IPL 2021: ಕೆಕೆಆರ್ ಎದುರು ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್‌ ಬೌಲಿಂಗ್ ಆಯ್ಕೆ

By Suvarna NewsFirst Published Oct 7, 2021, 7:11 PM IST
Highlights

* ಶಾರ್ಜಾ ಮೈದಾನದಲ್ಲಿಂದು ಕೆಕೆಆರ್‌ ವರ್ಸಸ್ ರಾಜಸ್ಥಾನ ರಾಯಲ್ಸ್‌ ಪೈಟ್

* ಪ್ಲೇ ಆಫ್‌ ದೃಷ್ಠಿಯಿಂದ ಕೆಕೆಆರ್ ತಂಡಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ

* ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಮಹತ್ವದ ಬದಲಾವಣೆ

ಶಾರ್ಜಾ(ಅ.07): ರಾಜಸ್ಥಾನ ರಾಯಲ್ಸ್‌ ಹಾಗೂ ಕೋಲ್ಕತ ನೈಟ್‌ ರೈಡರ್ಸ್‌ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ  ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ

ಈ ಹೈವೋಲ್ಟೇಜ್‌ ಪಂದ್ಯಕ್ಕೆ ಶಾರ್ಜಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ಪ್ಲೇ ಆಫ್‌ ಪ್ರವೇಶಿಸುವ ದೃಷ್ಠಿಯಿಂದ ಈ ಪಂದ್ಯ ಇಯಾನ್‌ ಮಾರ್ಗನ್ ನೇತೃತ್ವದ ಕೋಲ್ಕತ ನೈಟ್‌ ರೈಡರ್ಸ್ ತಂಡಕ್ಕೆ ಸಾಕಷ್ಟು ಮಹತ್ವದ್ದಾಗಿದೆ. ಇಂದಿನ ಪಂದ್ಯಕ್ಕೆ ಕೋಲ್ಕತ ನೈಟ್‌ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಟಿಮ್‌ ಸೌಥಿ ಬದಲಿಗೆ ಲಾಕಿ ಫರ್ಗ್ಯೂಸನ್‌ ತಂಡ ಕೂಡಿಕೊಂಡಿದ್ದಾರೆ. ಇನ್ನು ರಾಜಸ್ಥಾನ ರಾಯಲ್ಸ್ ತಂಡದಲ್ಲಿ 4 ಬದಲಾವಣೆ ಮಾಡಲಾಗಿದ್ದು, ಲಿಯಾಮ್‌ ಲಿವಿಂಗ್‌ಸ್ಟೋನ್‌, ಕ್ರಿಸ್‌ ಮೋರಿಸ್‌, ಜಯದೇವ್ ಉನಾದ್ಕತ್ ಹಾಗೂ ಅನೂಜ್ ರಾವತ್ ತಂಡ ಕೂಡಿಕೊಂಡಿದ್ದಾರೆ. 

Match 54. Rajasthan Royals win the toss and elect to field https://t.co/9klpLGJ51E

— IndianPremierLeague (@IPL)

ಕೋಲ್ಕತ ನೈಟ್‌ ರೈಡರ್ಸ್ ತಂಡವು 13 ಪಂದ್ಯಗಳನ್ನಾಡಿ 6 ಗೆಲುವು ಹಾಗೂ 7 ಸೋಲುಗಳೊಂದಿಗೆ 12 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಸದ್ಯ 4ನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಜಯಿಸಿದರೆ ಬಹುತೇಕ ಕೆಕೆಆರ್ ತಂಡವು ಪ್ಲೇ ಆಫ್‌ಗೆ ಲಗ್ಗೆಯಿಡಲಿದೆ. ಇನ್ನು ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು 13 ಪಂದ್ಯಗಳನ್ನಾಡಿ 5 ಗೆಲುವು ಹಾಗೂ 8 ಸೋಲು ಕಂಡು 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ರಾಜಸ್ಥಾನ ರಾಯಲ್ಸ್ ಪ್ಲೇ ಆಫ್‌ಗೇರಬೇಕಿದ್ದರೇ ಪವಾಡವೇ ನಡೆಯಬೇಕಿದೆ.

ಐಪಿಎಲ್‌ ಇತಿಹಾಸದಲ್ಲಿ ಇದುವರೆಗೂ ಉಭಯ ತಂಡಗಳು 23 ಬಾರಿ ಮುಖಾಮುಖಿಯಾಗಿದ್ದು, ಕೆಕೆಆರ್ 12 ಬಾರಿ ಗೆಲುವು ಸಾಧಿಸಿದ್ದರೆ, ರಾಜಸ್ಥಾನ ರಾಯಲ್ಸ್‌ 11 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಯಾರ ಕೈ ಮೇಲಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ

ತಂಡಗಳು ಹೀಗಿವೆ ನೋಡಿ

ಕೋಲ್ಕತ ನೈಟ್‌ ರೈಡರ್ಸ್

Match 54. Kolkata Knight Riders XI: S Gill, V Iyer, R Tripathi, N Rana, E Morgan, D Karthik, S Al Hasan, S Narine, L Ferguson, V Chakaravarthy, S Mavi https://t.co/9klpLGJ51E

— IndianPremierLeague (@IPL)

ರಾಜಸ್ಥಾನ ರಾಯಲ್ಸ್‌:

Match 54. Rajasthan Royals XI: L Livingstone, Y Jaiswal, S Samson, S Dube, G Phillips, A Rawat, C Morris, R Tewatia, J Unadkat, C Sakariya, M Rahman https://t.co/9klpLGJ51E

— IndianPremierLeague (@IPL)
click me!