ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ!

Published : Apr 19, 2021, 07:07 PM IST
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ!

ಸಾರಾಂಶ

ಐಪಿಎಲ್ 2021 ಟೂರ್ನಿಯ 12ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳ ಬದಲಾವಣೆ ಏನು? ಇಲ್ಲಿದೆ.

ಮುಂಬೈ(ಏ.19):  ಗೆಲುವಿನ ವಿಶ್ವಾಸದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ರೋಚಕ ಹೋರಾಟಕ್ಕೆ ರೆಡಿಯಾಗಿದೆ. ಟಾಸ್ ಗೆದ್ದಿರುವ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ಅಲ್ಪ ಮೊತ್ತಕ್ಕೆ ಚೆನ್ನೈ ಕಟ್ಟಿ ಹಾಕಿ ಸುಲಭ ಗೆಲುವಿನ ಲೆಕ್ಕಾಚಾರದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಆಡಿದ 2 ಪಂದ್ಯದಲ್ಲಿ ಒಂದೊಂದು ಗೆಲುವು ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಚೆನ್ನೈ ಮುಗ್ಗರಿಸಿದರೆ, ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಕಂಡಿತ್ತು. ಇತ್ತ ರಾಜಸ್ಥಾನ ರಾಯಲ್ಸ್ ಪಂಜಾಬ್ ವಿರುದ್ಧ ಮುಗ್ಗರಿಸಿದ್ದರೆ, ಡೆಲ್ಲಿ ವಿರುದ್ಧ ಗೆಲುವು ಕಂಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾ ಅಬ್ಬರಿಸುತ್ತಿದ್ದಂತೆ ಮತ್ತೆ ವಕ್ಕರಿಸಿದ ಮಳೆಯಿಂದ ಪಂದ್ಯ ರದ್ದು, ಟ್ರೋಫಿ ಹಂಚಿಕೆ
Kavya Maran 1300 ಕೋಟಿ ಒಡತಿ! ಅವರ ಭಾವಿ ಪತಿ ಎಷ್ಟು ಸಂಪಾದಿಸ್ತಾರೆ, ನೆಟ್‌ವರ್ತ್ ಎಷ್ಟು?