IPL 2022 ಸಂಜು,ಪಡಿಕ್ಕಲ್ ಅಬ್ಬರ, ಹೈದರಾಬಾದ್‌ಗೆ ಬೃಹತ್ ಟಾರ್ಗೆಟ್!

By Suvarna NewsFirst Published Mar 29, 2022, 9:23 PM IST
Highlights
  • ಐಪಿಎಲ್ 2022 ಟೂರ್ನಿಯ 5ನೇ ಲೀಗ್ ಪಂದ್ಯ
  • ಸಂಜು, ಪಡಿಕ್ಕಲ್ ಸ್ಫೋಚಕ ಬ್ಯಾಟಿಂಗ್ ಪ್ರದರ್ಶನ
  • ಹೈದರಾಬಾದ್ ತಂಡಕ್ಕೆ 211 ರನ್ ಟಾರ್ಗೆಟ್

ಪುಣೆ(ಮಾ.29): ನಾಯಕ ಸಂಜು ಸ್ಯಾಮ್ಸನ್ ಹಾಫ್ ಸೆಂಚುರಿ, ಕನ್ನಡಿಗ ದೇವದತ್ ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್‌  ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್‌ಗೆ ಬೃಹತ್ ಮೊತ್ತದ ಟಾರ್ಗೆಟ್ ನೀಡಿದೆ. ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 210 ರನ್ ಸಿಡಿಸಿದೆ.  

ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಬ್ಯಾಟಿಂಗ್ ಇಳಿದ ರಾಜಸ್ಥಾನ ರಾಯಲ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ ಮೊದಲ ವಿಕೆಟ್‌ಗೆ ಅರ್ಧಶತಕದ ಜೊತೆಯಾಟ ನೀಡಿತು. ಬಟ್ಲರ್ ಹಾಗೂ ಜೈಸ್ವಾಲ್ ಆರಂಭ ರಾಜಸ್ಥಾನ ರಾಯಲ್ಸ್ ತಂಡದ ಆತ್ಮವಿಶ್ವಾಸ ಹೆಚ್ಚಿಸಿತು.

Latest Videos

IPL 2022: ಎಬಿ ಡಿವಿಲಿಯರ್ಸ್‌ ಕಳಿಸಿದ ವಾಯ್ಸ್‌ ಮೆಸೇಜ್‌ ಬಗ್ಗೆ ತುಟಿಬಿಚ್ಚಿದ ವಿರಾಟ್ ಕೊಹ್ಲಿ..!

ಯಶಸ್ವಿ ಜೈಸ್ವಾಲ್ 16 ಎಸೆತದಲ್ಲಿ 20 ರನ್ ಸಿಡಿಸಿ ಔಟಾದರು. 58 ರನ್‌ಗಳಿಗೆ ರಾಜಸ್ಥಾನ ರಾಯಲ್ಸ್ ಮೊದಲ ವಿಕೆಟ್ ಕಳೆದುಕೊಂಡಿತು . ಇತ್ತ 28 ಎಸೆತದಲ್ಲಿ 35 ರನ್ ಸಿಡಿಸಿದ ಜೋಸ್ ಬಟ್ಲರ್ ವಿಕೆಟ್ ಕೂಡ ಪತನಗೊಂಡಿತು. ಆರಂಭಿಕರ ನಿರ್ಗಮನದ ಬಳಿಕ, ನಾಯಕ ಸಂಜು ಸ್ಯಾಮ್ಸನ್ ಹಾಗೂ ಕನ್ನಡಿಗ ದೇವದತ್ ಪಡಿಕ್ಕಲ್ ಜೊತೆಯಾಟ ಆರಂಭಗೊಂಡಿತು.

ಸಂಜು ಹಾಗೂ ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್‌ನಿಂದ ರಾಜಸ್ಥಾನ ರಾಯಲ್ಸ್ ತಂಡ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿತು. ಸಂಜು ಸ್ಯಾಮ್ಸನ್ 27 ಎಸೆತದಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್  ನೆರವಿನಿಂದ 55 ರನ್ ಸಿಡಿಸಿ ಔಟಾದರು. ಇತ್ತ ಪಡಿಕ್ಕಲ್ 29 ಎಸೆತದಲ್ಲಿ 41 ರನ್ ಸಿಡಿಸಿದರು.

