IPL 2021: ಕೆಕೆಆರ್‌ ಅಭಿಮಾನಿಗಳ ಕ್ಷಮೆ ಕೋರಿದ ಶಾರುಖ್‌ ಖಾನ್‌

Suvarna News   | Asianet News
Published : Apr 14, 2021, 12:41 PM IST
IPL 2021: ಕೆಕೆಆರ್‌ ಅಭಿಮಾನಿಗಳ ಕ್ಷಮೆ ಕೋರಿದ ಶಾರುಖ್‌ ಖಾನ್‌

ಸಾರಾಂಶ

ಮುಂಬೈ ಇಂಡಿಯನ್ಸ್‌ ಎದುರು ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೈಚೆಲ್ಲಿದ ಕೆಕೆಆರ್ ಪ್ರದರ್ಶನದ ಬಗ್ಗೆ ಸಹ ಮಾಲೀಕ ಶಾರುಖ್‌ ಖಾನ್‌ ಬೇಸರ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಚೆನ್ನೈ(ಏ.14): ಮುಂಬೈ ಇಂಡಿಯನ್ಸ್‌ ಎದುರು ಆಘಾತಕಾರಿ ಸೋಲು ಕಂಡ ಬಗ್ಗೆ ಕೋಲ್ಕತ ನೈಟ್ ರೈಡರ್ಸ್‌ ತಂಡದ ಸಹ ಮಾಲೀಕ ಶಾರುಖ್‌ ಖಾನ್‌ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.

ಹೌದು, ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ದ ಇಯಾನ್‌ ಮಾರ್ಗನ್ ನೇತೃತ್ವದ ಕೋಲ್ಕತ ನೈಟ್‌ ರೈಡರ್ಸ್‌ ತಂಡವು 10 ರನ್‌ಗಳ ಆಘಾತಕಾರಿ ಸೋಲು ಕಂಡಿತು. ರಸೆಲ್‌, ಶಕೀಬ್‌, ಕಾರ್ತಿಕ್‌ ಹಾಗೂ ಕಮಿನ್ಸ್ ಅವರಂತಹ ಟಿ20 ಸ್ಪೆಷಲಿಸ್ಟ್ ಆಟಗಾರರಿದ್ದೂ ಕೊನೆಯ 30 ಎಸೆತಗಳಲ್ಲಿ ಕೆಕೆಆರ್‌ 31 ರನ್‌ ಬಾರಿಸಲು ವಿಫಲವಾಯಿತು. ಕೆಕೆಆರ್ ತಂಡದ ಈ ದಯಾನೀಯ ವೈಫಲ್ಯಕ್ಕೆ ಸಹ ಮಾಲೀಕ ಶಾರುಖ್ ಖಾನ್‌ ಟ್ವೀಟ್‌ ಮೂಲಕ ಬೇಸರ ವ್ಯಕ್ತಪಡಿಸಿದ್ದು, ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.

IPL 2021: ಸುಲಭ ಟಾರ್ಗೆಟ್ ಚೇಸ್ ಮಾಡಲು ಕೆಕೆಆರ್ ವಿಫಲ; ಮುಂಬೈಗೆ ಮೊದಲ ಗೆಲುವು!

ತಂಡದ ಪ್ರದರ್ಶನ ಬೇಸರ ತರಿಸಿತು, ಕೆಕೆಆರ್‌ನ ಎಲ್ಲಾ ಅಭಿಮಾನಿಗಳ ಬಳಿ ಕ್ಷಮೆ ಕೇಳುತ್ತಿದ್ದೇನೆ ಎಂದು ಬಾಲಿವುಡ್‌ ಬಾದ್‌ಶಾ ಶಾರುಖ್‌ ಖಾನ್‌ ಟ್ವೀಟ್‌ ಮಾಡಿದ್ದಾರೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೆಕೆಆರ್ ತಂಡವು ರಸೆಲ್‌ ಮಿಂಚಿನ ದಾಳಿಯ ನೆರವಿನಿಂದ ಬಲಿಷ್ಠ ಮುಂಬೈ ಇಂಡಿಯನ್ಸ್‌ ತಂಡವನ್ನು 152 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕೆಕೆಆರ್‌ ಆರಂಭಿಕ ಬ್ಯಾಟ್ಸ್‌ಮನ್‌ ನಿತೀಶ್‌ ರಾಣಾ ಆಕರ್ಷಕ ಅರ್ಧಶತಕದ ಹೊರತಾಗಿಯೂ ಕೊನೆಯಲ್ಲಿ ನಾಟಕೀಯ ಕುಸಿತ ಕಾಣುವ ಮೂಲಕ ಹಾಲಿ ಚಾಂಪಿಯನ್‌ ಮುಂಬೈಗೆ ಶರಣಾಗಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!