IPL 2021 ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ

By Suvarna News  |  First Published Oct 6, 2021, 7:05 PM IST

* ಅಬುಧಾಬಿಯಲ್ಲಿಂದು ಆರ್‌ಸಿಬಿಗೆ ಸನ್‌ರೈಸರ್ಸ್‌ ಹೈದರಾಬಾದ್‌ ಸವಾಲು

* ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಕನಸು ಕಾಣುತ್ತಿದೆ ಆರ್‌ಸಿಬಿ

* ಪ್ರತಿಷ್ಟೆಗಾಗಿ ಕಾದಾಡಲು ಸಜ್ಜಾದ ಸನ್‌ರೈಸರ್ಸ್‌ ಹೈದರಾಬಾದ್‌


ಅಬುಧಾಬಿ(ಅ.06): ರಾಯಲ್ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ದಕ್ಷಿಣ ಭಾರತದ ಎರಡು ತಂಡಗಳ ನಡುವಿನ ಕಾದಾಟಕ್ಕೆ ಇಲ್ಲಿನ ಶೇಕ್ ಜಾಯೆದ್ ಮೈದಾನ ಆತಿಥ್ಯವನ್ನು ವಹಿಸಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದಿದೆ. ಇನ್ನು ಸನ್‌ರೈಸರ್ಸ್‌ ಹೈದರಾಬಾದ್ ತಂಡದಲ್ಲಿ ಕೂಡಾ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

Match 52. Royal Challengers Bangalore win the toss and elect to field https://t.co/UJxVQxyLNo

— IndianPremierLeague (@IPL)

Latest Videos

undefined

ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗಾಗಲೇ ಪ್ಲೇ ಆಫ್‌ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದು, ಸದ್ಯ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇನ್ನುಳಿದ 2 ಪಂದ್ಯಗಳನ್ನು ಗೆದ್ದು ಟಾಪ್‌ 2ಗೇರುವ ವಿರಾಟ್ ಕೊಹ್ಲಿ ಪಡೆ ಚಿತ್ತ ನೆಟ್ಟಿದೆ. ಇನ್ನು ಕೇನ್‌ ವಿಲಿಯಮ್ಸನ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್‌ ಈಗಾಗಲೇ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿದ್ದು, ಇನ್ನುಳಿದ 2 ಪಂದ್ಯಗಳನ್ನು ಗೆದ್ದು, ಗೆಲುವಿನೊಂದಿಗೆ ಅಭಿಯಾನ ಅಂತ್ಯಗೊಳಿಸುವ ಲೆಕ್ಕಾಚಾರದಲ್ಲಿದೆ. 

have won the toss and they will bowl first against .

Live - https://t.co/UJxVQxyLNo pic.twitter.com/h6a4ZLkShI

— IndianPremierLeague (@IPL)

IPL 2021 ಟಾಪ್-2ಗೇರಲು ವಿರಾಟ್ ಕೊಹ್ಲಿ ನೇತೃತ್ವದ RCB ಹೋರಾಟ..!

ಐಪಿಎಲ್‌ ಇತಿಹಾಸದಲ್ಲಿ ಇದುವರೆಗೂ ಉಭಯ ತಂಡಗಳು 18 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಸನ್‌ರೈಸರ್ಸ್‌ ಹೈದರಾಬಾದ್ ಕೊಂಚ ಮೇಲುಗೈ ಸಾಧಿಸಿದೆ. 18 ಪಂದ್ಯಗಳ ಪೈಕಿ ಸನ್‌ರೈಸರ್ಸ್‌ ಹೈದರಾಬಾದ್ ತಂಡವು 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು 8 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ.

ತಂಡಗಳು ಹೀಗಿವೆ ನೋಡಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು: 

Match 52. Royal Challengers Bangalore XI: V Kohli, D Padikkal, D Christian, G Maxwell, AB de Villiers, KS Bharat, S Ahmed, G Garton, H Patel, M Siraj, Y Chahal https://t.co/UJxVQxyLNo

— IndianPremierLeague (@IPL)

ಸನ್‌ರೈಸರ್ಸ್ ಹೈದರಾಬಾದ್:

Match 52. Sunrisers Hyderabad XI: J Roy, W Saha, P Garg, K Williamson, A Sharma, J Holder, A Samad, R Khan, B Kumar, U Malik, S Kaul https://t.co/UJxVQxyLNo

— IndianPremierLeague (@IPL)
click me!