* ರಾಯಲ್ ಚಾಲೆಂಜರ್ಸ್ ತಂಡದಿಂದ ಹೊರಬಿದ್ದ ಲುವ್ನಿತ್ ಸಿಸೋಡಿಯಾ
* ಕನ್ನಡಿಗ ಸಿಸೋಡಿಯಾ ಬದಲಿಗೆ ರಜತ್ ಪತಿದಾರ್‌ಗೆ ಸ್ಥಾನ
* ಆರ್‌ಸಿಬಿಗೆ ಮುಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರಾಳಿ
ಬೆಂಗಳೂರು(ಏ.04): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಗೆ ಈಗಾಗಲೇ ಭರ್ಜರಿ ಚಾಲನೆ ಸಿಕ್ಕಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ಸಿಗುತ್ತಿದೆ. ಇದೆಲ್ಲದರ ನಡುವೆ ಚೊಚ್ಚಲ ಐಪಿಎಲ್ (IPL) ಟ್ರೋಫಿಯ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡಕ್ಕೆ ದೊಡ್ಡ ಶಾಕ್ ಎದುರಾಗಿದ್ದು, ಕರ್ನಾಟಕ ಮೂಲದ ಕ್ರಿಕೆಟಿಗ ಲುವ್ನಿತ್ ಸಿಸೋಡಿಯಾ (Luvnith Sisodia) ಗಾಯಗೊಂಡು 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ಸಿಸೋಡಿಯಾ ಬದಲಿಗೆ ರಜತ್ ಪತಿದಾರ್ (Rajat Patidar) ಅವರನ್ನು ಆರ್‌ಸಿಬಿ (RCB) ತನ್ನ ತೆಕ್ಕೆಗೆ ಸೇರ್ಪಡೆ ಮಾಡಿಕೊಂಡಿದೆ.
ಡೊಮೆಸ್ಟಿಕ್ ಕ್ರಿಕೆಟ್‌ನಲ್ಲಿ ರಜತ್ ಪತಿದಾರ್, ಮಧ್ಯಪ್ರದೇಶ ತಂಡವನ್ನು ಪ್ರತಿನಿಧಿಸುತ್ತಿದ್ದು, ಇದುವರೆಗೂ ಮಧ್ಯಪ್ರದೇಶ ಪರ 31 ಟಿ20 ಪಂದ್ಯಗಳನ್ನಾಡಿ 861 ರನ್ ಬಾರಿಸಿದ್ದಾರೆ. ಇದರಲ್ಲಿ 7 ಅರ್ಧಶತಕಗಳು ಸಹಾ ಸೇರಿವೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಜತ್ ಪತಿದಾರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ನಾಲ್ಕು ಪಂದ್ಯಗಳನ್ನಾಡಿದ್ದರು. ಇದಾದ ಬಳಿಕ ಆರ್‌ಸಿಬಿ ಫ್ರಾಂಚೈಸಿಯು ಮತ್ತೊಮ್ಮೆ ಐಪಿಎಲ್ ಆಟಗಾರರ ಹರಾಜಿನಲ್ಲಿ (IPL Mega Auction) ರಜತ್ ಅವರನ್ನು ಖರೀದಿಸುವ ಮನಸ್ಸು ಮಾಡಿರಲಿಲ್ಲ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಜತ್ ಪತಿದಾರ್ 20 ಲಕ್ಷ ರುಪಾಯಿಗೆ ಆರ್‌ಸಿಬಿ ತಂಡ ಕೂಡಿಕೊಂಡಿದ್ದರು. ಇದೀಗ ಮತ್ತೊಮ್ಮೆ 20 ಲಕ್ಷ ರುಪಾಯಿಗೆ ಆರ್‌ಸಿಬಿ ತೆಕ್ಕೆಗೆ ಜಾರಿದ್ದಾರೆ.
ಫಾಫ್ ಡು ಪ್ಲೆಸಿಸ್ (Faf du Plessis) ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ ಎರಡು ಪಂದ್ಯಗಳನ್ನು ಆಡಿದ್ದು, ಈ ಪೈಕಿ ಒಂದು ಸೋಲು ಹಾಗೂ ಒಂದು ಗೆಲುವು ಕಂಡಿದೆ. ಇದೀಗ ಏಪ್ರಿಲ್ 05ರಂದು ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಆರ್‌ಸಿಬಿ ಪಾಲಿನ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (Rajasthan Royals) ತಂಡವನ್ನು ಎದುರಿಸಲಿದೆ. ಆರ್‌ಸಿಬಿ ತಾನಾಡಿದ ಮೊದಲ ಪಂದ್ಯದಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ ಸ್ಪೋಟಕ 88 ರನ್ ಚಚ್ಚಿದ್ದರು, ಹೀಗಿದ್ದೂ ಕನ್ನಡಿಗ ಮಯಾಂಕ್ ಅಗರ್‌ವಾಲ್ (Mayank Agarwal) ನೇತೃತ್ವದ ಪಂಜಾಬ್ ತಂಡವು ಭರ್ಜರಿ ಗೆಲುವು ದಾಖಲಿಸಿತ್ತು. ಇನ್ನು ಆರ್‌ಸಿಬಿ ತನ್ನ ಪಾಲಿನ ಎರಡನೇ ಪಂದ್ಯದಲ್ಲಿ ಬಲಿಷ್ಠ ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಲು ಯಶಸ್ವಿಯಾಗಿತ್ತು. ಆರ್‌ಸಿಬಿ ತಂಡಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಜೋಶ್ ಹೇಜಲ್‌ವುಡ್ ಕೂಡಾ ಸೇರ್ಪಡೆಗೊಂಡರೆ ತಂಡ ಮತ್ತಷ್ಟು ಬಲಿಷ್ಠವಾಗಲಿದೆ. ಇನ್ನೊಂದೆಡೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಆಡಿದ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದೆ.
🚨 ANNOUNCEMENT 🚨
We’re glad to welcome Rajat Patidar back into the RCB camp for the remainder of . He replaces the injured Luvnith Sisodia, who will continue to be in the RCB bio bubble to complete his rehab. pic.twitter.com/2K17iCZIen
IPL 2022 'ನನ್ನ ಅಪ್ಪ-ಅಪ್ಪನಿಗಾಗಿ ಮನೆ ಖರೀದಿಸೋದು ನನ್ನ ಏಕೈಕ ಗುರಿ' ಎಂದ ಸೆನ್ಸೇಷನ್ ತಿಲಕ್ ವರ್ಮ!
15ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ ನೋಡಿ
ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್(ನಾಯಕ), ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಬಟ್ಲರ್, ಶಾಬಾಜ್ ಅಹಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರಾರ್, ಫಿನ್ ಅಲೆನ್, ಶೆರ್ಫಾನೆ ರುದರ್‌ಫೋರ್ಡ್, ಜೇಸನ್ ಬೆಹ್ರೊನ್‌ಡ್ರಾಫ್, ಸುಯಾಶ್ ಪ್ರಭುದೇಸಾಯಿ, ಚಾಮ ಮಿಲಿಂದ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಸಿದ್ದಾರ್ಥ್ ಕೌಲ್, ರಜತ್ ಪತಿದಾರ್.