
ದುಬೈ(ಸೆ.15): ಮುಂಬರುವ ಯುಎಇ ಚರಣದ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಮೂರು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ತಂಡಗಳು ತಮ್ಮ ಅಭಿಯಾನ ಆರಂಭಿಸಲಿದ್ದು ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸೆಪ್ಟೆಂಬರ್ 19ರಿಂದ ಯುಎಇ ಚರಣದ ಐಪಿಎಲ್ ಆರಂಭವಾಗಲಿವೆ.
ಹೌದು, ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಅಭಿಮಾನಿಗಳ ಪ್ರವೇಶಕ್ಕೆ ಅನುಮತಿ ಸಿಕ್ಕಿದೆ. ಕ್ರಿಕೆಟ್ ಅಭಿಮಾನಿಗಳು ಮೈದಾನಕ್ಕೆ ಬಂದು ಪಂದ್ಯವನ್ನು ಕಣ್ತುಂಬಿಕೊಳ್ಳಬಹುದಾಗಿದೆ. 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಇನ್ನುಳಿದ 31 ಪಂದ್ಯಗಳು ದುಬೈ, ಶಾರ್ಜಾ ಹಾಗೂ ಅಬುಧಾಬಿ ಮೈದಾನಗಳಲ್ಲಿ ನಡೆಯಲಿವೆ. ಕೋವಿಡ್ 19 ಪ್ರೊಟೋಕಾಲ್ ಹಾಗೂ ಯುಎಇ ಸರ್ಕಾರದ ನಿಯಮಾವಳಿಗಳನ್ನು ಗಮನದಲ್ಲಿಟ್ಟುಕೊಂಡು ಸೀಮಿತ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ಒದಗಿಸುವುದಾಗಿ ಬಿಸಿಸಿಐ ತಿಳಿಸಿದೆ.
ಅಕ್ಟೋಬರ್ 17ಕ್ಕೆ ಹೊಸ 2 ಐಪಿಎಲ್ ತಂಡಗಳಿಗೆ ಆನ್‌ಲೈನ್ ಬಿಡ್ಡಿಂಗ್..!
ಪ್ರೇಕ್ಷಕರು ಸೆಪ್ಟೆಂಬರ್ 16ರಿಂದಲೇ ಐಪಿಎಲ್ ಅಧಿಕೃತ ವೆಬ್‌ಸೈಟ್ www.iplt20.com ಹಾಗೂ PlatinumList.net ವೆಬ್‌ಸೈಟ್ ಮೂಲಕ ಟಿಕೆಟ್ ಖರೀದಿಸಬಹುದಾಗಿದೆ.
ಕಳೆದ ವರ್ಷ ಸಂಪೂರ್ಣ ಐಪಿಎಲ್ ಟೂರ್ನಿಗೆ ಯುಎಇ ಆತಿಥ್ಯ ವಹಿಸಿತ್ತು. ಕೋವಿಡ್ ಭೀತಿಯಿಂದಾಗಿ ಖಾಲಿ ಮೈದಾನದಲ್ಲಿ ಪಂದ್ಯಾವಳಿಗಳು ನಡೆದಿದ್ದವು. ಇನ್ನು ಭಾರತದಲ್ಲಿ ನಡೆದ 14ನೇ ಆವೃತ್ತಿಯ ಐಪಿಎಲ್ ಪಂದ್ಯಗಳು ಖಾಲಿ ಸ್ಟೇಡಿಯಂನಲ್ಲಿ ನಡೆದಿದ್ದವು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.