ಐಪಿಎಲ್‌ 2021: ಮುಂಬೈ ಇಂಡಿಯನ್ಸ್‌ಗೆ ಸ್ಪರ್ಧಾತ್ಮಕ ಗುರಿ ನೀಡಿದ ರಾಯಲ್ಸ್

Published : Apr 29, 2021, 05:13 PM ISTUpdated : Apr 29, 2021, 05:18 PM IST
ಐಪಿಎಲ್‌ 2021: ಮುಂಬೈ ಇಂಡಿಯನ್ಸ್‌ಗೆ ಸ್ಪರ್ಧಾತ್ಮಕ ಗುರಿ ನೀಡಿದ ರಾಯಲ್ಸ್

ಸಾರಾಂಶ

ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ 172 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ(ಏ.29): ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್‌ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ ರಾಯಲ್ಸ್‌ ತಂಡವು 4 ವಿಕೆಟ್ ಕಳೆದುಕೊಂಡು 171 ರನ್‌ ಬಾರಿಸಿದ್ದು, ಮುಂಬೈ ಇಂಡಿಯನ್ಸ್‌ಗೆ ಕಠಿಣ ಗುರಿ ನೀಡಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್‌ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ 7.4 ಓವರ್‌ಗಳಲ್ಲಿ 66 ರನ್‌ಗಳ ಜತೆಯಾಟವಾಡಿತು. ಕೇವಲ 32 ಎಸೆತಗಳಲ್ಲಿ ತಲಾ 3 ಬೌಂಡರಿ ಹಾಗೂ ಸಿಕ್ಸರ್‌ಗಳ ನೆರವಿನಿಂದ 41 ರನ್‌ ಬಾರಿಸಿ ಬೃಹತ್ ಮುನ್ನುಗ್ಗುತ್ತಿದ್ದ ಬಟ್ಲರ್‌ರನ್ನು ರಾಹುಲ್ ಚಹರ್‌ ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಇದರ ಬೆನ್ನಲ್ಲೇ ಮತ್ತೋರ್ವ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್‌(32)ರನ್ನು ರಾಹುಲ್ ಚಹರ್ ಪೆವಿಲಿಯನ್ ಹಾದಿ ತೋರಿಸಿದರು.

ಐಪಿಎಲ್ 2021: ರಾಯಲ್ಸ್ ಎದುರು ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸಿದ ಸಂಜು-ದುಬೆ: ರಾಯಲ್ಸ್ ಪಡೆಗೆ ಉತ್ತಮ ಆರಂಭದ ಲಾಭ ಪಡೆದ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್‌ ಹಾಗೂ ಶಿವಂ ದುಬೆ 3ನೇ ವಿಕೆಟ್‌ಗೆ ಮತ್ತೊಂದು ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು. ಸಂಜು 27 ಎಸೆತಗಳಲ್ಲಿ 5 ಬೌಂಡರಿ ಸಹಿತ 42 ರನ್ ಬಾರಿಸಿ ವಿಕೆಟ್‌ ಒಪ್ಪಿಸಿದರೆ, ಶಿವಂ ದುಬೆ 31 ಎಸೆತಗಳನ್ನು ಎದುರಿಸಿ ತಲಾ 2 ಬೌಂಡರಿ ಹಾಗೂ ಸಿಕ್ಸರ್‌ ನೆರವಿನಿಂದ 35 ರನ್‌ ಬಾರಿಸಿ ಬುಮ್ರಾಗೆ ವಿಕೆಟ್ ಒಪ್ಪಿಸಿದರು.

ಮುಂಬೈ ಇಂಡಿಯನ್ಸ್‌ ಪರ ರಾಹುಲ್ ಚಹರ್ 2 ವಿಕೆಟ್ ಪಡೆದರೆ, ಬುಮ್ರಾ, ಬೌಲ್ಟ್ ತಲಾ ಒಂದೊಂದು ವಿಕೆಟ್ ಪಡೆದರು. 

ಸಂಕ್ಷಿಪ್ತ ಸ್ಕೋರ್

ರಾಜಸ್ಥಾನ ರಾಯಲ್ಸ್: 171/4
ಸಂಜು ಸ್ಯಾಮ್ಸನ್: 42
ರಾಹುಲ್ ಚಹರ್: 33/2
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Duleep Trophy Final: ಸ್ಪೋಟಕ ಆರಂಭ ಕೊಟ್ಟ ವೈಭವ್ ಸೂರ್ಯವಂಶಿಗೆ ಭಾರೀ ನಿರಾಸೆ, ಈಶ್ವರನ್ ಅರ್ಧ ಶತಕ
2000ರ U19 ವಿಶ್ವಕಪ್ ಹೀರೋ: ಕ್ರಿಕೆಟ್ ಇತಿಹಾಸದ 'ದಿ ಬೆಸ್ಟ್' ಆಲ್‌ರೌಂಡರ್ ಆಗಬೇಕಿದ್ದವನ ದುರಂತ ಕಥೆ!