IPL 2021: ಇಲ್ಲಿದೆ ನೋಡಿ ಆರ್‌ಸಿಬಿ ವರ್ಸಸ್‌ ಡೆಲ್ಲಿ ಕ್ಯಾಪಿಟಲ್ಸ್‌ ಸಂಭಾವ್ಯ ತಂಡ

Published : Apr 27, 2021, 02:59 PM IST
IPL 2021: ಇಲ್ಲಿದೆ ನೋಡಿ ಆರ್‌ಸಿಬಿ ವರ್ಸಸ್‌ ಡೆಲ್ಲಿ ಕ್ಯಾಪಿಟಲ್ಸ್‌ ಸಂಭಾವ್ಯ ತಂಡ

ಸಾರಾಂಶ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಸೆಣಸಾಟ ನಡೆಸಲಿದ್ದು, ಎರಡು ತಂಡಗಳ ಸಂಭಾವ್ಯ ಆಟಗಾರರ ವಿವರ ಇಲ್ಲಿದೆ ನೋಡಿ.

ಅಹಮದಾಬಾದ್‌(ಏ.27): 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿಂದು ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ.

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಉಭಯ ತಂಡಗಳು ತಲಾ 5 ಪಂದ್ಯಗಳನ್ನಾಡಿ 4 ಗೆಲುವು ಹಾಗೂ ಒಂದು ಸೋಲು ಕಂಡಿವೆ. ನೆಟ್‌ ರನ್‌ರೇಟ್ ಆಧಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಎರಡನೇ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ 3ನೇ ಸ್ಥಾನದಲ್ಲಿದೆ. 

ಸತತ 4 ಪಂದ್ಯಗಳನ್ನು ಗೆದ್ದು ಬೀಗಿದ್ದ ಆರ್‌ಸಿಬಿಗೆ 5ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸೋಲಿನ ರುಚಿ ತೋರಿಸಿತ್ತು. ಇನ್ನು ರಿಷಭ್‌ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತನ್ನ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಎದುರು  ಸೂಪರ್ ಓವರ್‌ನಲ್ಲಿ ಗೆಲುವಿನ ನಗೆ ಬೀರಿತ್ತು.

ಐಪಿಎಲ್ 2021: ಡೆಲ್ಲಿ ಎದುರು ಜಯದ ಹಳಿಗೆ ಮರಳುವುದೇ ಆರ್‌ಸಿಬಿ?

ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೂ 25  ಬಾರಿ ಮುಖಾಮುಖಿಯಾಗಿದ್ದು, ಆರ್‌ಸಿಬಿ 15 ಬಾರಿ ಗೆಲುವು ದಾಖಲಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 10 ಪಂದ್ಯಗಳಲ್ಲಿ ಗೆಲುವಿನ ರುಚಿ ಕಂಡಿದೆ. ಇನ್ನು ಈ ಹಿಂದಿನ ಕಳೆದ 4 ಮುಖಾಮುಖಿಯಲ್ಲಿ ಆರ್‌ಸಿಬಿ ವಿರುದ್ದ ಡೆಲ್ಲಿ ಸಂಪೂರ್ಣ ಪ್ರಾಬಲ್ಯ ಮರೆದಿದ್ದು, 4 ಪಂದ್ಯಗಳಲ್ಲೂ ಗೆಲುವಿನ ನಗೆ ಬೀರಿದೆ.

ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಡೇನಿಯಲ್ ಕ್ರಿಶ್ಚಿಯನ್ ಬದಲಿಗೆ ಫಿನ್ ಆಲನ್ ಹಾಗೂ ನವದೀಪ್ ಸೈನಿ ಬದಲಿಗೆ ಶಹಬಾಜ್ ಅಹಮದ್ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

ಡೆಲ್ಲಿ ವಿರುದ್ದದ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ

1. ವಿರಾಟ್ ಕೊಹ್ಲಿ
2. ದೇವದತ್ ಪಡಿಕ್ಕಲ್
3. ಫಿನ್ ಅಲನ್‌
4. ಗ್ಲೆನ್‌ ಮ್ಯಾಕ್ಸ್‌ವೆಲ್
5. ಎಬಿ ಡಿವಿಲಿಯರ್ಸ್
6. ವಾಷಿಂಗ್ಟನ್ ಸುಂದರ್
7. ಶಹಬಾಜ್ ಅಹಮದ್
8. ಕೈಲ್ ಜೇಮಿಸನ್‌
9. ಹರ್ಷಲ್ ಪಟೇಲ್‌
10. ಮೊಹಮ್ಮದ್ ಸಿರಾಜ್
11. ಯುಜುವೇಂದ್ರ ಚಹಲ್

ಆರ್‌ಸಿಬಿ ವಿರುದ್ದದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ಸಂಭಾವ್ಯ ತಂಡ ಹೀಗಿದೆ ನೋಡಿ

1. ಶಿಖರ್ ಧವನ್
2. ಪೃಥ್ವಿ ಶಾ
3. ಸ್ಟೀವ್ ಸ್ಮಿತ್
4. ರಿಷಭ್ ಪಂತ್
5. ಶಿಮ್ರೊನ್ ಹೆಟ್ಮೇಯರ್
6. ಮಾರ್ಕಸ್ ಸ್ಟೋಯ್ನಿಸ್
7. ಲಲಿತ್ ಯಾದವ್
8. ಅಕ್ಷರ್ ಪಟೇಲ್
9. ಕಗಿಸೋ ರಬಾಡ
10. ಅಮಿರ್ ಮಿಶ್ರಾ
11. ಆವೇಶ್ ಖಾನ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Spain Cricket Team: ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ: ಆಸ್ಟ್ರೇಲಿಯಾದ ಆಲ್-ಟೈಮ್ ರೆಕಾರ್ಡ್ ಬ್ರೇಕ್ ಮಾಡಿದ ಸ್ಪೇನ್!
BCCI Centre of Excellence: ಬೆಂಗಳೂರಲ್ಲಿದೆ ಭಾರತದ ಕ್ರಿಕೆಟ್‌ ಫ್ಯಾಕ್ಟ್ರಿ; ₹500 ಕೋಟಿ ವೆಚ್ಚ