IPL 2022 ಲಖನೌ ವಿರುದ್ಧ ಟಾಸ್ ಗೆದ್ದ ಸನ್‌ರೈಸರ್ಸ್!

Published : Apr 04, 2022, 07:01 PM ISTUpdated : Apr 04, 2022, 07:10 PM IST
IPL 2022 ಲಖನೌ ವಿರುದ್ಧ ಟಾಸ್ ಗೆದ್ದ ಸನ್‌ರೈಸರ್ಸ್!

ಸಾರಾಂಶ

ಸನ್‌ರೈಸರ್ಸ್ ಹಾಗೂ ಲಖನೌ ಸೂಪರ್‌ಜೈಂಟ್ಸ್ ಪಂದ್ಯ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ಕೆ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ

ಮುಂಬೈ(ಏ.04): ಐಪಿಎಲ್ ಟೂರ್ನಿಯ 12ನೇ ಲೀಗ್ ಪಂದ್ಯದಲ್ಲಿ ಲಖನೌ ಸೂಪರ್‌ಜೈಂಟ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 

ಲಖನೌ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11
ಕೆಎಲ್ ರಾಹುಲ್(ನಾಯಕ), ಕ್ವಿಂಟನ್ ಡಿಕಾಕ್, ಮನೀಶ್ ಪಾಂಡೆ, ಇವಿನ್ ಲಿವಿಸ್, ದೀಪಕ್ ಹೂಡ, ಆಯುಷ್ ಬದೋನಿ, ಕ್ರುನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಆ್ಯಂಡ್ರೂ ಟೈ, ರವಿ ಬಿಶ್ನೋಯ್, ಆವೇಶ್ ಖಾನ್

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11
ಕೇನ್ ವಿಲಿಯಮ್ಸನ್(ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಆ್ಯಡಿನ್ ಮಕ್ರಮ್, ಅಬ್ದುಲ್ ಸಮಾದ್, ರೊಮಾರಿಯೋ ಶೆಫಾರ್ಡ್, ವಾಶಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್

Sports Awards: ಕರುಣ್ ನಾಯರ್, ಅಶ್ವಲ್ ರೈ, ಪ್ರಶಾಂತ್ ಕುಮಾರ್ ರೈಗೆ ಒಲಿದ ಏಕಲವ್ಯ ಪ್ರಶಸ್ತಿ

ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್‌ಜೈಂಟ್ಸ್ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಆಡಿದ 2 ಪಂದ್ಯಗಳಲ್ಲಿ 1 ಗೆಲುವು ಕಂಡಿರುವ ಲಖನೌ 2 ಅಂಕ ಸಂಪಾದಿಸಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಗ್ಗಿರಿಸಿದ ಲಖನೌ, ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ 6 ವಿಕೆಟ್ ಗೆಲುವು ಕಂಡಿತ್ತು.

ಸನ್‌ರೈಸರ್ಸ್ ಹೈದರಾಬಾದ್ ಅಂಕಪಟ್ಟಿಯಲ್ಲಿ ಕೊನೆಯ ಅಂದರೆ 10ನೇ ಸ್ಥಾನದಲ್ಲಿದೆ. ಈ ಆವೃತ್ತಿಯಲ್ಲಿ  ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯ ಆಡಿದ ಹೈದರಬಾದ್ 61 ರನ್‌ಗಳ ಸೋಲು ಕಂಡಿತ್ತು. 

IPL 2022: ಚೆನ್ನೈ ಸೂಪರ್ ಕಿಂಗ್ಸ್‌ ತಬ್ಬಿಬ್ಬು ಮಾಡಿದ ವೈಭವ್ ಅರೋರಾ ಯಾರು ಗೊತ್ತಾ..?

