IPL 2022 ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ!

By Santosh NaikFirst Published Apr 30, 2022, 7:08 PM IST
Highlights

ಐಪಿಎಲ್ ನಲ್ಲಿ ಕೆಲ ತಂಡಗಳು ತನ್ನ ಅಭಿಯಾನವನ್ನು ಆರಂಭಿಸಿ ಸೋಲಿನ ಸುಳಿಗೆ ಸಿಲುಕಿ ಪ್ಲೇ ಆಫ್ ರೇಸ್ ನಿಂದ ಹೊರಬೀಳುವ ಹಾದಿಯಲ್ಲಿದ್ದರೆ, ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಈವರೆಗೂ ಗೆಲುವಿನ ಖಾತೆ ತೆರೆಯುವಲ್ಲಿ ಯಶ ಕಂಡಿಲ್ಲ. ಈಗಾಗಲೇ ಪ್ಲೇ ಆಫ್ ರೇಸ್ ನಿಂದ ನಿರ್ಗಮನ ಕಂಡಿರುವ ಮುಂಬೈ ಇಂಡಿಯನ್ಸ್ ತಂಡ ಗೆಲುವಿನ ಖಾತೆ ತೆರೆಯುವ ಏಕೈಕ ಉದ್ದೇಶದೊಂದಿಗೆ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಮುಂಬೈ (ಏ.30): ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ 15ನೇ ಆವೃತ್ತಿಯ ಐಪಿಎಲ್ ನ ಪ್ಲೇ ಆಫ್ ರೇಸ್ ನಿಂದ ನಿರ್ಗಮಿಸಿದೆ. ಆದರೆ, ಗೆಲುವಿನ ಖಾತೆ ತೆರೆಯುವ ಏಕೈಕ ಉದ್ದೇಶದೊಂದಿಗೆ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಶನಿವಾರ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ. ಪಂದ್ಯದ ಸಲುವಾಗಿ ಮುಂಬೈ ಇಂಡಿಯನ್ಸ್ ತಂಡ 2 ಬದಲಾವಣೆ ಮಾಡಿದ್ದು, ಡೆವಾಲ್ಡ್ ಬ್ರೇವಿಸ್ ಹಾಗೂ ಜೈದೇವ್ ಉನಾದ್ಕತ್ ಬದಲು ಟಿಮ್ ಡೇವಿಡ್ ಹಾಗೂ ಕುಮಾರ್ ಕಾರ್ತಿಕೇಯ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ. ಇನ್ನೊಂದೆಡೆ ರಾಜಸ್ಥಾನ ರಾಯಲ್ಸ್ ತಂಡದ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯಲಿದೆ.

ರಾಜಸ್ಥಾನ್ ರಾಯಲ್ಸ್  ಪ್ಲೇಯಿಂಗ್ ಇಲವೆನ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್(ನಾಯಕ/ವಿ.ಕೀ), ಡೆರಿಲ್ ಮಿಚೆಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್: ಇಶಾನ್ ಕಿಶನ್ (ವಿ.ಕೀ), ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಹೃತಿಕ್ ಶೋಕೀನ್, ಡೇನಿಯಲ್ ಸಾಮ್ಸ್, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ರಿಲೆ ಮೆರೆಡಿತ್
 

ಮುಂಬೈ ಇಂಡಿಯನ್ಸ್ ತಂಡದ ಅಗ್ರಕ್ರಮಾಂಕದ ಬ್ಯಾಟಿಂಗ್ ವೈಫಲ್ಯ ತಂಡದ ಆಡಳಿತ ಮಂಡಳಿಯ ತಲೆನೋವು ಹೆಚ್ಚುವಂತೆ ಮಾಡಿದೆ. ದುಬಾರಿ ಮೊತ್ತದೊಂದಿಗೆ ಮುಂಬೈ ಪಾಲಾಗಿದ್ದ ಇಶಾನ್ ಕಿಶನ್ ಬ್ಯಾಟಿಂದ ದೊಡ್ಡ ಇನಿಂಗ್ಸ್ ಮೂಡಿ ಬರುತ್ತಿಲ್ಲ. ಪೊಲ್ಲಾರ್ಡ್‌ ಕೂಡಾ ಸ್ಪೋಟಕ ಬ್ಯಾಟಿಂಗ್ ಮಾಡಲು ವಿಫಲವಾಗುತ್ತಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಹಿಂದೆಂದು ಕಂಡು-ಕೇಳರಿಯದ ವೈಫಲ್ಯ ಅನುಭವಿಸಿದ್ದಾರೆ. ಈ ಹಿಂದಿನ ಹಳೆಯ ವೈಪಲ್ಯಗಳನ್ನು ಮರೆತು ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಲು ರೋಹಿತ್ ಶರ್ಮಾ ಪಡೆ ಎದುರು ನೋಡುತ್ತಿದೆ.

Latest Videos

ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್‌ ತಂಡಗಳು ಇದುವರೆಗೂ 25 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಉಭಯ ತಂಡಗಳು ಸಮಾನ ಪೈಪೋಟಿ ತೋರಿದ್ದು, ಮುಂಬೈ ಕೊಂಚ ಮೇಲುಗೈ ಸಾಧಿಸಿದೆ. 25 ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ ತಂಡವು 13 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ರಾಜಸ್ತಾನ ರಾಯಲ್ಸ್‌ ತಂಡವು 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

IPL 2022: ಮೊದಲ ಗೆಲುವು ಕಾಣುತ್ತಾ ಮುಂಬೈ ಇಂಡಿಯನ್ಸ್‌?

ಏನನ್ನು ನಿರೀಕ್ಷೆ ಮಾಡಬಹುದು:  ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಆಡಿರುವ ಕಳೆದ ಐದು ಪಂದ್ಯಗಳನ್ನು ಗಮನಿಸಿದರೆ, ಮೊದಲ ಇನ್ನಿಂಗ್ಸ್ ನ ಸರಾಸರಿ ಸ್ಕೋರ್ ಈ ಮೈದಾನದಲ್ಲಿ 170 ರನ್ ಆಗಿದೆ. ಈ ಐದು ಪಂದ್ಯಗಳ ಪೈಕಿ ಚೇಸಿಂಗ್ ಮಾಡಿದ ತಂಡ 2ರಲ್ಲಿ ಗೆಲುವು ಕಂಡಿದೆ. 

ನಿಮಗಿದು ಗೊತ್ತೇ?
* ಮುಂಬೈ ಇಂಡಿಯನ್ಸ್ ತಂಡ ಹಾಗೇನಾದರೂ ಇನ್ನೊಂದು ಸೋಲು ಕಂಡರೆ, ಐಪಿಎಲ್ ನಲ್ಲಿ ತಂಡವೊಂದು ಸತತ ಗರಿಷ್ಠ ಪಂದ್ಯಗಳಲ್ಲಿ ಸೋಲು ಕಂಡ ಕುಖ್ಯಾತ ದಾಖಲೆಯನ್ನು ಸರಿಗಟ್ಟಲಿದೆ.

Happy Birthday Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗಿಂದು 35ನೇ ಹುಟ್ಟುಹಬ್ಬದ ಸಂಭ್ರಮ

* 2021-22 ರ ಐಪಿಎಲ್ ಋತುವಿನ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಆಡಿರುವ 22 ಪಂದ್ಯಗಳ ಪೈಕಿ ತಂಡ 15 ಪಂದ್ಯಗಳಲ್ಲಿ ಸೋಲು ಕಂಡಿದ್ದರೆ, ಕೇವಲ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

click me!