IPL 2022 ಆರಂಭಿಕ ಹಂತದಲ್ಲಿ RCBಗೆ ಹಿನ್ನಡೆ, ಕೊಹ್ಲಿ ಡಕೌಟ್!

Published : Apr 23, 2022, 07:50 PM ISTUpdated : Apr 23, 2022, 07:56 PM IST
IPL 2022 ಆರಂಭಿಕ ಹಂತದಲ್ಲಿ RCBಗೆ ಹಿನ್ನಡೆ, ಕೊಹ್ಲಿ ಡಕೌಟ್!

ಸಾರಾಂಶ

ಆರ್‌ಸಿಬಿ ಹಾಗೂ ಹೈದರಾಬಾದ್ ನಡುವಿನ ಲೀಗ್ ಪಂದ್ಯ ಟಾಸ್ ಸೋತ ಆರ್‌ಸಿಬಿ ತಂಡಕ್ಕೆ ಆರಂಭಿಕ ಹಂತದಲ್ಲೇ ಹಿನ್ನಡೆ ಪ್ರಮುಖ ವಿಕೆಟ್ ಕಳೆದುಕೊಂಡ ಬೆಂಗಳೂರು  

ಮುಂಬೈ(ಏ.23): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ 2022ನ 36ನೇ ಲೀಗ್ ಪಂದ್ಯ ಆರಂಭದಲ್ಲೇ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಆರ್‌ಸಿಬಿ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಮಾರ್ಕೋ ಜಾನ್ಸೆನ್ ಮಾರಕ ದಾಳಿಗೆ ಆರ್‌ಸಿಬಿ ಕೇವಲ 2 ಓವರ್‌ಗಳಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡಿದೆ. ನಾಯಕ ಫಾಫ್ ಡುಪ್ಲೆಸಿಸ್ ಕೇವಲ 5 ರನ್ ಸಿಡಿಸಿ ಔಟಾದರು. ಇನ್ನು ವಿರಾಟ್ ಕೊಹ್ಲಿ ಖಾತೆ ತೆರೆಯುವ ಮೊದಲೇ ವಿಕೆಟ್ ಕೈಚೆಲ್ಲಿದರು. ಕೊಹ್ಲಿ ಡಕೌಟ್ ಆದರು. ಇನ್ನು ಅನೂಜ್ ರಾವತ್ ಕೂಡ ಡಕೌಟ್ ಆದರು. ಈ ಮೂಲಕ 8 ರನ್‌ಗೆ ಆರ್‌ಸಿಬಿ 3 ವಿಕೆಟ್ ಕಳೆದುಕೊಂಡಿತು.

20ನೇ ಓವರ್​​​​ನಲ್ಲಿ ಧೋನಿಗೆ ಧೋನಿಯೇ ಸರಿಸಾಟಿ..!

ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೈದರಾಬಾದ್ ಹಾಗೂ ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11
ಫಾಫ್ ಡುಪ್ಲೆಸಿಸ್(ನಾಯಕ), ಅನೂಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸೂಯಷ್ ಪ್ರಬುದೇಸಾಯಿ, ಶಹಬಾಜ್ ಅಹಮ್ಮದ್, ದಿನೇಶ್ ಕಾರ್ತಿಕ್, ವಾನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹೇಜಲ್‌ವುಡ್, ಮೊಹಮ್ಮದ್ ಸಿರಾಜ್

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11
ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್(ನಾಯಕ), ರಾಹುಲ್ ತ್ರಿಪಾಠಿ, ಆ್ಯಡಿನ್ ಮರ್ಕ್ರಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ಜಗದೀಶ್ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೋ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್

IPL 2022: ರಸೆಲ್ ಹೋರಾಟ ವ್ಯರ್ಥ, ಗುಜರಾತ್‌ಗೆ ರೋಚಕ ಜಯ

ಈ ಐಪಿಎಲ್‌ನಲ್ಲಿ ಬಟ್ಲರ್‌ 3ನೇ ಶತಕ!
ರಾಜಸ್ಥಾನ ರಾಯಲ್ಸ್‌ನ ಆರಂಭಿಕ ಬ್ಯಾಟರ್‌ ಜೋಸ್‌ ಬಟ್ಲರ್‌ 15ನೇ ಆವೃತ್ತಿಯ ಐಪಿಎಲ್‌ನಲ್ಲಿ 3ನೇ ಶತಕ ಬಾರಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಅವರು 65 ಎಸೆತದಲ್ಲಿ 9 ಬೌಂಡರಿ, 9 ಸಿಕ್ಸರ್‌ನೊಂದಿಗೆ 116 ರನ್‌ ಸಿಡಿಸಿದರು. ಐಪಿಎಲ್‌ ಆವೃತ್ತಿಯೊಂದರಲ್ಲಿ 3 ಶತಕ ಸಿಡಿಸಿದ 2ನೇ ಬ್ಯಾಟರ್‌ ಎನಿಸಿಕೊಂಡರು. 2016ರಲ್ಲಿ ವಿರಾಟ್‌ ಕೊಹ್ಲಿ 4 ಶತಕ ಬಾರಿಸಿದ್ದರು. ಜೊತೆಗೆ ಸತತ 2 ಶತಕ ಬಾರಿಸಿದ 2ನೇ ಆಟಗಾರ ಎನ್ನುವ ಹಿರಿಮೆಗೂ ಪಾತ್ರರಾದರು. 2020ರಲ್ಲಿ ಧವನ್‌ ಈ ಸಾಧನೆ ಮಾಡಿದ್ದರು. ಬಟ್ಲರ್‌ ಈ ಆವೃತ್ತಿಯಲ್ಲಿ 7 ಪಂದ್ಯಗಳಲ್ಲಿ 3 ಶತಕ, 2 ಅರ್ಧಶತಕಗಳೊಂದಿಗೆ 491 ರನ್‌ ಕಲೆಹಾಕಿ, ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ರೋಹಿತ್‌ 14ನೇ ಬಾರಿ ಡಕೌಟ್‌: ದಾಖಲೆ!
ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮಾ ಐಪಿಎಲ್‌ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್‌ ಎಂಬ ಅನಗತ್ಯ ದಾಖಲೆ ಬರೆದಿದ್ದಾರೆ. ಗುರುವಾರ ಚೆನ್ನೈ ಸೂಪರ್‌ ಕಿಂಗ್‌್ಸ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅವರು ತಾವೆದುರಿಸಿದ 2ನೇ ಎಸೆತದಲ್ಲಿ ಮುಖೇಶ್‌ ಚೌಧರಿಗೆ ವಿಕೆಟ್‌ ಒಪ್ಪಿಸಿದರು. ರೋಹಿತ್‌ ಐಪಿಎಲ್‌ನಲ್ಲಿ ಶೂನ್ಯಕ್ಕೆ ಔಟಾಗಿದ್ದು ಇದು 14ನೇ ಬಾರಿ. ಅಜಿಂಕ್ಯಾ ರಹಾನೆ, ಪಾರ್ಥಿವ್‌ ಪಟೇಲ್‌, ಅಂಬಟಿ ರಾಯಡು, ಮಂದೀಪ್‌ ಸಿಂಗ್‌, ಹರ್ಭಜನ್‌ ಸಿಂಗ್‌ ಹಾಗೂ ಪಿಯೂಶ್‌ ಚಾವ್ಲಾ ತಲಾ 13 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?