
ಚೆನ್ನೈ(ಮಾ.30): 14ನೇ ಆವೃತ್ತಿಯ ಬಹುನಿರೀಕ್ಷಿತ ಐಪಿಎಲ್ ಟೂರ್ನಿಗೆ ಕೌಂಟ್‌ಡೌನ್ ಆರಂಭವಾಗಿರುವ ಬೆನ್ನಲ್ಲೇ ದೇಶದಾದ್ಯಂತ ಐಪಿಎಲ್ ಜ್ವರ ದಿನದಿಂದ ದಿನಕ್ಕೆ ಕಾವೇರತೊಡಗಿದೆ. ಇದೀಗ ಆರ್‌ಸಿಬಿಯ ಆಧಾರಸ್ತಂಭಗಳಾದ ವಿರಾಟ್ ಕೊಹ್ಲಿ ಹಾಗೂ ಎಬಿ ಡಿ ವಿಲಿಯರ್ಸ್ ಪರಸ್ಪರ ಫಿಟ್ನೆಸ್ ಚಾಲೆಂಜ್ ಹಾಕಿಕೊಂಡಿದ್ದಾರೆ.
ಕೊಹ್ಲಿ, ತಾವು ಥ್ರೆಡ್‌ಮಿಲ್ ಮೇಲೆ ಓಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿ ‘ವಿಶ್ರಾಂತಿಯೇ ಇಲ್ಲ. ಇಲ್ಲಿಂದ ಏನಿದ್ದರೂ ವೇಗಕ್ಕೆ ಪ್ರಾಮುಖ್ಯತೆ’ ಎಂದು ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಎಬಿಡಿ, ‘ನಿಮ್ಮ ಲಯ ಖುಷಿ ನೀಡುತ್ತಿದೆ. ತಂಡ ಸೇರಿಕೊಳ್ಳಲು ಹೊರಟಿದ್ದೇನೆ’ ಎಂದರು. ಇದಕ್ಕೆ ಉತ್ತರಿಸಿದ ಕೊಹ್ಲಿ, ‘ನೀವು ವಿಕೆಟ್ಸ್ ಮಧ್ಯೆ ಈಗಲೂ ಅತಿವೇಗದ ಓಟಗಾರರಾಗಿದ್ದೀರಿ ಎಂದು ಭಾವಿಸುತ್ತೇನೆ’ ಎಂದಿದ್ದಾರೆ. ‘ನಾಳೆ ಒಟ್ಟಿಗೆ ಓಡಿ ಪರೀಕ್ಷಿಸೋಣ’ ಎಂದು ಎಬಿಡಿ ಉತ್ತರಿದ್ದಾರೆ.
ಈ ಇಬ್ಬರು ದಿಗ್ಗಜರ ಫಿಟ್ನೆಸ್ ಚಾಲೆಂಜ್‌ಗೆ ತಾವೂ ಸೇರಿಕೊಳ್ಳುವುದಾಗಿ ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ತಾರಾ ಆಟಗಾರರ ಈ ಪರಸ್ಪರ ಸವಾಲು ಆರ್‌ಸಿಬಿ ಅಭಿಮಾನಿಗಳ ಉತ್ಸಾಹ ಹೆಚ್ಚಿಸಿದೆ.
ಈಗಿನಿಂದಲೇ ಶುರುವಾಯ್ತು ಐಪಿಎಲ್ ಜ್ವರ!
ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಿತ್ತಾದರೂ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಮುಗ್ಗರಿಸುವ ಮೂಲಕ ತನ್ನ ಅಭಿಯಾನವನ್ನು ಅಂತ್ಯಗೊಳಿಸಿಕೊಂಡಿತ್ತು. ಇದೀಗ ಆರ್‌ಸಿಬಿ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಶತಾಯಗತಾಯ ಚೊಚ್ಚಲ ಐಪಿಎಲ್ ಟ್ರೋಪಿ ಗೆಲ್ಲುವ ಕನವರಿಕೆಯಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.