ಡೆಲ್ಲಿ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್, ತಂಡದಲ್ಲಿ ಮಹತ್ವದ ಬದಲಾವಣೆ!

Published : Apr 15, 2021, 07:04 PM ISTUpdated : Apr 15, 2021, 07:12 PM IST
ಡೆಲ್ಲಿ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್,  ತಂಡದಲ್ಲಿ ಮಹತ್ವದ ಬದಲಾವಣೆ!

ಸಾರಾಂಶ

14ನೇ ಆವೃತ್ತಿ ಐಪಿಎಲ್ ಟೂರ್ನಿಯ 7ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ ವಿವರ.

ಮುಂಬೈ(ಏ.15): ಐಪಿಎಲ್ ಟೂರ್ನಿ ಮತ್ತೊಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ 7ನೇ ಲೀಗ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ರಾಜಸ್ಥಾನ ರಾಯಲ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಬೆನ್ ಸ್ಟೋಕ್ಸ್ ಬದಲು ಡೇವಿಡ್ ಮಿಲ್ಲರ್ ತಂಡ ಸೇರಿಕೊಂಡಿದ್ದರೆ, ಶ್ರೇಯಸ್ ಗೋಪಾಲ್ ಬದಲು, ಜಯದೇವ್ ಉನಾದ್ಕಟ್ ತಂಡ ಸೇರಿಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.

 

ಎರಡು ಬಲಿಷ್ಠ ತಂಡ ಇಂದು ಮುಖಾಮುಖಿಯಾಗುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿದೆ. ಇತ್ತ ರಾಜಸ್ಥಾನ ರಾಯಲ್ಸ್, ಪಂಜಾಬ್ ವಿರುದ್ಧ ಸೋಲು ಕಂಡರೂ, ನಾಯಕ ಸಂಜು ಸ್ಯಾಮ್ಸನ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದರು. ಇಷ್ಟೇ ಅಲ್ಲ 222 ರನ್ ಚೇಸ್ ಮಾಡಿ ಕೇವಲ 4 ರನ್‌ಗಳಿಂದ ವಿರೋಚಿತ ಸೋಲು ಕಂಡಿತ್ತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಾಕಿಸ್ತಾನ ಕೇವಲ 55 ರನ್‌ಗೆ ಆಲೌಟ್, 7 ವಿಕೆಟ್ ಗೆಲುವು ದಾಖಲಿಸಿ ದಾಖಲೆ ಬರೆದ ಭಾರತ ಮಹಿಳಾ ತಂಡ
ಆರ್‌ಸಿಬಿ ಫ್ಯಾನ್ಸ್‌ಗೆ ಬಿಗ್‌ ಅಪ್ಡೇಟ್‌; ಹೊಸತನ ಬಂದರೂ, ಹಳೆಯ ಗುರುತು ಬಿಟ್ಟುಕೊಡದ ಬಿರ್ಲಾ!