CSK ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ; ತಂಡದಲ್ಲಿ 2 ಬದಲಾವಣೆ!

By Suvarna NewsFirst Published May 1, 2021, 7:04 PM IST
Highlights

ಐಪಿಎಲ್ ಟೂರ್ನಿ ಇತಿಹಾಸದಲ್ಲಿ ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿರುವ, ಚಾಂಪಿಯನ್ ಸರದಾರರು ಮುಖಾಮುಖಿಯಾಗುತ್ತಿದ್ದಾರೆ. ಮಹತ್ವದ ಪಂದ್ಯದಲ್ಲಿ CSK ವಿರುದ್ಧ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 

ದೆಹಲಿ(ಮೇ.01): 14ನೇ ಆವೃತ್ತಿ ಐಪಿಎಲ್ ಟೂರ್ನಿಯ 27ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ ಮುಂಬೈ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಧವಲ್ ಕುಲಕರ್ಣಿಿ ಹಾಗೂ ಜೇಮ್ಸ್ ನೀಶಮ್ ತಂಡ ಸೇರಿಕೊಂಡಿದ್ದಾರೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.

ಈ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಎಂ.ಎಸ್.ಧೋನಿ 5 ಗೆಲುವು ಕೇವಲ 1 ಸೋಲಿನಿಂದ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ 3 ಗೆಲುವು 3 ಸೋಲಿನೊಂದಿಗೆ 4ನೇ ಸ್ಥಾನದಲ್ಲಿದೆ.

click me!