ಆರ್‌ಸಿಬಿ ಹಾಗೂ ಕೋಲ್ಕತ ನೈಟ್ ರೈಡರ್ಸ್ ನಡುವಿನ ಪಂದ್ಯ ಕೊನೆಯ ಕ್ಷಣದಲ್ಲಿ ಮುಂದೂಡಲ್ಪಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಅಹಮದಾಬಾದ್(ಮೇ.03): 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಕೊರೋನಾ ಮಹಾ ಕಂಟಕ ಎದುರಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್ ರೈಡರ್ಸ್ ನಡುವೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಮುಂದೂಡಲಾಗಿದೆ.
BREAKING: Tonight's IPL match between the Kolkata Knight Riders and Royal Challengers Bangalore has been rescheduled
— ESPNcricinfo (@ESPNcricinfo)
undefined
ಪ್ರಾಥಮಿಕ ಮಾಹಿತಿಯ ಪ್ರಕಾರ ಕೆಕೆಆರ್ ತಂಡದ ಆಟಗಾರರಿಬ್ಬರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ ಎನ್ನಲಾಗಿದೆ. ಖ್ಯಾತ ಕ್ರೀಡಾ ವೆಬ್‌ಸೈಟ್ ಕ್ರಿಕ್‌ಇನ್ಫೋ ಪ್ರಕಾರ, ಕೋಲ್ಕತ ನೈಟ್ ರೈಡರ್ಸ್ ತಂಡದ ಸ್ಪಿನ್ನರ್ ವರಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್‌ಗೆ ಕೋವಿಡ್ 19 ಸೋಂಕು ತಗುಲಿದೆ ಎಂದು ಟ್ವೀಟ್ ಮಾಡಲಾಗಿದೆ.
ಬಯೋ ಬಬಲ್ ತೊರೆದ ಬಳಿಕ 3 ಟೆಸ್ಟ್ ನಡೆಸಿ ವರದಿ ನೆಗೆಟಿವ್ ಬಂದ ಬಳಿಕ ಆಟಗಾರರಿಗೆ ಬಯೋ ಬಬಲ್ ಒಳಗೆ ಪ್ರವೇಶ ನೀಡಲಾಗುತ್ತದೆ. ಆದರೆ ನಿಯಮ ವರಣ್ ಚಕ್ರವರ್ತಿ ವಿಚಾರದಲ್ಲಿ ಯಾಕೆ ತೆಗೆದುಕೊಳ್ಳಲಿಲ್ಲ ಎನ್ನುವ ಪ್ರಶ್ನೆ ಇದೀಗ ಜೋರಾಗಿ ಕೇಳಿ ಬಂದಿದೆ.
ಭಾರತೀಯರಿಗೆ ಮಿಡಿದ ಆಸೀಸ್ ಹೃದಯ; ಆಕ್ಸಿಜನ್ ಖರೀದಿಗೆ 37 ಲಕ್ಷ ದೇಣಿಗೆ ನೀಡಿದ ಕಮಿನ್ಸ್!
ಇನ್ನೊಂದು ಮೂಲಗಳ ಪ್ರಕಾರ ವೇಗಿ ಪ್ಯಾಟ್ ಕಮಿನ್ಸ್‌ಗೂ ಕೋವಿಡ್ ದೃಢಪಟ್ಟಿದ್ದು, ಐಸೋಲೇಷನ್‌ನಲ್ಲಿ ಇಡಲಾಗಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೇ ಪ್ಯಾಟ್ ಕಮಿನ್ಸ್ ಭಾರತದ ಕೋವಿಡ್ ವಿರುದ್ದದ ಹೋರಾಟಕ್ಕೆ 37 ಲಕ್ಷ ರುಪಾಯಿ ದೇಣಿಗೆ ನೀಡಿದ್ದನ್ನು ಸ್ಮರಿಸಬಹುದಾಗಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona