IPL 2021: ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ಬ್ಯಾಟಿಂಗ್ ಆಯ್ಕೆ, ತಂಡದಲ್ಲಿ ಮಹತ್ವದ ಬದಲಾವಣೆ!

By Suvarna NewsFirst Published Sep 27, 2021, 7:06 PM IST
Highlights
  • ಹೈದರಾಬಾದ್ ಹಾಗೂ ರಾಜಸ್ಥಾನ ನಡುವೆ ಬಿಗ್ ಫೈಟ್
  • ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್
  • ದುಬೈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯ

ದುಬೈ(ಸೆ.27):  IPL 2021ರ ಪ್ಲೇ ಆಫ್ ರೇಸ್ ಮತ್ತಷ್ಟು ಜಿಟಲಗೊಂಡಿದೆ. ಅಂತಿಮ ನಾಲ್ಕರ ಘಟ್ಟದಲ್ಲಿ ಸ್ಥಾನ ಪಡೆಯಲು ತಂಡಗಳ ಕಠಿಣ ಹೋರಾಟ ಆರಂಭಗೊಂಡಿದೆ. ಇಂದಿನ ಮಹತ್ವದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್(Sunrisers Hyderabad) ಹಾಗೂ ರಾಜಸ್ಥಾನ ರಾಯಲ್ಸ್(Rajasthan Royals) ಮುಖಾಮಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್(Toss) ಗೆದ್ದ ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

 

Match 40. Sunrisers Hyderabad XI: J Roy, W Saha, P Garg, K Williamson, A Sharma, J Holder, A Samad, R Khan, B Kumar, S Sharma, S Kaul https://t.co/5Rht92sBwW

— IndianPremierLeague (@IPL)

ಪಡಿಕ್ಕಲ್ ಕನ್ನಡಾಭಿಮಾನ: ನಾವು ಕನ್ನಡಿಗರು, ಭಾರತಕ್ಕಾಗಿ ಆಡುವಾಗಲೂ ಕನ್ನಡದಲ್ಲೇ ಮಾತು!

ರಾಜಸ್ಥಾನ ರಾಯಲ್ಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಕಾರ್ತಿಕ್ ತ್ಯಾಗಿ ಇಂಜುರಿ ಕಾರಣದಿಂದ ತಂಡದಿಂದ ಹೊರಬಿದ್ದಿದ್ದಾರೆ. ಕ್ರಿಸ್ ಮೊರಿಸ್ ಹಾಗೂ ಇವಿನ್ ಲಿವಿಸ್ ತಂಡ ಸೇರಿಕೊಂಡಿದ್ದಾರೆ.

ರಾಜಸ್ಥಾನ ತಂಡ:
ಇವಿನ್ ಲಿವಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಲಿಯಾಮ್ ಲಿವಿಂಗ್‌ಸ್ಟೋನ್, ಮಹಿಪಾಲ್ ಲೊಮ್ರೊರ್, ರಿಯಾನ್ ಪರಾಗ್, ರಾಹುಲ್ ಟಿವಾಟಿಯಾ, ಕ್ರಿಸ್ ಮೊರಿಸ್, ಚೇತನ್ ಸಕಾರಿಯಾ, ಜಯದೇವ್ ಉನದ್ಕಟ್, ಮುಸ್ತಾಫಿಜರ್ ರಹಮಾನ್

ಹೈದರಾಬಾದ್ ತಂಡ:
ಜೇಸನ್ ರಾಯ್, ವೃದ್ಧಿಮಾನ್ ಸಾಹ, ಕೇನ್ ವಿಲಿಯಮ್ಸನ್, ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮಾದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್, ಸಂದೀಪ್ ಶರ್ಮಾ

ದುಬೈ ಪಿಚ್:
ಆರ್‌ಸಿಬಿ(RCB) ಹಾಗೂ ಮುಂಬೈ ಇಂಡಿಯನ್ಸ್(MI) ನಡುವಿನ ಪಂದ್ಯ ಆಯೋಜಿಸಿದ ಪಿಚ್‌ನಲ್ಲೇ ಇಂದಿನ ಪಂದ್ಯವೂ ನಡೆಯುತ್ತಿದೆ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ತಂಡಕ್ಕೆ ಹೆಚ್ಚಿನ ಯಶಸ್ಸು ಸಿಗಲಿದೆ. ಇಷ್ಟೇ ಅಲ್ಲ ಉತ್ತಮ ಮೊತ್ತ ಪೇರಿಸಿದರೆ ಮಾತ್ರ ಗೆಲುವು ಸಾಧ್ಯ. ವೇಗಿಗಳು ಸ್ಲೋ ಬಾಲ್ ಮೂಲಕ ಹೆಚ್ಚು ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ಇಂದಿನ ಹೋರಾಟ ಮತ್ತಷ್ಟು ಕುತೂಹಲ ಮೂಡಿಸಿದೆ.

