
ಚೆನ್ನೈ(ಏ.11): 14ನೇ ಆವೃತ್ತಿ ಐಪಿಎಲ್ ಟೂರ್ನಿಯ 3ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ತಂಡ ಮುಖಾಮುಖಿಯಾಗುತ್ತಿದೆ. ಕೆಲ ಬದಲಾವಣೆಯೊಂದಿಗೆ ಈ ಬಾರಿ ಉಭಯ ತಂಡಗಳು ಕಣಕ್ಕಿಳಿಯುತ್ತಿದೆ. ಕಳೆದ ಆವೃತ್ತಿಯಲ್ಲಿ ಕೆಕೆಆರ್ ಹಾಗೂ ಹೈದರಾಬಾದ್ ತಂಡ ದಿಟ್ಟ ಹೋರಾಟ ನೀಡಿದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಈ ಬಾರಿ ಟ್ರೋಫಿ ಮೇಲೆ ಕಣ್ಣಿಟ್ಟಿದೆ.
ಗುರುವನ್ನೇ ಮೀರಿಸಿದ ಶಿಷ್ಯ; ಸಿಎಸ್‌ಕೆ ಮಣಿಸಿದ ರಿಷಪ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್!.
ಹರಾಜಿನಲ್ಲಿ ಕೆಕೆಆರ್ ತಂಡ ಸೇರಿಕೊಂಡಿರುವ ಹರ್ಭಜನ್ ಸಿಂಗ್, ಇಂದು ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಳ್ಳುತ್ತಾರಾ ಅನ್ನೋ ಕುತೂಹಲ ಇದೀಗ ಎಲ್ಲರಲ್ಲಿ ಮನೆ ಮಾಡಿದೆ. ವರುಣ್ ಚಕ್ರವರ್ತಿ ಕಳೆದ ಆವತ್ತಿಯಲ್ಲಿ ಮಿಂಚಿನ ಪ್ರದರ್ಶನ ನೀಡಿರುವ ಕಾರಣ ಹರ್ಭಜನ್ ಸಿಂಗ್ ಹಾಗೂ ಕುಲ್ದೀಪ್ ಯಾದವ್ ಬೆಂಚ್ ಕಾದರೂ ಆಶ್ಚರ್ಯವಿಲ್ಲ.
IPL 2021: ಪಂದ್ಯ ಸೋತರೂ ಅಭಿಮಾನಿಗಳ ಮನಗೆದ್ದ ರೋಹಿತ್ ಶರ್ಮಾ
ಕೆಕೆಆರ್ ಸಂಭಾವತ್ಯ ತಂಡ:
ಶುಭ್‌ಮಾನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮಾರ್ಗನ್(ನಾಯಕ), ಶಕೀಬ್ ಅಲ್ ಹಸನ್, ದಿನೇಶ್ ಕಾರ್ತಿಕ್, ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ಪ್ಯಾಟ್ ಕಮಿನ್ಸ್, ಪ್ರಸಿದ್ಧ್ ಕೃಷ್ಣ.
ಹೈದರಾಬಾದ್ ಸಂಭಾವ್ಯ ತಂಡ:
ಡೇವಿಡ್ ವಾರ್ನರ್(ನಾಯಕ), ವೃದ್ಧಿಮಾನ್ ಸಾಹ, ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಮೊಹಮ್ಮದ್ ನಬಿ, ಅಬ್ದುಲ್ ಸಮಾದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಟಿ ನಟರಾಜನ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.