IPL 2022: ಕೋಲ್ಕತಾ ಸವಾಲು ಗೆಲ್ಲುತ್ತಾ ಡೆಲ್ಲಿ ಕ್ಯಾಪಿಟಲ್ಸ್‌?

Published : Apr 10, 2022, 10:07 AM IST
IPL 2022: ಕೋಲ್ಕತಾ ಸವಾಲು ಗೆಲ್ಲುತ್ತಾ ಡೆಲ್ಲಿ ಕ್ಯಾಪಿಟಲ್ಸ್‌?

ಸಾರಾಂಶ

* ಸೂಪರ್ ಸಂಡೆಯ ಮೊದಲ ಪಂದ್ಯದಲ್ಲಿ ಕೆಕೆಆರ್‌ಗೆ ಡೆಲ್ಲಿ ಸವಾಲು * ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದೆ ಕೋಲ್ಕತಾ ನೈಟ್ ರೈಡರ್ಸ್‌ * ಕೆಕೆಆರ್ ಸವಾಲು ಮೆಟ್ಟಿ ನಿಲ್ಲುವ ವಿಶ್ವಾಸದಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್‌

ಮುಂಬೈ(ಏ.10): 15ನೇ ಆವೃತ್ತಿಯ (IPL 2022) ಐಪಿಎಲ್‌ನಲ್ಲಿ ಗೆಲುವಿನ ಆರಂಭ ಪಡೆದ ಹೊರತಾಗಿಯೂ ಬಳಿಕ ಸತತ ಎರಡು ಪಂದ್ಯಗಳಲ್ಲಿ ಸೋಲನುಭವಿಸಿರುವ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals), ಭಾನುವಾರ ಕೋಲ್ಕತಾ ನೈಟ್‌ ರೈಡ​ರ್ಸ್‌ (Kolkata Knight Riders) ಸವಾಲನ್ನು ಎದುರಿಸಲಿದೆ. ರಿಷಭ್‌ ಪಂತ್‌ (Rishabh Pant) ನಾಯಕತ್ವದ ಡೆಲ್ಲಿ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದ್ದರೆ, ಶ್ರೇಯಸ್‌ ಅಯ್ಯರ್‌ (Shreyas Iyer) ಮುನ್ನಡೆಸುತ್ತಿರುವ ಕೋಲ್ಕತಾ ಹ್ಯಾಟ್ರಿಕ್‌ ಗೆಲುವಿನ ಜೊತೆ ಅಗ್ರಸ್ಥಾನ ಕಾಯ್ದುಕೊಳ್ಳುವ ನಿರೀಕ್ಷೆಯಲ್ಲಿದೆ. 

ಟೀಂ ಇಂಡಿಯಾದ (Team India) ಭವಿಷ್ಯದ ನಾಯಕರೆಂದೇ ಕರೆಸಿಕೊಳ್ಳುತ್ತಿರುವವರ ನಡುವಿನ ಪೈಪೋಟಿ ತೀವ್ರ ಕುತೂಹಲ ಸೃಷ್ಟಿಸಿದೆ. ಈ ಮೊದಲು ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಇನ್ನು ಇದೇ ವೇಳೆ ಮಣಿಕಟ್ಟು ಸ್ಪಿನ್ನರ್ ಖ್ಯಾತಿಯ ಕುಲ್ದೀಪ್ ಯಾದವ್ ಕೆಕೆಆರ್ ತೊರೆದು ಡೆಲ್ಲಿ ಕ್ಯಾಪಿಟಲ್ಸ್ ತೆಕ್ಕೆಗೆ ಜಾರಿದ್ದು, ಮೊದಲ ಬಾರಿಗೆ ಕೆಕೆಆರ್‌ಗೆ ಸವಾಲೆಸೆಯಲು ಸಜ್ಜಾಗಿದ್ದಾರೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಆಡಿದ 4 ಪಂದ್ಯಗಳ ಪೈಕಿ ಮೂರು ಗೆಲುವು ಹಾಗೂ ಒಂದು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 3 ಪಂದ್ಯಗಳನ್ನಾಡಿ ಒಂದು ಗೆಲುವು ಹಾಗೂ ಎರಡು ಸೋಲುಗಳೊಂದಿಗೆ ಕೇವಲ 2 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 7ನೇ ಸ್ಥಾನ ಪಡೆದಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೇವಿಡ್‌ ವಾರ್ನರ್‌ (David Warner) ಮೊದಲ ಪಂದ್ಯದಲ್ಲಿ ಮಂಕಾಗಿದ್ದರು, ಇದೀಗ ಎರಡನೇ ಪಂದ್ಯದಲ್ಲಿ ಪೃಥ್ವಿ ಶಾ ಜತೆ ಸ್ಪೋಟಕ ಆರಂಭ ಒದಗಿಸಲು ಆಸೀಸ್ ಆರಂಭಿಕ ಬ್ಯಾಟರ್ ಎದುರು ನೋಡುತ್ತಿದ್ದಾರೆ. ಮೇಲ್ನೋಟಕ್ಕೆ ಎರಡೂ ತಂಡಗಳು ಸಾಕಷ್ಟು ಬಲಿಷ್ಠವಾಗಿರುವುದರಿಂದಾಗಿ ಸೂಪರ್ ಸಂಡೇಯ ಮೊದಲ ಪಂದ್ಯದಲ್ಲೇ ಹೈವೋಲ್ಟೇಜ್ ಸೆಣಸಾಟವನ್ನು ನಿರೀಕ್ಷಿಸಲಾಗಿದೆ.

