
ಮುಂಬೈ(ನ.12): ಐಪಿಎಲ್ 2023 ಟೂರ್ನಿಯ ತಯಾರಿಗಳು ಆರಂಭಗೊಂಡಿದೆ. ಮುಂದಿನ ತಿಂಗಳು ನಡೆಯಲಿರುವ ಐಪಿಎಲ್ ಮಿನಿ ಹರಾಜಿಗೂ ಮೊದಲು ಟ್ರೇಡ್ ಮೂಲಕ ಆಟಗಾರರನ್ನು ಖರೀದಿಸಲು ಐಪಿಎಲ್ ಗರ್ವನಿಂಗ್ ಕೌನ್ಸಿಲ್ ಅವಕಾಶ ಮಾಡಿಕೊಟ್ಟಿದೆ. ಇದರ ಮೊದಲ ಭಾಗವಾಗಿ ಇದೀಗ ಮುಂಬೈ ಇಂಡಿಯನ್ಸ್ ಟ್ರೇಡ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿಯನ್ನು ಖರೀದಿಸಿದೆ. ಆಸ್ಟ್ರೇಲಿಯಾದ ಎಡಗೈ ವೇಗಿ ಜೇಸನ್ ಬೆಹ್ರೆನ್ಡಾರ್ಫ್‌ನ್ನು ಮುಂಬೈ ಖರೀದಿಸಿದೆ. 32 ವರ್ಷದ ವೇಗಿ 2018 ಹಾಗೂ 2019ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದರು. ಇದೀಗ 2023ರ ಐಪಿಎಲ್ ಟೂರ್ನಿಗೆ ಮತ್ತೆ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ.
ಐಪಿಎಲ್ ಟೂರ್ನಿಗೆ ಫ್ರಾಂಚೈಸಿಗಳ ತಯಾರಿ ಆರಂಭಗೊಂಡಿದೆ. 2022ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಜೇಸನ್‌ಗೆ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮತ್ತೊಂದು ಟ್ರೋಫಿ ಮುಡಿಗೇರಿಸಿಕೊಳ್ಳುವ ಲೆಕ್ಕಾಚಾರದಲ್ಲಿರುವ ಮುಂಬೈ ಇಂಡಿಯನ್ಸ್ ಈಗಲೇ ಸಮತೋಲನದ ತಂಡ ಕಟ್ಟುತ್ತಿದೆ. ಇದರ ಭಾಗವಾಗಿ ವೇಗಿ ಜೇಸನ್ ಬೆಹ್ರೆನ್ಡಾರ್ಫ್ ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ.
ಕ್ರಿಕೆಟ್ ಸಿನಿಮಾ ಅಭಿಮಾನಿಗಳಿಗೆ ಬಂಪರ್ ಗಿಫ್ಟ್, ರಿಶಬ್ ಶೆಟ್ಟಿ ಜೊತೆ ಎಬಿ ಡಿವಿಲಿಯರ್ಸ್!
2022ರ ಐಪಿಎಲ್ ಹರಾಜಿನಲ್ಲಿ ಆರ್‌ಸಿಬಿ ವೇಗಿ ಜೇಸನ್‌ಗೆ 75 ಲಕ್ಷ ರೂಪಾಯಿ ನೀಡಿ ಖರೀದಿಸಿತ್ತು. 2021ರಲ್ಲಿ ಜೇಸನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಿದ್ದರು. ಇದೀಗ ಮತ್ತೆ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ.
ಡಿ.23ಕ್ಕೆ ಕೊಚ್ಚಿಯಲ್ಲಿ ಐಪಿಎಲ್ ಮಿನಿ ಹರಾಜು
2023ರ ಐಪಿಎಲ್ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ಡಿ.23ರಂದು ಕೊಚ್ಚಿಯಲ್ಲಿ ನಡೆಯಲಿದೆ ಎಂದು ಬುಧವಾರ ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿದೆ. ಹರಾಜು ಪ್ರಕ್ರಿಯೆಯು ಬೆಂಗಳೂರು ಇಲ್ಲವೇ ಟರ್ಕಿಯ ಇಸ್ತಾಂಬುಲ್‌ನಲ್ಲಿ ನಡೆಯಬಹುದು ಎನ್ನಲಾಗಿತ್ತು. ಆದರೆ ಬಿಸಿಸಿಐ ಕೊಚ್ಚಿಯಲ್ಲಿ ನಡೆಸಲು ನಿರ್ಧರಿಸಿದೆ. ತಂಡಗಳು ತಾವು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ನ.15ರೊಳಗೆ ಪ್ರಕಟಿಸಬೇಕಿದೆ. ಕಳೆದ ಹರಾಜಿನ ಬಳಿಕ ಉಳಿದ ಹಣ, ಆಟಗಾರರನ್ನು ಕೈಬಿಟ್ಟಬಳಿಕ ಉಳಿಯುವ ಹಣದ ಜೊತೆಗೆ ಹೆಚ್ಚುವರಿ 5 ಕೋಟಿ ರು. ಬಳಸಲು ಅವಕಾಶ ನೀಡಲಾಗಿದೆ.
2023ರ ಐಪಿಎಲ್ ಟೂರ್ನಿಗೂ ಮುನ್ನ ಈ 5 ಆಟಗಾರರಿಗೆ ಆರ್‌ಸಿಬಿಯಿಂದ ಗೇಟ್‌ಪಾಸ್ ಗ್ಯಾರಂಟಿ..!
ಎಬಿಡಿ ಆರ್‌ಸಿಬಿ ಕೋಚ್?
ದಿಗ್ಗಜ ಕ್ರಿಕೆಟಿಗ ಎಬಿ ಡಿ ವಿಲಿಯರ್ಸ್ ಆರ್‌ಸಿಬಿ ಜೊತೆ ಒಪ್ಪಂದಕ್ಕೆ ಸಹಿ ಹಾಕಲು ಗುರುವಾರ ಬೆಂಗಳೂರಿಗೆ ಆಗಮಿಸಿದರು. ವಿಲಿಯರ್ಸ್ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಡಿಯೋವನ್ನು ಆರ್‌ಸಿಬಿ ತನ್ನ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ‘ಮುಂದಿನ ವರ್ಷದ ಐಪಿಎಲ್ ಬಗ್ಗೆ ಮಾತನಾಡಲು ಬೆಂಗಳೂರಿಗೆ ಆಗಮಿಸಿದ್ದೇನೆ’ ಎಂದು ವಿಲಿಯರ್ಸ್ ಹೇಳಿದ್ದಾರೆ. ಅವರು ತಂಡದ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.