GT vs PBKS: ಗುಜರಾತ್ ಎದುರು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಪಂಜಾಬ್ ಕಿಂಗ್ಸ್

Published : May 03, 2022, 11:38 AM IST
GT vs PBKS: ಗುಜರಾತ್ ಎದುರು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಪಂಜಾಬ್ ಕಿಂಗ್ಸ್

ಸಾರಾಂಶ

* ಬಲಿಷ್ಠ ಗುಜರಾತ್ ಟೈಟಾನ್ಸ್ ತಂಡಕ್ಕಿಂದು ಪಂಜಾಬ್ ಕಿಂಗ್ಸ್ ಸವಾಲು * ಈ ಪಂದ್ಯ ಗೆದ್ದು ಪ್ಲೇ ಆಫ್‌ಗೇರಲು ತುದಿಗಾಲಿನಲ್ಲಿ ನಿಂತಿದೆ ಗುಜರಾತ್ ಟೈಟಾನ್ಸ್ * ಗುಜರಾತ್ ಎದುರು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಮಯಾಂಕ್‌ ಅಗರ್‌ವಾಲ್

ನವಿ ಮುಂಬೈ(ಮೇ.03): ತನ್ನ ಚೊಚ್ಚಲ ಐಪಿಎಲ್‌ (IPL 2022) ಆವೃತ್ತಿಯಲ್ಲೇ ಅಬ್ಬರದ ಪ್ರದರ್ಶನ ನೀಡುತ್ತಿರುವ ಗುಜರಾತ್‌ ಟೈಟಾನ್ಸ್‌ (Gujarat Titans) ಪ್ಲೇ-ಆಫ್‌ ಹೊಸ್ತಿಲು ತಲುಪಿದ್ದು, ಮಂಗಳವಾರ ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧವೂ ಗೆಲ್ಲುವ ಮೂಲಕ ಪ್ಲೇ-ಆಫ್‌ ಸ್ಥಾನ ಖಚಿತಪಡಿಸಿಕೊಳ್ಳಲು ಎದುರು ನೋಡುತ್ತಿದೆ. 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯ 48ನೇ ಪಂದ್ಯಕ್ಕೆ ಇಲ್ಲಿನ ಡಿವೈ ಪಾಟೀಲ್‌ ಮೈದಾನ ಆತಿಥ್ಯ ವಹಿಸಲಿದೆ. 

ಹಾರ್ದಿಕ್‌ ಪಾಂಡ್ಯ (Hardik Pandya) ನಾಯಕತ್ವದ ಗುಜರಾತ್‌ ಆಡಿರುವ 9 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸಿದ್ದು, ಇನ್ನೊಂದು ಗೆಲುವು ಸಾಧಿಸಿದರೆ ಈ ಆವೃತ್ತಿಯಲ್ಲಿ ಪ್ಲೇ-ಆಫ್‌ಗೆ ಲಗ್ಗೆ ಇಟ್ಟ ಮೊದಲ ತಂಡ ಎನಿಸಿಕೊಳ್ಳಲಿದೆ. ಯಾವುದೇ ಆಟಗಾರನನ್ನು ಹೆಚ್ಚಾಗಿ ಅವಲಂಬಿಸದೇ ಸಂಘಟಿತ ಪ್ರದರ್ಶನ ನೀಡುತ್ತಿರುವುದು ತಂಡದ ಯಶಸ್ಸಿನ ರಹಸ್ಯ. ಗುಜರಾತ್ ಟೈಟಾನ್ಸ್ ತಂಡದ ಪರ ಪ್ರತಿಯೊಬ್ಬರು ಒಂದಿಲ್ಲೊಂದು ಪಂದ್ಯದ ಗೆಲುವಿನಲ್ಲಿ ಮಹತ್ವದ ಪಾತ್ರ ನಿಭಾಯಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಶುಭ್‌ಮನ್‌ ಗಿಲ್ ಹಾಗೂ ವೃದ್ದಿಮಾನ್ ಸಾಹ ಉತ್ತಮ ಆರಂಭ ಒದಗಿಸಿಕೊಡಬೇಕಿದೆ. ಡೇವಿಡ್ ಮಿಲ್ಲರ್ (David Miller) ಕೂಡಾ ಮಧ್ಯಮ ಕ್ರಮಾಂಕದಲ್ಲಿ ಉಪಯುಕ್ತ ರನ್ ಕಾಣಿಕೆ ನೀಡುತ್ತಿದ್ದಾರೆ. ಇನ್ನು ರಾಹುಲ್ ತೆವಾಟಿಯಾ ಮ್ಯಾಚ್ ಫಿನಿಶಿಂಗ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ ಲಾಕಿ ಫರ್ಗ್ಯೂಸನ್, ಮೊಹಮ್ಮದ್ ಶಮಿ ಜತೆಗೆ ಪ್ರದೀಪ್ ಸಂಗ್ವಾನ್ ಕೂಡಾ ಮಿಂಚಿನ ಪ್ರದರ್ಶನ ತೋರುತ್ತಿರುವುದು ಗುಜರಾತ್ ಟೈಟಾನ್ಸ್ ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.

