IPL 2022 ಚೆನ್ನೈ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ಬದಲಾವಣೆ!

Published : Apr 12, 2022, 07:03 PM ISTUpdated : Apr 12, 2022, 07:12 PM IST
IPL 2022 ಚೆನ್ನೈ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ಬದಲಾವಣೆ!

ಸಾರಾಂಶ

ಚೆನ್ನೈ ಹಾಗೂ ಆರ್‌ಸಿಬಿ ನಡುವಿನ 22ನೇ ಲೀಗ್ ಪಂದ್ಯ ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ

ಮುಂಬೈ(ಏ.12): ಐಪಿಎಲ್ ಟೂರ್ನಿಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದೆ. ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.ಆರ್‌ಸಿಬಿ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಜೋಶ್ ಹೇಜಲ್‌ವುಡ್ ತಂಡ ಸೇರಿಕೊಂಡಿದ್ದಾರೆ. ಜೊತೆಗೆ ಯುವ ಆಟಗಾರ ಸುಯಶ್ ಪ್ರಭುದೇಸಾಯಿ ತಂಡ ಸೇರಿಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11
ಫಾಫ್ ಡುಪ್ಲೆಸಿಸ್(ನಾಯಕ), ಅನೂಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ಶಹಬಾಜ್ ಅಹಮ್ಮದ್, ವಾನಿಂದು ಹಸರಂಗ, ಜೋಶ್ ಹೇಜಲ್‌ವುಡ್, ಮೊಹಮ್ಮದ್ ಸಿರಾಜ್, ಸುಯಶ್ ಪ್ರಭುದೇಸಾಯಿ, ಅಕ್ಷ ದೀಪ್ 

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11
ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಆಲಿ, ಅಂಬಾಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ(ನಾಯಕ), ಎಂ.ಎಸ್.ಧೋನಿ, ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡನ್, ಮಹೇಶ್ ತೀಕ್ಷಾನ, ಮುಕೇಶ್ ಚೌಧರಿ

Virat Kohli ಮಾತ್ರವಲ್ಲ, RCB ಈ ಆಟಗಾರರ ಪತ್ನಿಯರು ಕೂಡ ಸುಂದರಿಯರು!

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಹಾಗೂ ಆರ್‌ಸಿಬಿ ಮುಖಾಮುಖಿ ಪ್ರತಿ ಭಾರಿ ಅತ್ಯಂತ ರೋಚಕ ಪಂದ್ಯವಾಗಿ ಮಾರ್ಪಟ್ಟಿದೆ. ಆದರೆ ಚೆನ್ನೈ ಹೆಚ್ಚಿನ ಪ್ರಾಬಲ್ಯ ಸಾಧಿಸಿದೆ.ಇವರಿಬ್ಬರ ಮುಖಾಮುಖಿಯಲ್ಲಿ ಚೆನ್ನೈ 18 ಗೆಲುವು ಕಂಡಿದ್ದರೆ, ಆರ್‌ಸಿಬಿ 9 ಗೆಲುವು ದಾಖಲಿಸಿದೆ. 

ಚೆನ್ನೈ ವಿರುದ್ದ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ನಿರ್ಮಿಸಲು 52 ರನ್ ಅವಶ್ಯಕತೆ ಇದೆ. ಈ ಪಂದ್ಯದಲ್ಲಿ ಕೊಹ್ಲಿ 52 ರನ್ ಗಡಿ ದಾಟಿದರೆ ಚೆನ್ನೈ ವಿರುದ್ದ 1,000 ರನ್ ಸಿಡಿಸಿದ ಸಾಧನೆ ಮಾಡಲಿದ್ದಾರೆ. 

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೊಸ ನಾಯಕನ ಅಡಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಹೊಸ ನಾಯಕನ ಅಡಿಯಲ್ಲಿ ನಾಲ್ಕು ಪಂದ್ಯಗಳನ್ನು ಸೋತು ನಿರಾಸೆ ಅನುಭವಸಿದೆ. ಆರ್‌ಸಿಬಿ ಆಡಿದ 4 ಪಂದ್ಯದಲ್ಲಿ 3 ಗೆಲುವು ದಾಖಲಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ 4 ಸೋಲಿನ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

IPL 2022 ಟೀಮ್ ಯಾವುದಾದರೇನು, ಸ್ನೇಹಕ್ಕೆ ಸಾವಿಲ್ಲ!

ಐಪಿಎಲ್ ಅಂಕಪಟ್ಟಿ
ಐಪಿಎಲ್ ಅಂಕಪಟ್ಟಿಯಲ್ಲಿ ಟಾಪ್ 4 ಸ್ಥಾನ ಪಡೆಯಲು ತೀವ್ರ ಪೈಪೋಟಿ ಶುರುವಾಗಿದೆ. ಸದ್ಯ ರಾಜಸ್ಥಾನ ರಾಯಲ್ಸ್  ಆಡಿದ 4 ಪಂದ್ಯದಲ್ಲಿ 3 ರಲ್ಲಿ ಗೆಲುವು ದಾಖಲಿ 6 ಅಂಕ ಪಡೆದುಕೊಂಡಿದೆ. ಇದರೊಂದಿಗೆ ಮೊದಲ ಸ್ಥಾನ ಅಲಂಕರಿಸಿದೆ. ಇನ್ನು ಕೋಲ್ಕತಾ ನೈಟ್ ರೈಡರ್ಸ್ 5 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿ ಎರಡನೇ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು 3ನೇ ಸ್ಥಾನದಲ್ಲಿದೆ. ಇನ್ನು ಲಖನೌ ಸೂಪರ್ ಜೈಂಟ್ಸ್ ಐಡಿದ 5 ಪಂದ್ಯದಲ್ಲಿ 3 ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲನ ನಾಲ್ಕನೇ ಸ್ಥಾನದಲ್ಲಿದೆ. ಇನ್ನು 5ನೇ ಸ್ಥಾನವನ್ನು ಗುಜರಾತ್ ಟೈಟಾನ್ಸ್ ಸ್ಥಾನ ಪಡೆದಿದೆ. ಗುಜರಾತ್ 4ರಲ್ಲಿ 3 ಗೆಲುವು ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್  4ರಲ್ಲಿ 2 ಗೆಲುವಿನ ಮೂಲಕ 6ನೇ ಸ್ಥಾನ ಪಡೆದುಕೊಂಡಿದೆ. ಪಂಜಾಬ್ ಕಿಂಗ್ಸ್ 4ರಲ್ಲಿ 2 ಗೆಲುವು ಕಾಣುವ ಮೂಲಕ 7ನೇ ಸ್ಥಾನ ಪಡೆದಿದೆ. ಸನ್‌ ರೈಸರ್ಸ್ ಹೈದರಾಬಾದ್ 4 ರಲ್ಲಿ 2 ಗೆಲುವು ಸಾಧಿಸಿ 8ನೇ ಸ್ಥಾನ ಪಡೆದುಕೊಂಡಿದೆ. ಇನ್ನು ಮುಂಬೈ ಇಂಡಿಯನ್ಸ್ ಆಡಿದ 4 ಪಂದ್ಯಗಳನ್ನು ಸೋತು 9ನೇ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ಕೂಡ 4 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?