IPL 2022 ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್, 1ಬದಲಾವಣೆ!

By Suvarna NewsFirst Published May 24, 2022, 7:01 PM IST
Highlights
  • ಕೋಲ್ಕತಾದಲ್ಲಿ ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯ
  • ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಪಂದ್ಯ
  • ಟಾಸ್ ಗೆದ್ದ ಗುಜರಾತ್ ಫೀಲ್ಡಿಂಗ್ ಆಯ್ಕೆ

ಕೋಲ್ಕತಾ(ಮೇ.24): ಐಪಿಎಲ್ 2022 ಟೂರ್ನಿಯ ಫೈನಲ್ ಪ್ರವೇಶಿಸುವ ಮೊದಲ ತಂಡಯಾವುದು? ಈ ಕುತೂಹಲಕ್ಕೆ ಇಂದು ಉತ್ತರ ಸಿಗಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಗುಜರಾತ್ ಟೈಟಾನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಲ್ಯೂಕಿ ಫರ್ಗ್ಯೂಸನ್ ಬದಲು ಅಲ್ಜಾರಿ ಜೋಸೆಫ್ ತಂಡ ಸೇರಿಕೊಂಡಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಲೀ್ ಹಂತದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಯಶಸ್ಸು ಗಳಿಸಿದ ತಂಡಗಳ ಪೈಕಿ ರಾಜಸ್ಥಾನ ರಾಯಲ್ಸ್ ಮುಂಚೂಣಿಯಲ್ಲಿದೆ. ಹೀಗಾಗಿ ಇಂದು ರೋಚಕ ಹೋರಾಟ ಎರ್ಪಡಲಿದೆ.

Latest Videos

ಬೆಂಗಳೂರು ನನ್ನ ಎರಡನೇ ತವರು: ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಎಬಿ ಡಿವಿಲಿಯರ್ಸ್‌..!

ರಾಜಸ್ಥಾನ ರಾಯಲ್ಸ್ ಪ್ಲೇಯಿಂಗ್ 11
ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ಶಿಮ್ರೊನ್ ಹೆಟ್ಮೆಯರ್, ರಿಯಾನ್ ಪರಾಗ್, ಟ್ರೆಂಟ್ ಬೋಲ್ಟ್,  ಪ್ರಸಿದ್ಧ್ ಕೃಷ್ಣ, ಯಜುವೇಂದ್ರ ಚಹಾಲ್, ಒಬೆಡ್ ಮೆಕೊಯ್

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
ವೃದ್ಧಿಮಾನ್ ಸಾಹಾ, ಶುಭಮನ್ ಗಿಲ್, ಮ್ಯಾಥ್ಯೂವೇಡ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ಟಿವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ

ಮೊದಲ ಆವೃತ್ತಿಯಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿರುವ ಗುಜರಾತ್ ಟೈಟಾನ್ಸ್ ಅಂಕಪಟ್ಟಿಯಲ್ಲಿ ಮೊದಲ ತಂಡವಾಗಿ ಗುರುತಿಸಿಕೊಂಡಿದೆ. ಇತ್ತ ರಾಜಸ್ಥಾನ ರಾಯಲ್ಸ್ 2008ರ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ಇದೇ ರೀತಿ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಅಲಂಕರಿಸಿಕೊಂಡಿತ್ತು. ಇದೀಗ ಇತಿಹಾಸ ರಚಿಸಲು ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಸಜ್ಜಾಗಿದೆ.

IPL 2022 Playoffs: ಗುಜರಾತ್ vs ರಾಜಸ್ಥಾನ ಪ್ಲೇ ಅಫ್‌ ಪಂದ್ಯದ ಮೇಲೆ ವರುಣನ ವಕ್ರದೃಷ್ಠಿ..!

ಇಂದು ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಸೋತ ತಂಡಕ್ಕೆ ಫೈನಲ್ ಪ್ರವೇಶಿಸಲು ಮತ್ತೊಂದು ಅವಕಾಶವಿದೆ. ಸೋತ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯ ಆಡಲಿದೆ. ಈ ಮೂಲಕ ಫೈನಲ್ ಪ್ರವೇಶಿಸುವ ಅವಕಾಶವಿದೆ.

ಎರಡು ತಿಂಗಳಿನಿಂದ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ರಸದೌತಣ ನೀಡಿದ ಐಪಿಎಲ್ ಟೂರ್ನಿ ಇದೀಗ ಅಂತಿಮ ಘಟ್ಟ ತಲುಪಿದೆ. 70 ಲೀಗ್ ಪಂದ್ಯ, 10 ತಂಡಗಳ ಹೋರಾಟದಲ್ಲಿ ಹಲವು ದಾಖಲೆ ನಿರ್ಮಾಣವಾಗಿದೆ. ದಿಗ್ಗಜ ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಲೀಗ್ ಸುತ್ತಿನಿಂದಲೇ ಹೊರಬಿದ್ದಿದೆ. ಇದೀಗ ನಾಲ್ಕು ತಂಡಗಳು ಪ್ಲೇ ಆಫ್‌ಗೆ ಅರ್ಹತೆ ಪಡೆದು ಹೋರಾಟಕ್ಕೆ ಸಜ್ಜಾಗಿದೆ.

ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾದರೆ, ನಾಳೆ(ಮೇ 25) ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ‌ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೋರಾಟ ನಡೆಸಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಗೆದ್ದ ತಂಡ 2ನೇ ಕ್ವಾಲಿಫೈಯರ್ ಪಂದ್ಯ ಆಡಬೇಕಿದೆ.
 

click me!