IPL 2022 ಅನುಜ್ ರಾವತ್ ರೌದ್ರ, ಮುಂಬೈ ಇಂಡಿಯನ್ಸ್ ಛಿದ್ರ!

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್‌ ಒಟ್ಟು 28 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಕೋಲ್ಕತಾ ನೈಟ್ ರೈಡರ್ಸ್‌ ತಂಡವು ಕೊಂಚ ಮೇಲುಗೈ ಸಾಧಿಸಿದೆ. ಉಭಯ ತಂಡಗಳ 28 ಮುಖಾಮುಖಿಯ ಪೈಕಿ ಕೋಲ್ಕತಾ ನೈಟ್‌ ರೈಡರ್ಸ್ ತಂಡವು 16 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಆದರೆ 2018ರಿಂದೀಚೆಗೆ ಉಭಯ ತಂಡಗಳು ಜಿದ್ದಾಜಿದ್ದಿನ ಪ್ರದರ್ಶನ ತೋರಿವೆ. 2018ರಿಂದೀಚೆಗೆ ಉಭಯ ತಂಡಗಳು ಒಟ್ಟು 9 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ 9 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ಕೋಲ್ಕತಾ ನೈಟ್ ರೈಡರ್ಸ್ ತಂಡವು 4 ಬಾರಿ ಗೆದ್ದು ಬೀಗಿದೆ.

ಸಂಭವನೀಯ ಆಟಗಾರರ ಪಟ್ಟಿ

ಡೆಲ್ಲಿ ಕ್ಯಾಪಿಟಲ್ಸ್‌: ಪೃಥ್ವಿ ಶಾ, ಡೇವಿಡ್ ವಾರ್ನರ್‌, ಸರ್ಫರಾಜ್ ಖಾನ್‌, ರಿಷಭ್ ಪಂತ್‌(ನಾಯಕ), ಲಲಿತ್ ಯಾದವ್‌, ರೋಮನ್ ಪೋವೆಲ್‌, ಶಾರ್ದೂಲ್ ಠಾಕೂರ್‌, ಅಕ್ಷರ್ ಪಟೇಲ್‌, ಕುಲ್ದೀಪ್ ಯಾದವ್‌, ಏನ್ರಿಚ್ ನೋಕಿಯಾ, ಮುಸ್ತಾಫಿಜುರ್‌ ರೆಹಮಾನ್.

ಕೋಲ್ಕತಾ ನೈಟ್ ರೈಡರ್ಸ್‌: ವೆಂಕಟೇಶ ಅಯ್ಯರ್‌, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್‌(ನಾಯಕ), ನಿತೀಶ್ ರಾಣಾ‌, ಸ್ಯಾಮ್ ಬಿಲ್ಲಿಂಗ್ಸ್‌, ಆಂಡ್ರೆ ರಸೆಲ್‌, ಸುನಿಲ್ ನರೈನ್‌, ಪ್ಯಾಟ್ ಕಮಿನ್ಸ್‌, ಉಮೇಶ್ ಯಾದವ್‌, ರಸಿಖ್ ಸಲಾಂ‌, ವರುಣ್ ಚಕ್ರವರ್ತಿ

ಸ್ಥಳ: ಮುಂಬೈ, ಬ್ರೆಬೋರ್ನ್‌ ಕ್ರೀಡಾಂಗಣ
ಪಂದ್ಯ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?
ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!