ಐಪಿಎಲ್ ಅಂಕಪಟ್ಟಿ
IPL 2022 ಅಂಕಪಟ್ಟಿಯಲ್ಲಿ ರಾಜಸ್ಥಾನ ರಾಯಲ್ಸ್ ಮೊದಲ ಸ್ಥಾನದಲ್ಲಿದೆ. 2 ಪಂದ್ಯದಲ್ಲಿ ಗೆಲುವು ಸಾಧಿಸಿ 4 ಅಂಕ ಸಂಪಾದಿಸಿರುವ ಸ್ಯಾಮ್ಸನ್ ಪಡೆ ಅಗ್ರಸ್ಥಾನ ಕಾಯ್ದುಕೊಂಡಿದೆ. ಇನ್ನು 3 ಪಂದ್ಯದಲ್ಲಿ 2 ಗೆಲುವು ಸಾಧಿಸಿರುವ ಕೋಲ್ಕತಾ ನೈಟ್ ರೈಡರ್ಸ್ 2ನೇ ಸ್ಥಾನದಲ್ಲಿದೆ. ಟೈಟಾನ್ಸ್ 2 ಪಂದ್ಯಗಳನ್ನು ಗೆದ್ದು 3ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ 3ರಲ್ಲಿ 2 ಗೆಲುವು ದಾಖಲಿಸಿ 4ನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ 5, ಲಖನೌ 6, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ 8, ಚೆನ್ನೈ ಸೂಪರ್ ಕಿಂಗ್ಸ್ 8 ಹಾಗೂ ಸನ್‌ರೈಸರ್ಸ್ ಹೈದರಾಬಾದ್ 10ನೇ ಸ್ಥಾನದಲ್ಲಿದೆ.

ಚೆನ್ನೈ ಹ್ಯಾಟ್ರಿಕ್‌ ಸೋಲು 
ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್‌್ಸ ಈ ವರ್ಷ ಐಪಿಎಲ್‌ನಲ್ಲಿ ಕಳಪೆ ಆರಂಭ ಪಡೆದುಕೊಂಡಿದೆ. ಭಾನುವಾರ ಪಂಜಾಬ್‌ ಕಿಂಗ್‌್ಸ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ 54 ರನ್‌ ಸೋಲು ಅನುಭವಿಸಿತು. ಇದರೊಂದಿಗೆ ಈ ಆವೃತ್ತಿಯಲ್ಲಿ ಸತತ 3ನೇ ಸೋಲು ಕಂಡು ಮತ್ತಷ್ಟುಒತ್ತಡಕ್ಕೆ ಸಿಲುಕಿದೆ.ಟಾಸ್‌ ಸೋತು ಬ್ಯಾಟಿಂಗ್‌ ಇಳಿಸಲ್ಟಟ್ಟಪಂಜಾಬ್‌ ಆಕ್ರಮಣಕಾರಿ ಆಟದ ಮೂಲಕ 20 ಓವರಲ್ಲಿ 8 ವಿಕೆಟ್‌ಗೆ 180 ರನ್‌ ಗಳಿಸಿತು. ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಚೆನ್ನೈ 18 ಓವರಲ್ಲಿ 126 ರನ್‌ಗೆ ಆಲೌಟ್‌ ಆಯಿತು.ಪಂಜಾಬ್‌ ಬೌಲರ್‌ಗಳ ದಾಳಿಗೆ ಚೆನ್ನೈ ಬ್ಯಾಟರ್‌ಗಳ ಬಳಿ ಉತ್ತರವಿರಲಿಲ್ಲ. ಋುತುರಾಜ್‌ ತಮ್ಮ ಕಳಪೆ ಲಯ ಮುಂದುವರಿಸಿದರೆ, 2 ಬೌಂಡರಿ ಬಾರಿಸಿ ಭರವಸೆ ಮೂಡಿಸಿದ ಉತ್ತಪ್ಪ 13 ರನ್‌ಗೆ ಔಟಾದರು. ಮೋಯಿನ್‌ ಅಲಿ ಸೊನ್ನೆಗೆ ನಿರ್ಗಮಿಸಿದರು. ಯುವ ವೇಗಿ ವೈಭವ್‌ ಅರೋರಾ ತಮ್ಮ ಆಕರ್ಷಕ ಆರಂಭಿಕ ಸ್ಪೆಲ್‌ನಲ್ಲೇ ಪಂಜಾಬ್‌ ಮೇಲುಗೈ ಸಾಧಿಸಲು ನೆರವಾದರು. 36 ರನ್‌ಗೆ 5 ವಿಕೆಟ್‌ ಕಳೆದುಕೊಂಡ ಚೆನ್ನೈ ಮತ್ತೆ ಚೇತರಿಕೆ ಕಾಣಲು ಪರದಾಡಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್‌, ಆಫ್ಘನ್‌ಗೆ ಟಿ20 ಪಂದ್ಯಗಳೇ ಇಲ್ಲ! ಯಾಕೆ?
ಭಾರತ-ದಕ್ಷಿಣ ಆಫ್ರಿಕಾ 2ನೇ ಟಿ20: ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ!