IPL 2021 RCB vs PBKS ಪ್ಲೇ-ಆಫ್‌ನತ್ತ ಆರ್‌ಸಿಬಿ ಚಿತ್ತ

Suvarna News   | Asianet News
Published : Oct 03, 2021, 09:17 AM IST
IPL 2021 RCB vs PBKS ಪ್ಲೇ-ಆಫ್‌ನತ್ತ ಆರ್‌ಸಿಬಿ ಚಿತ್ತ

ಸಾರಾಂಶ

* ಶಾರ್ಜಾ ಮೈದಾನದಲ್ಲಿಂದು ಅರ್‌ಸಿಬಿ ವರ್ಸಸ್ ಪಂಜಾಬ್‌ ಮುಖಾಮುಖಿ * ಈ ಪಂದ್ಯ ಗೆದ್ದು ಪ್ಲೇ ಆಫ್‌ಗೇರುವ ಕನವರಿಕೆಯಲ್ಲಿದೆ ಆರ್‌ಸಿಬಿ * ಪಂಜಾಬ್‌ ಕಿಂಗ್ಸ್‌ ತಂಡಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ

ಶಾರ್ಜಾ(ಅ.03): ಚೊಚ್ಚಲ ಐಪಿಎಲ್‌ ಪಟ್ಟಕ್ಕಾಗಿ ಎದುರು ನೋಡುತ್ತಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡವು 14ನೇ ಆವೃತ್ತಿಯ ಐಪಿಎಲ್‌ (IPL 2021) ಪ್ಲೇ-ಆಫ್‌ನಲ್ಲಿ ಸ್ಥಾನ ಖಚಿತ ಪಡಿಸಿಕೊಳ್ಳುವ ತವಕದಲ್ಲಿದ್ದು, ಪಂಜಾಬ್‌ ಕಿಂಗ್ಸ್‌ (Punjab Kings) ಸವಾಲನ್ನು ಎದುರಿಸಲು ಸಜ್ಜಾಗಿದೆ.

ಆಡಿರುವ 11 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ವಿರಾಟ್‌ ಕೊಹ್ಲಿ (Virat Kohli) ಪಡೆ 14 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದು, ಉಳಿದ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದರೂ ಅಂತಿಮ ನಾಲ್ಕರ ಘಟ್ಟಕ್ಕೇರುವುದು ಬಹುತೇಕ ಖಚಿತವಾಗಲಿದೆ. ಈ ನಿಟ್ಟಿನಲ್ಲಿ ಭಾನುವಾರ ಪಂಜಾಬ್‌ ವಿರುದ್ಧ ನಡೆಯಲಿರುವ ಪಂದ್ಯವು ಅತ್ಯಂತ ಮಹತ್ವದ್ದಾಗಿದ್ದು, ಗೆದ್ದರೆ ಮುಂದಿನ ಹಾದಿ ಮತ್ತಷ್ಟು ಸುಲಭವಾಗಲಿದೆ.

ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿರುವ ಆರ್‌ಸಿಬಿ (Royal Challengers Bangalore) ವಿಶ್ವಾಸ ಇಮ್ಮಡಿಗೊಂಡಿದ್ದು, ಇದೇ ಪ್ರದರ್ಶನವನ್ನು ಪಂಜಾಬ್‌ ವಿರುದ್ಧವು ತೋರಿಸುವ ಹುಮ್ಮಸ್ಸಿನಲ್ಲಿದೆ. ಯಜುವೇಂದ್ರ ಚಹಲ್‌, ಹರ್ಷಲ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌ ತಂಡದ ಪ್ರಮುಖ ಅಸ್ತ್ರಗಳಾಗಿದ್ದರೆ, ವಿರಾಟ್‌ ಕೊಹ್ಲಿ, ದೇವದತ್‌ ಪಡಿಕ್ಕಲ್‌, ಗ್ಲೆನ್‌ ಮ್ಯಾಕ್ಸ್‌ವೇಲ್‌ ಮತ್ತು ಎಬಿ ಡಿವಿಲಿಯರ್ಸ್‌ ಬ್ಯಾಟಿಂಗ್‌ ಬಲವಾಗಿದ್ದಾರೆ. ಕಳೆದ ಪಂದ್ಯದಲ್ಲಿ ವಿಕೆಟ್‌ ಕೀಪರ್‌ ಶ್ರೀಕರ್‌ ಭರತ್‌ ಸಹ ಉತ್ತಮ ಪ್ರದರ್ಶನ ನೀಡಿದ್ದು, ಆರ್‌ಸಿಬಿಗೆ ಮತ್ತಷ್ಟು ಬಲ ತುಂಬಿದೆ.

