IPL 2022: ಪ್ಲೇ-ಆಫ್‌ ರೇಸ್‌ನಲ್ಲಿ ಉಳಿಯುತ್ತಾ ಡೆಲ್ಲಿ ಕ್ಯಾಪಿಟಲ್ಸ್‌..?

By Naveen KodaseFirst Published May 11, 2022, 11:43 AM IST
Highlights

* ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕಿಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ಸವಾಲು

* ಪ್ಲೇ ಆಫ್‌ ದೃಷ್ಟಿಯಿಂದ ಡೆಲ್ಲಿ ತಂಡಕ್ಕಿದು ಮಾಡು ಇಲ್ಲವೇ ಮಡಿ ಪಂದ್ಯ

* ಬಲಿಷ್ಠ ರಾಜಸ್ಥಾನಕ್ಕೆ ಶಾಕ್ ನೀಡಲು ರಿಷಭ್ ಪಂತ್ ಪಡೆ ರೆಡಿ?

ನವಿ ಮುಂಬೈ(ಮೇ.11): ಅಸ್ಥಿರ ಪ್ರದರ್ಶನ ನೀಡುತ್ತಾ 15ನೇ ಆವೃತ್ತಿ ಐಪಿಎಲ್‌ನಲ್ಲಿ ಲೀಗ್‌ ಹಂತದಲ್ಲೇ ಹೊರಬೀಳುವ ಆತಂಕಕ್ಕೆ ಸಿಲುಕಿರುವ ಡೆಲ್ಲಿ ಕ್ಯಾಪಿಟಲ್ಸ್‌ ಗೆಲುವಿನ ಲಯ ಕಂಡುಕೊಳ್ಳುವ ತವಕದಲ್ಲಿದ್ದು, ಬುಧವಾರ ರಾಜಸ್ಥಾನ ರಾಯಲ್ಸ್‌ ಸವಾಲು ಎದುರಿಸಲಿದೆ. 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 58ನೇ ಪಂದ್ಯಕ್ಕೆ ಇಲ್ಲಿನ ಡಿವೈ ಪಾಟೀಲ್ ಮೈದಾನ ಆತಿಥ್ಯವನ್ನು ವಹಿಸಿದೆ. ಎರಡೂ ತಂಡಗಳ ಪಾಲಿಗೆ ಇಂದಿನ ಪಂದ್ಯವು ಸಾಕಷ್ಟು ಮಹತ್ವದ್ದಾಗಿದ್ದು, ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಲಾಗಿದೆ.

ರಿಷಭ್‌ ಪಂತ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿರುವ 11 ಪಂದ್ಯಗಳಲ್ಲಿ 5ರಲ್ಲಿ ಗೆದ್ದಿದ್ದು 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ತಂಡ ಈ ಬಾರಿ ಸ್ಥಿರ ಪ್ರದರ್ಶನ ನೀಡಲು ವಿಫಲವಾಗಿದ್ದು, ಸತತವಾಗಿ 2 ಪಂದ್ಯಗಳನ್ನು ಗೆದ್ದೇ ಇಲ್ಲ. ಪ್ಲೇ-ಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಳ್ಳುವ ಕಾತರದಲ್ಲಿರುವ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಸೋತರೆ ಪ್ಲೇ-ಆಫ್‌ ರೇಸ್‌ನಿಂದ ಬಹುತೇಕ ಹೊರಬೀಳಲಿದೆ.

Latest Videos

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗೆಲುವು ಸಾಧಿಸಬೇಕಿದ್ದರೆ ತಂಡದ ಸ್ಟಾರ್ ಆಟಗಾರರಾದ ಡೇವಿಡ್ ವಾರ್ನರ್, ರಿಷಭ್ ಪಂತ್ ಹಾಗೂ ರೋಮನ್ ಪೊವೆಲ್ ಸ್ಪೋಟಕ ಬ್ಯಾಟಿಂಗ್ ನಡೆಸಬೇಕಿದೆ. ಜ್ವರದಿಂದ ಬಳಲುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಬ್ಯಾಟರ್‌ ಪೃಥ್ವಿ ಶಾ ಇಂದಿನ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆಯಿದೆ. ಇನ್ನು ಮಿಚೆಲ್ ಮಾರ್ಷ್‌, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್ ಹಾಗೂ ಕುಲ್ದೀಪ್ ಯಾದವ್ ಜವಾಬ್ದಾರಿಯುತ ಪ್ರದರ್ಶನ ತೋರಿದರೆ ಬಲಿಷ್ಠ ರಾಜಸ್ಥಾನ ರಾ

ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್‌ ತಂಡವು 11ರಲ್ಲಿ 7 ಗೆಲುವು ಕಂಡಿದ್ದು, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲೂ ಗೆದ್ದು ಪ್ಲೇ-ಆಫ್‌ಗೆ ಮತ್ತಷ್ಟು ಹತ್ತಿರವಾಗುವ ಜೊತೆಗೆ ಅಗ್ರ-2ರಲ್ಲಿ ಸ್ಥಾನ ಪಡೆಯುವ ಗುರಿ ಇಟ್ಟುಕೊಂಡಿದೆ. ಮೊದಲ ಮುಖಾಮುಖಿಯಲ್ಲಿ ಗೆದ್ದಿದ್ದ ರಾಜಸ್ಥಾನ ಮತ್ತೊಮ್ಮೆ ಕ್ಯಾಪಿಟಲ್ಸ್‌ಗೆ ಸೋಲುಣಿಸುವ ನಿರೀಕ್ಷೆಯಲ್ಲಿದೆ.

ರಾಜಸ್ಥಾನ ರಾಯಲ್ಸ್ ತಂಡದ ಪರ ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇಂದಿನ ಪಂದ್ಯಕ್ಕೆ ಶಿಮ್ರೊನ್ ಹೆಟ್ಮೇಯರ್ ಅಲಭ್ಯರಾಗಿದ್ದು, ಹೆಟ್ಮೇಯರ್ ಬದಲಿಗೆ ಜೇಮ್ಸ್ ನೀಶಮ್ ಇಲ್ಲವೇ ರಾಸಿ ವ್ಯಾನ್ ಡರ್‌ ಡುಸೇನ್ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. 

ಐಪಿಎಲ್ ಇತಿಹಾಸದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು 25 ಬಾರಿ ಮುಖಾಮುಖಿಯಾಗಿದ್ದು, ಉಭಯ ತಂಡಗಳು ಸಮಬಲದ ಪ್ರದರ್ಶನವನ್ನು ತೋರಿವೆ. 25 ಪಂದ್ಯಗಳ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ರಾಜಸ್ಥಾನ ರಾಯಲ್ಸ್ ತಂಡವು 13 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಇನ್ನು ಕಳೆದ 8 ಪಂದ್ಯಗಳ ಪೈಕಿ 7 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡವು ಗೆಲುವಿನ ನಗೆ ಬೀರಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಟಾಸ್ ಗೆಲ್ಲುವ ಯಾವ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ. 

ಸಂಭವನೀಯ ಆಟಗಾರರ ಪಟ್ಟಿ

ಡೆಲ್ಲಿ: ಕೆ ಎಸ್ ಭರತ್‌, ಡೇವಿಡ್ ವಾರ್ನರ್‌, ಮಿಚೆಲ್ ಮಾರ್ಷ್‌‍, ರಿಷಭ್ ಪಂತ್‌(ನಾಯಕ), ರೋಮನ್ ಪೋವೆಲ್‌, ರಿಪಲ್ ಪಟೇಲ್‌, ಶಾರ್ದೂಲ್ ಠಾಕೂರ್‌, ಅಕ್ಷರ್ ಪಟೇಲ್‌, ಕುಲ್ದೀಪ್ ಯಾದವ್‌, ಖಲೀಲ್ ಅಹಮ್ಮದ್‌, ಏನ್ರಿಚ್ ನೋಕಿಯಾ.

ರಾಜಸ್ಥಾನ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್‌, ಸಂಜು ಸ್ಯಾಮ್ಸನ್‌(ನಾಯಕ), ದೇವದತ್ ಪಡಿಕ್ಕಲ್‌, ವ್ಯಾನ್ ಡರ್ ಡುಸ್ಸೆನ್‌, ರಿಯಾನ್ ಪರಾಗ್‌, ರವಿಚಂದ್ರನ್ ಅಶ್ವಿನ್‌, ಟ್ರೆಂಟ್ ಬೌಲ್ಟ್‌, ಪ್ರಸಿದ್ಧ್ ಕೃಷ್ಣ, ಯುಜುವೇಂದ್ರ ಚಹಲ್‌, ಕುಲ್ದೀಪ್‌ ಸೆನ್‌.

ಸ್ಥಳ: ನವಿ ಮುಂಬೈ, ಡಿ.ವೈ.ಪಾಟೀಲ್‌ ಕ್ರೀಡಾಂಗಣ
ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌
 

click me!