪಾತ್ರವಾಗಲಿದೆ.

ಇನ್ನೊಂದೆಡೆ ಜೋಸ್ ಬಟ್ಲರ್(Jos Buttler), ಜೋಫ್ರಾ ಆರ್ಚರ್ ಹಾಗೂ ಬೆನ್ ಸ್ಟೋಕ್ಸ್‌ ಅವರಂತಹ ತಾರಾ ಆಟಗಾರರ ಅನುಪಸ್ಥಿತಿಯ ಹೊರತಾಗಿಯೂ ಕಳೆದ ಪಂದ್ಯದಲ್ಲಿ ಪಂಜಾಬ್‌ ಎದುರು ರೋಚಕ ಗೆಲುವು ಸಾಧಿಸಿದ್ದ ರಾಯಲ್ಸ್‌ ಪಡೆ ಆತ್ಮವಿಶ್ವಾಸದಿಂದ ತುಂಬಿ ತುಳುಕುತ್ತಿದೆ. ಸದ್ಯ ರಾಜಸ್ಥಾನ ರಾಯಲ್ಸ್ ತಂಡವು 8 ಪಂದ್ಯಗಳನ್ನಾಡಿ 4 ಗೆಲುವು ಹಾಗೂ 4 ಸೋಲುಗಳೊಂದಿಗೆ 8 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದು ಇಂದಿನ ಪಂದ್ಯವನ್ನು ಜಯಿಸಿದರೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ.

ತಂಡಗಳು ಹೀಗಿವೆ ನೋಡಿ:

ರಾಜಸ್ಥಾನ ರಾಯಲ್ಸ್‌

Match 36. Rajasthan Royals XI: D Miller, Y Jaiswal, S Samson, M Lomror, L Livingstone, R Parag, R Tewatia, T Shamsi, K Tyagi, C Sakariya, M Rahman https://t.co/iu4wY3osoL

— IndianPremierLeague (@IPL)

ಡೆಲ್ಲಿ ಕ್ಯಾಪಿಟಲ್ಸ್‌

Match 36. Delhi Capitals XI: P Shaw, S Dhawan, S Iyer, R Pant, S Hetmyer, L Yadav, A Patel, R Ashwin, K Rabada, A Khan, A Nortje https://t.co/iu4wY3osoL

— IndianPremierLeague (@IPL)
click me!