IPL 2021:ರುತುರಾಜ್ ಸೆಂಚುರಿ, ಚೆನ್ನೈ ಹೋರಾಟ ವ್ಯರ್ಥ; ಧೋನಿ ಸೈನ್ಯ ಮಣಿಸಿದ ರಾಜಸ್ಥಾನ!

ಇನ್ನು ಕೆಕೆಆರ್‌ ವಿರುದ್ಧ ಅಮೋಘ ಪ್ರದರ್ಶನ ನೀಡಿ 5 ವಿಕೆಟ್‌ ಜಯ ಸಾಧಿಸುವ ಮೂಲಕ ಪ್ಲೇ-ಆಫ್‌ ರೇಸ್‌ನಲ್ಲಿ ಉಳಿದುಕೊಂಡಿರುವ ಪಂಜಾಬ್‌ ಕಿಂಗ್ಸ್‌, ಸದ್ಯ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ನಾಯಕ ಕೆ.ಎಲ್‌.ರಾಹುಲ್‌ (KKL Rahul), ಮಯಾಂಕ್‌ ಅಗರ್‌ವಾಲ್‌, ಶಾರುಖ್‌ ಖಾನ್‌, ಆಶ್‌ರ್‍ದೀಪ್‌, ಬಿಷ್ಣೋಯ್‌ ಉತ್ತಮ ಲಯದಲ್ಲಿರುವುದು ಪಂಜಾಬ್‌ಗೆ ವರವಾಗಿದೆ. ಪ್ಲೇ-ಆಫ್‌ ದೃಷ್ಟಿಯಿಂದ ಪಂಜಾಬ್‌ ಪಾಲಿಗೂ ಇದು ಮಹತ್ವದ ಪಂದ್ಯವಾಗಿದೆ.

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಉಭಯ ತಂಡಗಳು ಒಟ್ಟು 27 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಪಂಜಾಬ್‌ ಕಿಂಗ್ಸ್‌ ತಂಡವು ಕೊಂಚ ಮೇಲುಗೈ ಸಾಧಿಸಿದೆ. 27 ಪಂದ್ಯಗಳ ಪೈಕಿ ಪಂಜಾಬ್ ಕಿಂಗ್ಸ್ ತಂಡವು 15 ಬಾರಿ ಗೆಲುವು ದಾಖಲಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ಬಾರಿ ಗೆಲುವಿನ ರುಚಿ ಕಂಡಿದೆ. 

ಸಂಭವನೀಯ ಆಟಗಾರರ ಪಟ್ಟಿ:

ರಾಯಲ್ ಚಾಲೆಂಜರ್ಸ್‌ ಬೆಂಗಳೂರ:

ವಿರಾಟ ಕೊಹ್ಲಿ(ನಾಯಕ), ದೇವದತ್ ಪಡಿಕ್ಕಲ್‌, ಶ್ರೀಕರ್ ಭರತ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಎಬಿ ಡಿವಿಲಿಯರ್ಸ್‌, ಡೇನಿಯಲ್‌ ಕ್ರಿಶ್ಚಿಯನ್‌, ಕೈಲ್ ಜೇಮಿಸನ್‌, ಶಾಬಾಜ್ ಅಹಮ್ಮದ್‌, ಹರ್ಷಲ್‌ ಪಟೇಲ್‌, ಮೊಹಮ್ಮದ್ ಸಿರಾಜ್‌, ಯುಜುವೇಂದ್ರ ಚಹಲ್‌

ಪಂಜಾಬ್ ಕಿಂಗ್ಸ್‌:

ಕೆ.ಎಲ್‌.ರಾಹುಲ್‌(ನಾಯಕ), ಮಯಾಂಕ್ ಅಗರ್‌ವಾಲ್‌‌, ಏಯ್ಡನ್‌ ಮಾರ್ಕ್ರಮ್‌, ನಿಕೋಲಸ್‌ ಪೂರನ್‌, ದೀಪಕ್‌ ಹೂಡಾ, ಮೊಯೆಸ್‌ ಹೆನ್ರಿಕ್‌, ಶಾರುಖ್ ಖಾನ್‌, ಎಲ್ಲೀಸ್‌, ಮೊಹಮ್ಮದ್ ಶಮಿ, ಆಶ್‌ರ್‍ದೀಪ್ ಸಿಂಗ್‌, ರವಿ ಬಿಷ್ಣೋಯ್‌

ಸ್ಥಳ: ಶಾರ್ಜಾ
ಪಂದ್ಯ ಆರಂಭ: ಮಧ್ಯಾಹ್ನ 3.30
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?