ಈ ಸಲ ಆರ್‌ಸಿಬಿಗೆ ಕಪ್‌ ಗೆದ್ದು ಕೊಡ್ತೇವೆ: ಡೇನಿಯಲ್ ಕ್ರಿಸ್ಟಿಯನ್

Suvarna News   | Asianet News
Published : Mar 30, 2021, 03:58 PM IST
ಈ ಸಲ ಆರ್‌ಸಿಬಿಗೆ ಕಪ್‌ ಗೆದ್ದು ಕೊಡ್ತೇವೆ: ಡೇನಿಯಲ್ ಕ್ರಿಸ್ಟಿಯನ್

ಸಾರಾಂಶ

ಚೊಚ್ಚಲ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಈ ಸಲ ಕಪ್‌ ಗೆಲ್ಲಲಿದೆ ಎಂದು ಇತ್ತೀಚೆಗಷ್ಟೇ ಆರ್‌ಸಿಬಿ ಪಾಳಯ ಕೂಡಿಕೊಂಡಿರುವ ಡೇನಿಯಲ್ ಕ್ರಿಸ್ಟಿಯನ್‌ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಬೆಂಗಳೂರು(ಮಾ.30): ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡಿಕೊಂಡಿರುವ ಡೇನಿಯಲ್‌ ಕ್ರಿಸ್ಟಿಯನ್‌ ಆರ್‌ಸಿಬಿಯ ಬಹುಕಾಲದ ಕನಸನ್ನು ನನಸು ಮಾಡುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ಸೇರಿದಂತೆ 3 ತಂಡಗಳು ಮಾತ್ರ ಐಪಿಎಲ್ ಟ್ರೋಫಿಯನ್ನು ಜಯಿಸಿಲ್ಲ. ಬೆಂಗಳೂರು ಮೂಲದ ಫ್ರಾಂಚೈಸಿ 2009, 2011 ಹಾಗೂ 2016ರಲ್ಲಿ ರನ್ನರ್ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಇತ್ತೀಚೆಗಷ್ಟೇ ನಡೆದ ಐಪಿಎಲ್ ಆಟಗಾರ ಹರಾಜಿನಲ್ಲಿ 4.8 ಕೋಟಿ ರುಪಾಯಿಗೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಕೂಡಿಕೊಂಡಿರುವ ಡೇನಿಯಲ್ ಕ್ರಿಸ್ಟಿಯನ್‌ ಈ ಬಾರಿ ಆರ್‌ಸಿಬಿ ಕಪ್‌ ಗೆಲ್ಲಲಿದೆ ಎಂದು ಹೇಳಿದ್ದಾರೆ. ನಾವು ಈ ಸಲ ಕಪ್‌ ಗೆಲ್ಲಲಿದ್ದೇವೆ. ಒಂದು ತಂಡವಾಗಿ ನೋಡಿದರೆ, ಖಂಡಿತ ಈ ಸಲ ಕಪ್‌ ಗೆಲ್ಲುವ ಎಲ್ಲಾ ಸಾಮರ್ಥ್ಯ ನಮ್ಮ ತಂಡಕ್ಕಿದೆ. ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್ ಎದುರು ಮತ್ತೊಂದು ತುದಿಯಲ್ಲಿ ಬ್ಯಾಟಿಂಗ್‌ ಮಾಡಲು ನಾನು ಉತ್ಸುಕನಾಗಿದ್ದೇನೆ ಎಂದು ಇನ್‌ಸ್ಟಾಗ್ರಾಂ ಲೈವ್‌ನಲ್ಲಿ ಡೇನಿಯಲ್ ಕ್ರಿಸ್ಟಿಯನ್‌ ಹೇಳಿದ್ದಾರೆ.

IPL 2021: ಒಬ್ಬರಿಗೊಬ್ಬರು ಚಾಲೆಂಜ್‌ ಮಾಡಿಕೊಂಡ ಎಬಿಡಿ-ವಿರಾಟ್ ಕೊಹ್ಲಿ..!

ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಪ್ರವೇಶಿಸಿತ್ತಾದರೂ, ಎಲಿಮಿನೇಟರ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು ಮುಗ್ಗರಿಸುವ ಮೂಲಕ ತನ್ನ ಅಭಿಯಾನವನ್ನು ಅಂತ್ಯಗೊಳಿಸಿಕೊಂಡಿತ್ತು. ಈ ಬಾರಿಯಾದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್‌ ಟ್ರೋಫಿ ಜಯಿಸುತ್ತಾ ಎನ್ನುವುದನ್ನು ಕಾದು ನೋಡಬೇಕಾಗಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚೇರ್ ಮೇಲೆ ಕೂತು ಹೋಮ ಹವನ ಮಾಡಿದ ಶ್ರೇಯಸ್ ಅಯ್ಯರ್, ಸನಾತನಿಯೋ, ಅಲ್ವೋ ಚರ್ಚೆ!
ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್‌, ಆಫ್ಘನ್‌ಗೆ ಟಿ20 ಪಂದ್ಯಗಳೇ ಇಲ್ಲ! ಯಾಕೆ?