IPL 2021: ಡೆಲ್ಲಿ ಕ್ಯಾಪಿಟಲ್ಸ್ ಎದುರು ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

By Suvarna NewsFirst Published Oct 8, 2021, 7:15 PM IST
Highlights

* ದುಬೈನಲ್ಲಿಂದು ಡೆಲ್ಲಿ ವರ್ಸಸ್ ಆರ್‌ಸಿಬಿ ಪೈಟ್‌

* ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

* ಇದು ಲೀಗ್ ಹಂತದ ಕೊನೆಯ ಪಂದ್ಯ

ದುಬೈ(ಅ.08): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ

ಈ ಹೈವೋಲ್ಟೇಜ್‌ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ.  ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೂಡಾ ಯಾವುದೇ ಬದಲಾವಣೆಯನ್ನು ಮಾಡಿಲ್ಲ.

have won the toss and they will bowl first against .

Live - https://t.co/rjuPrt7Rqt pic.twitter.com/mjTcu4ZLfU

— IndianPremierLeague (@IPL)

IPL 2021: ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಮುಂಬೈ, SRHಗೆ ಮನೀಶ್ ಪಾಂಡೆ ನಾಯಕ!

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಿಷಭ್‌ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 13 ಪಂದ್ಯಗಳನ್ನಾಡಿ 10 ಗೆಲುವು ಹಾಗೂ 3 ಸೋಲುಗಳೊಂದಿಗೆ 20 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನೊಂದೆಡೆ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 13 ಪಂದ್ಯಗಳನ್ನಾಡಿ 8 ಗೆಲುವು ಹಾಗೂ 5 ಸೋಲುಗಳೊಂದಿಗೆ 16 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು 4 ರನ್‌ಗಳ ರೋಚಕ ಸೋಲು ಕಂಡಿತ್ತು. ಇದೀಗ ಡೆಲ್ಲಿ ವಿರುದ್ದ ಗೆದ್ದು ಆತ್ಮವಿಶ್ವಾಸದಿಂದ ಪ್ಲೇ ಆಫ್‌ ಪಂದ್ಯವನ್ನಾಡಲು ಸಜ್ಜಾಗುತ್ತಿದೆ. 

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಉಭಯ ತಂಡಗಳು ಒಟ್ಟು 25 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊಂಚ ಮುನ್ನಡೆಯನ್ನು ಸಾಧಿಸಿದೆ. 25 ಪಂದ್ಯಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 15 ಪಂದ್ಯಗಳಲ್ಲಿ ಗೆಲುವಿನ ನಗೆಯನ್ನು ಬೀರಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 10 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. 

ತಂಡಗಳು ಹೀಗಿವೆ ನೋಡಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು: 

Match 56. Royal Challengers Bangalore XI: V Kohli, D Padikkal, KS Bharat, G Maxwell, AB de Villiers, S Ahmed, D Christian, G Garton, H Patel, M Siraj, Y Chahal https://t.co/BHBv8DLyMl

— IndianPremierLeague (@IPL)

ಡೆಲ್ಲಿ ಕ್ಯಾಪಿಟಲ್ಸ್‌:

Match 56. Delhi Capitals XI: S Dhawan, P Shaw, S Iyer, R Pant, R Patel, S Hetmyer, A Patel, R Ashwin, K Rabada, A Khan, A Nortje https://t.co/BHBv8DLyMl

— IndianPremierLeague (@IPL)
click me!