ಮತ್ತೊಂದೆಡೆ 9 ಪಂದ್ಯಗಳಲ್ಲಿ ಕೇವಲ 4ರಲ್ಲಿ ಗೆದ್ದಿರುವ ಮಯಾಂಕ್‌ ಅಗರ್‌ವಾಲ್‌ (Mayank Agarwal) ನಾಯಕತ್ವದ ಪಂಜಾಬ್ ಕಿಂಗ್ಸ್‌ ತಂಡಕ್ಕೆ ಪ್ಲೇ-ಆಫ್‌ ರೇಸ್‌ನಲ್ಲಿ ಉಳಿಯಲು ಇದು ಕೊನೆ ಅವಕಾಶ. ಈ ಪಂದ್ಯದಲ್ಲೂ ಸೋತರೆ ಪ್ಲೇ-ಆಫ್‌ ಬಾಗಿಲು ಬಹುತೇಕ ಬಂದ್‌ ಆಗಲಿದೆ. ಟೂರ್ನಿಯ ಮೊದಲ ಮುಖಾಮುಖಿಯಲ್ಲಿ ಗುಜರಾತ್‌ ಟೈಟಾನ್ಸ್‌ಗೆ ಶರಣಾಗಿದ್ದ ಪಂಜಾಬ್ ಕಿಂಗ್ಸ್‌ ತಂಡ ಸೇಡು ತೀರಿಸಿಕೊಳ್ಳಲು ಕಾತರಿಸುತ್ತಿದೆ. ಶಿಖರ್ ಧವನ್ (Shikhar Dhawan) ಹಾಗೂ ಮಯಾಂಕ್ ಅಗರ್‌ವಾಲ್‌ ಜವಾಬ್ದಾರಿಯುತ ಪ್ರದರ್ಶನ ನಿಭಾಯಿಸಬೇಕಿದೆ. ಇನ್ನು ವಿದೇಶಿ ಬ್ಯಾಟರ್‌ಗಳಾದ ಭನುಕಾ ರಾಜಪಕ್ಸಾ ಹಾಗೂ ಜಾನಿ ಬೇರ್‌ಸ್ಟೋವ್ ಹಾಗೂ ಲಿಯಾಮ್ ಲಿವಿಂಗ್‌ಸ್ಟೋನ್ ಸಮಯೋಚಿತ ಬ್ಯಾಟಿಂಗ್‌ ನಡೆಸಿದರೆ ಮಾತ್ರ ದೊಡ್ಡ ಮೊತ್ತವನ್ನು ಕಲೆಹಾಕಬಹುದು ಅಥವಾ ಬೆನ್ನಟ್ಟಬಹುದು. ಇನ್ನು ಬೌಲಿಂಗ್ ವಿಭಾಗದಲ್ಲಿ ಕಗಿಸೋ ರಬಾಡಗೆ (Kagiso Rabada) ಆರ್ಶದೀಪ್ ಸಿಂಗ್, ಸಂದೀಪ್ ಶರ್ಮಾ (Sandeep Sharma) ಹಾಗೂ ರಾಹುಲ್‌ ಚಹರ್ ಉತ್ತಮ ಸಾಥ್ ನೀಡಬೇಕಿದೆ. ಒಟ್ಟಿನಲ್ಲಿ ಪಂಜಾಬ್ ಕಿಂಗ್ಸ್‌ ತಂಡವು ಪ್ಲೇ ಆಫ್‌ ಪ್ರವೇಶಿಸಿಸಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ ಎನಿಸಿದೆ.

IPL 2022 ಕೊನೆಗೂ ವಿನ್ನಿಂಗ್ ಟ್ರ್ಯಾಕ್‌ಗೆ ಮರಳಿದ ಕೆಕೆಆರ್, ರಾಜಸ್ಥಾನ ವಿರುದ್ಧ 7 ವಿಕೆಟ್ ಗೆಲುವು

ಸಂಭವನೀಯ ಆಟಗಾರರ ಪಟ್ಟಿ

ಟೈಟಾನ್ಸ್‌: ವೃದ್ದಿಮಾನ್ ಸಾಹ, ಶುಭ್‌ಮನ್‌ ಗಿಲ್‌, ಸಾಯಿ ಸುದರ್ಶನ್‌, ಹಾರ್ದಿಕ್‌ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್‌, ರಾಹುಲ್ ತೆವಾಟಿಯಾ, ರಶೀದ್ ಖಾನ್‌, ಪ್ರದೀಪ್ ಸಾಂಗ್ವನ್‌, ಅಲ್ಜಾರಿ ಜೋಸೆಫ್, ಲಾಕಿ ಫಗ್ರ್ಯೂಸನ್‌, ಮೊಹಮ್ಮದ್ ಶಮಿ.

ಪಂಜಾಬ್‌: ಮಯಾಂಕ್ ಅಗರ್‌ವಾಲ್‌(ನಾಯಕ), ಶಿಖರ್ ಧವನ್‌, ಭನುಕಾ ರಾಜಪಕ್ಸೆ, ಲಿಯಾಮ್‌ ಲಿವಿಂಗ್‌ಸ್ಟೋನ್‌, ಜಾನಿ ಬೇರ್‌ಸ್ಟೋವ್‌, ಜಿತೇಶ್ ಶರ್ಮಾ‌, ರಿಶಿ ಧವನ್, ಕಗಿಸೋ ರಬಾಡ, ರಾಹುಲ್ ಚಹರ್‌, ಅಶ್‌ರ್‍ದೀಪ್ ಸಿಂಗ್‌, ಸಂದೀಪ್ ಶರ್ಮಾ‌.

ಸ್ಥಳ: ನವಿ ಮುಂಬೈ, ಡಿ.ವೈ.ಪಾಟೀಲ್‌ ಕ್ರೀಡಾಂಗಣ
ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