ಐಪಿಎಲ್ 2021ರ ಎರಡನೇ ಭಾಗದಲ್ಲಿ ರಾಜಸ್ಥಾನ ರಾಯಲ್ಸ್ ಮಿಶ್ರ ಫಲ ಅನುವಿಸಿದೆ. ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 2 ರನ್ ರೋಚಕ ಗೆಲವು ಕಂಡ ರಾಜಸ್ಥಾನ ರಾಯಲ್ಸ್, ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಗ್ಗರಿಸಿತು. ರಾಜಸ್ಥಾನ ರಾಯಲ್ಸ್ ಇದುವರೆಗೆ ಆಡಿದ 9ರಲ್ಲಿ 4 ಗೆಲುವು ಹಾಗೂ 5 ಸೋಲು ಕಂಡ ರಾಜಸ್ಥಾನ ಅಂಕಪಟ್ಟಿಯಲ್ಲಿ(Points Table) 6ನೇ ಸ್ಥಾನದಲ್ಲಿದೆ.

IPL 2021: ಹರ್ಷಲ್ ಪಟೇಲ್‌ಗೆ ಹ್ಯಾಟ್ರಿಕ್ ವಿಕೆಟ್, ಮುಂಬೈ ವಿರುದ್ಧ RCBಗೆ 54 ರನ್ ಗೆಲುವು!

ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 2021ರ ಮೊದಲ ಭಾಗ ಹಾಗೂ ಎರಡನೇ ಭಾಗದಲ್ಲೂ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. ಆಡಿರುವ 9 ಪಂದ್ಯದಲ್ಲಿ ಕೇವಲ 1 ಗೆಲುವು ಸಾಧಿಸಿದೆ. ಇನ್ನುಳಿದ 8 ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ 8ನೇ ಹಾಗೂ ಕೊನೆಯ ಸ್ಥಾನ ಪಡೆದಿದೆ.

ಹೈದರಾಬಾದ್ ತಂಡ ಡೇವಿಡ್ ವಾರ್ನರ್ ಬದಲು ಕೇನ್ ವಿಲಿಯಮ್ಸನ್‌ಗೆ ನಾಯಕತ್ವ ನೀಡಿದರೂ ಫಲಿತಾಂಶದಲ್ಲಿ ಬದಲಾವಣೆಯಾಗಿಲ್ಲ. ಪ್ಲೇ ಆಫ್ ರೇಸ್‌ನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಜ ಬಹುತೇಕ ಹೊರಬಿದ್ದಿದೆ. ಇನ್ನುಳಿದ ಎಲ್ಲಾ ಪಂದ್ಯ ಗೆದ್ದರೂ ಹೈದರಾಬಾದ್ 12 ಅಂಕ ಸಂಪಾದಿಸಲಿದೆ. 

IPL 2021: ಜಡೇಜಾ ಹೀರೋ, ಕೆಕೆಆರ್ ಎದುರು ರೋಚಕ ಜಯ ಸಾಧಿಸಿದ ಸಿಎಸ್‌ಕೆ..!

ಹೈದರಾಬಾದ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ ಮುಂಬೈ ಇಂಡಿಯನ್ಸ್ ತಂಡದ ಪ್ಲೇ ಆಫ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಕಾರಣ ರಾಜಸ್ಥಾನ ಹಾಗೂ ಮುಂಬೈ ಇಂಡಿಯನ್ಸ್ ತಲಾ 8 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 6 ಮತ್ತು 7ನೇ ಸ್ಥಾನದಲ್ಲಿದೆ. 4 ಮತ್ತು 5ನೇ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ಕೂಡ ತಲಾ 8 ಅಂಕ ಸಂಪಾದಿಸಿದೆ.

click me!