IPL 2022: ಗುಜರಾತ್ ಟೈಟಾನ್ಸ್ ಓಟಕ್ಕೆ ಬ್ರೇಕ್ ಹಾಕುತ್ತಾ ಸನ್‌ರೈಸರ್ಸ್..?

Published : Apr 11, 2022, 10:16 AM IST
IPL 2022: ಗುಜರಾತ್ ಟೈಟಾನ್ಸ್ ಓಟಕ್ಕೆ ಬ್ರೇಕ್ ಹಾಕುತ್ತಾ ಸನ್‌ರೈಸರ್ಸ್..?

ಸಾರಾಂಶ

* ಐಪಿಎಲ್‌ನಲ್ಲಿಂದು ಸನ್‌ರೈಸರ್ಸ್ ಹೈದರಾಬಾದ್-ಗುಜರಾತ್ ಟೈಟಾನ್ಸ್ ಮುಖಾಮುಖಿ * ಹ್ಯಾಟ್ರಿಕ್ ಗೆಲುವು ದಾಖಲಿಸಿ ಬೀಗುತ್ತಿದೆ ಗುಜರಾತ್ ಟೈಟಾನ್ಸ್‌ ಪಡೆ * ಬಲಿಷ್ಠ ಗುಜರಾತ್‌ಗೆ ಶಾಕ್ ನೀಡಲು ಸಜ್ಜಾದ ಆರೆಂಜ್ ಆರ್ಮಿ

ನವಿ ಮುಂಬೈ(ಏ.11): 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಇನ್ನೂ ಸೋಲು ಕಾಣದ ಏಕೈಕ ತಂಡ ಎನಿಸಿಕೊಂಡಿರುವ ಗುಜರಾತ್‌ ಟೈಟಾನ್ಸ್‌, ಸೋಮವಾರ ಸನ್‌ರೈಸ​ರ್ಸ್‌ ಹೈದರಾಬಾದ್‌ ವಿರುದ್ಧ ಸೆಣಸಾಡಲಿದೆ. ಗುಜರಾತ್‌ ಸತತ 4ನೇ ಗೆಲುವಿನ ತವಕದಲ್ಲಿದ್ದರೆ, ಹೈದರಾಬಾದ್‌ ಗೆಲುವಿನ ಲಯ ಮುಂದುವರಿಸುವ ವಿಶ್ವಾದದಲ್ಲಿದೆ. ಈ ಪಂದ್ಯಕ್ಕೆ ಇಲ್ಲಿನ ಡಿವೈ ಪಾಟೀಲ್ ಮೈದಾನ ಆತಿಥ್ಯವನ್ನು ವಹಿಸಿದೆ

ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ತುಂಬು ಉತ್ಸಾಹದಲ್ಲಿದೆ. ಅದರಲ್ಲೂ ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಸೋಲಿನ ದವಡೆಯಿಂದ ಪಾರಾಗಿ ಪವಾಡ ರೀತಿಯಲ್ಲಿ ಜಯಗಳಿಸಿತ್ತು. ಮೊದಲ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್‌ ವಿರುದ್ದ 5 ವಿಕೆಟ್‌ಗಳ ಜಯ ಸಾಧಿಸಿದ್ದ ಪಾಂಡ್ಯ ಪಡೆ, ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಎದುರು 14 ರನ್‌ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಗುಜರಾತ್ ಟೈಟಾನ್ಸ್‌ ತಂಡವು ಕಳೆದ ಪಂದ್ಯದಲ್ಲಿ ಪಂಜಾಬ್ ಎದುರು 6 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ನಗೆ ಬೀರಿದೆ. ಗುಜರಾತ್ ತಂಡದ ಪರ ಶುಭ್‌ಮನ್ ಗಿಲ್ ಭರ್ಜರಿ ಫಾರ್ಮ್‌ನಲ್ಲಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡಿದೆ. ಇದರ ಜತೆಗೆ ಹಾರ್ದಿಕ್ ಪಾಂಡ್ಯ, ರಾಹುಲ್ ತೆವಾಟಿಯಾ ಜವಾಬ್ದಾರಿಯುತ ಪ್ರದರ್ಶನ ತೋರುತ್ತಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ, ಲಾಕಿ ಫರ್ಗ್ಯೂಸನ್‌, ರಶೀದ್ ಖಾನ್ ಮಿಂಚುತ್ತಿದ್ದು, ಸನ್‌ರೈಸರ್ಸ್ ಮೇಲೆ ಒತ್ತಡ ಹೇರಲು ಗುಜರಾತ್ ಸಜ್ಜಾಗಿದೆ.

ಮತ್ತೊಂದೆಡೆ ಆರಂಭಿಕ ಎರಡು ಪಂದ್ಯಗಳಲ್ಲಿ ಸೋತು ನಿರಾಸೆ ಅನುಭವಿಸಿದ್ದ ಕೇನ್‌ ವಿಲಿಯಮ್ಸನ್‌ ಸಾರಥ್ಯದ ಹೈದರಾಬಾದ್‌ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಜಯಭೇರಿ ಬಾರಿಸಿ ಗೆಲುವಿನ ಲಯ ಕಂಡುಕೊಂಡಿತ್ತು. ಎಲ್ಲಾ ವಿಭಾಗಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಗುಜರಾತ್‌ನಿಂದ ಹೈದರಾಬಾದ್‌ಗೆ ಕಠಿಣ ಸವಾಲು ಎದುರಾಗುವ ನಿರೀಕ್ಷೆ ಇದೆ. ಸನ್‌ರೈಸರ್ಸ್‌ ಹೈದರಾಬಾದ್ ತಂಡಕ್ಕೆ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ಮೂಲಕ ಕಳೆದ ಪಂದ್ಯದಲ್ಲಿ ತಂಡಕ್ಕೆ ಆಸರೆಯಾಗಿದ್ದರು. ಇಂದೂ ಕೂಡಾ ಅವರಿಂದ ಉತ್ತರ ಆರಂಭವನ್ನು ಆರೆಂಜ್ ಆರ್ಮಿ ನಿರೀಕ್ಷಿಸುತ್ತಿದೆ. ಇನ್ನು ಕೇನ್ ವಿಲಿಯಮ್ಸನ್, ಏಯ್ಡನ್ ಮಾರ್ಕ್‌ರಮ್‌, ನಿಕೋಲಸ್ ಪೂರನ್ ಹಾಗೂ ರಾಹುಲ್ ತ್ರಿಪಾಠಿ ಕೂಡಾ ತಮ್ಮ ಸಾಮರ್ಥ್ಯಕ್ಕೆ ತಕ್ಕಂತ ಪ್ರದರ್ಶನ ತೋರಿದರೆ, ಬಲಿಷ್ಠ ಗುಜರಾತ್ ತಂಡಕ್ಕೆ ಮೊದಲ ಸೋಲಿನ ರುಚಿ ತೋರಿಸಬಹುದಾಗಿದೆ. 

IPL 2022 ರಾಜಸ್ಥಾನ ರಾಯಲ್ಸ್ ವಿರುದ್ಧ ಮುಗ್ಗರಿಸಿದ ಲಖನೌ ಸೂಪರ್ ಜೈಂಟ್ಸ್

ಸಂಭವನೀಯ ಆಟಗಾರರ ಪಟ್ಟಿ

ಗುಜರಾತ್ ಟೈಟಾನ್ಸ್‌‌: ಶುಭ್‌ಮನ್‌ ಗಿಲ್‌, ಮ್ಯಾಥ್ಯೂ ವೇಡ್‌, ಸಾಯಿ ಸುದರ್ಶನ್‌, ಹಾರ್ದಿಕ್ ಪಾಂಡ್ಯ‌(ನಾಯಕ), ಡೇವಿಡ್ ಮಿಲ್ಲರ್‌, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್‌, ರಶೀದ್ ಖಾನ್‌, ಲಾಕಿ ಫಗ್ರ್ಯೂಸನ್‌, ಮೊಹಮ್ಮದ್ ಶಮಿ, ದರ್ಶನ್‌ ನಲಕಂಡೆ.

ಸನ್‌ರೈಸರ್ಸ್‌ ಹೈದ್ರಾಬಾದ್‌: ಅಭಿಷೇಕ್ ಶರ್ಮಾ‌, ಕೇನ್ ವಿಲಿಯಮ್ಸನ್‌(ನಾಯಕ), ರಾಹುಲ್ ತ್ರಿಪಾಠಿ, ಏಯ್ಡನ್ ಮಾರ್ಕ್ರಮ್‌, ನಿಕೋಲಸ್ ಪೂರನ್‌, ವಾಷಿಂಗ್ಟನ್ ಸುಂದರ್‌, ಶಶಾಂಕ್‌ ಸಿಂಗ್, ಭುವನೇಶ್ವರ್ ಕುಮಾರ್‌, ಮಾರ್ಕೊ ಯಾನ್ಸನ್‌, ಉಮ್ರಾನ್ ಮಲಿಕ್‌, ಟಿ ನಟರಾಜನ್‌.

ಸ್ಥಳ: ನವಿ ಮುಂಬೈ, ಡಿ.ವೈ.ಪಾಟೀಲ್‌ ಸ್ಟೇಡಿಯಂ
ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