IPL 2022: ತಮ್ಮನ್ನು ರೀಟೈನ್ ಮಾಡಿಕೊಳ್ತೇವೆ ಎಂದು ಒಂದು ಮಾತು ಆರ್‌ಸಿಬಿ ಹೇಳಲಿಲ್ಲ..!

ಶಿಮ್ರೊನ್ ಹೆಟ್ಮೆಯರ್ ಹಾಗೂ ರಿಯಾನ್ ಪರಾಗ್ ಹೋರಾಟದಿಂದ ರಾಜಸ್ಥಾನ ರಾಯಲ್ಸ್ 200 ರನ್ ಗಡಿ ದಾಟಿತು. ಹೆಟ್ಮೆಯರ್ 32  ರನ್ ಸಿಡಿಸಿ ಔಟಾದರು. ಪರಾಗ್ ಅಜೇಯ 12 ರನ್ ಸಿಡಿಸಿದರು. ಈ ಮೂಲಕ ರಾಜಸ್ಥಾನ ರಾಯಲ್ಸ್ 5 ವಿಕೆಟ್ ನಷ್ಟಕ್ಕೆ 210 ರನ್ ಸಿಡಿಸಿತು.

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11
ಅಭಿಷೇಶ್ ಶರ್ಮಾ, ರಾಹುಲ್ ತ್ರಿಪಾಠಿ, ಕೇನ್ ವಿಲಿಯಮ್ಸನ್(ನಾಯಕ), ನಿಕೋಲಸ್ ಪೂರನ್, ಆ್ಯಡಿನ್ ಮಕ್ರಮ್, ಅಬ್ದುಲ್ ಸಮಾದ್, ವಾಶಿಂಗ್ಟನ್ ಸುಂದರ್, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮರ್ ಮಲಿಕ್

ರಾಜಸ್ಥಾನ ರಾಯಲ್ಸ್ ಪ್ಲೇಯಿಂಗ್ 11
ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್(ನಾಯಕ), ಶಿಮ್ರೊನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನಥನ್ ಕೌಲ್ಟರ್ ನೈಲ್, ಯುಜುವೇಂದ್ರ ಚಹಾಲ್, ಟ್ರೆಂಟ್ ಬೋಲ್ಟ್, ಪ್ರಸಿದ್ಧ ಕೃಷ್ಣ

ಟೈಟಾನ್ಸ್‌ಗೆ ಗೆಲುವಿನ ಆರಂಭ 
ನಿನ್ನೆ ನಡೆದ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ಐಪಿಎಲ್‌ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿದೆ. ಸೋಮವಾರ ಇಲ್ಲಿನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ಲಖನೌ ಸೂಪರ್‌ಜೈಂಟ್ಸ್‌ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್‌ಗಳ ಗೆಲುವು ದಾಖಲಿಸಿತು.ಕೆ.ಎಲ್‌.ರಾಹುಲ್‌ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸುವುದರ ಜೊತೆಗೆ ನಾಯಕತ್ವದಲ್ಲೂ ತೀರಾ ಸಾಧಾರಣ ಎನಿಸಿದರು. ಮೊದಲು ಬ್ಯಾಟ್‌ ಮಾಡಿದ ಲಖನೌ 29 ರನ್‌ಗೆ 4 ವಿಕೆಟ್‌ ಕಳೆದುಕೊಂಡರೂ ದೀಪಕ್‌ ಹೂಡಾ(55) ಹಾಗೂ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಆಯುಷ್‌ ಬದೋನಿ(54) ಅವರ ಹೋರಾಟದ ನೆರವಿನಿಂದ 20 ಓವರಲ್ಲಿ 6 ವಿಕೆಟ್‌ಗೆ 158 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಗಳಿಸಿತು.

click me!